Back
Home » Car News
ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ
DriveSpark | 11th Jul, 2018 06:21 PM
 • ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ

  ಎಸ್‌ಯುವಿ ವಿಭಾಗಕ್ಕೆ ವಿನೂತನ ಕಾರು ಮಾದರಿಯನ್ನು ಪರಿಚಯಿಸಲು ಸಿದ್ದವಾಗುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಬಹುನೀರಿಕ್ಷಿತ ಕಾರನ್ನು ಹೆಚ್5ಎಕ್ಸ್ ಎಂಬ ಕೋಡ್ ಆಧಾರದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಇದೀಗ ಹೊಸ ಕಾರಿನ ಅಧಿಕೃತ ಹೆಸರನ್ನು ಬಹಿರಂಗ ಮಾಡುವ ಮೂಲಕ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

 • ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ

  ಅಧಿಕೃತ ಮಾಹಿತಿ ಪ್ರಕಾರ ಟಾಟಾ ಹೆಚ್‌5ಎಕ್ಸ್ ಕೋಡ್ ಮಾದರಿಗೆ 'ಹ್ಯಾರಿಯರ್' ಎಂದು ನಾಮಕರಣ ಮಾಡಲಾಗಿದ್ದು, ಕಾರಿನ ಎಂಜಿನ್ ವೈಶಿಷ್ಟ್ಯತೆ, ಕಾರಿನ ವಿನ್ಯಾಸಗಳ ಆಧಾರದ ಮೇಲೆ ಹ್ಯಾರಿಯರ್ ಎಂದು ನಾಮಕರಣ ಮಾಡಲಾಗಿದೆ.

 • ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ

  ಇನ್ನೊಂದು ಪ್ರಮುಖ ವಿಚಾರ ಅಂದ್ರೆ ಟಾಟಾ ಹೊಸ ಕಾರಿಗೆ ನಾಮಕರಣ ಮಾಡಲಾಗುತ್ತಿರುವ ಹ್ಯಾರಿಯರ್ ಹೆಸರಿನ ಟೊಯೊಟಾ ಕಾರು ಮಾದರಿಯೊಂದು ಈಗಾಗಲೇ ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಹೀಗಿದ್ದರೂ ಟಾಟಾ ಸಂಸ್ಥೆಯು ತನ್ನ ಹೊಸ ಕಾರಿಗೆ ಹ್ಯಾರಿಯರ್ ಹೆಸರನ್ನೇ ನಿಗದಿ ಮಾಡಿದೆ.

 • ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ

  ಜೊತೆಗೆ ಹ್ಯಾರಿಯರ್ ಹೆಸರನ್ನು ಟಾಟಾ ಸಂಸ್ಥೆಯು ಭಾರತದಲ್ಲಿ ಬಳಕೆ ಮಾಡಲು ಯಾವುದೇ ಕಾನೂನು ಅಡೆತಡೆ ಇಲ್ಲ ಎನ್ನಲಾಗಿದ್ದು, ಭಾರತವನ್ನು ಹೊರತುಪಡಿಸಿ ವಿದೇಶಿ ಮಾರುಕಟ್ಟೆಗಳಲ್ಲಿ ಹೊಸ ಕಾರು ಮಾರಾಟ ಮಾಡುವುದಾದರೇ ಮಾತ್ರ ಬದಲಿ ನಾಮಕರಣ ಮಾಡಲೇಬೇಕಾಗುತ್ತದೆ.

 • ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ

  ಇನ್ನು ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ವಿನ್ಯಾಸಗಳು ಅದ್ಭುತವಾಗಿವೆ.

 • ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ

  ಇದರಲ್ಲಿ ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ (ಜಾಗ್ವಾರ್, ಲ್ಯಾಂಡ್ ರೋವರ್, ರೇಂಜ್ ರೋವರ್) ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಲಾಗಿದೆ.

 • ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ

  ಕಾರಿನ ವೈಶಿಷ್ಟ್ಯತೆಗಳು
  ಹೆಚ್5ಎಕ್ಸ್ ಮಾದರಿಗಳು ಸ್ಲಿಕ್ ಆ್ಯಂಗರಲ್ ಎಲ್‌ಇಡಿ ಹೆಡ್ ಲೈಟ್ಸ್‌ಗಳನ್ನು ಹೊಂದಿದ್ದು, ಇಂಪ್ಯಾಕ್ಟ್ ಡಿಸೈನ್ ಗ್ರೀಲ್‌ಗಳು ಕಾರಿನ ಲುಕ್ ಹೆಚ್ಚಿಸಿವೆ. ಜೊತೆಗೆ ಪರಿಕಲ್ಪನೆ ಮಾದರಿಯನ್ನು ಗ್ರೇ ಪೇಟಿಂಗ್ ವಿನ್ಯಾಸಗಳು ಗಮನಸೆಳೆಯುತ್ತಿದ್ದು, ದೊಡ್ಡದಾದ ಚಕ್ರಗಳು, ವಿಸ್ತರಿತ ಬೂಟ್ ಸ್ಪೆಸ್ ಬಳಕೆ ಮಾಡಲಾಗಿದೆ.

 • ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ

  ಜೊತೆಗೆ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಶಾರ್ಪ್ ಮಾದರಿಯ ರಿರ್ ವೀಂಡ್ ಸ್ಕ್ರೀನ್‌ಗಳನ್ನು ಅದ್ಭುತವಾಗಿ ಡಿಸೈನ್ ಮಾಡಲಾಗಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ನೆಕ್ಸಾನ್ ಆವೃತ್ತಿಗಿಂತ ಹೆಚ್ಚಿನ ಗುಣ ವಿನ್ಯಾಸ ಹೊಂದಿರುವ ಹ್ಯಾರಿಯರ್ ಕಾರುಗಳು ಎಸ್‌ಯುವಿ ಪ್ರಿಯರ ಹಾಟ್ ಫೆವರಿಟ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

 • ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ

  ಎಂಜಿನ್ ಸಾಮರ್ಥ್ಯ
  ಹ್ಯಾರಿಯರ್ ಎಸ್‌ಯುವಿ ಮಾದರಿಗಳ ಎಂಜಿನ್ ಬಗೆಗೆ ಟಾಟಾ ಯಾವುದೇ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲವಾದರೂ ಕೆಲವು ವರದಿಗಳ ಪ್ರಕಾರ 2.0-ಲೀಟರ್ ಪೆಟ್ರೋಲ್ ಎಂಜಿನ್ ಅಥವಾ 2.0-ಲೀಟರ್ ಮಲ್ಟಿ ಜೆಟ್ ಡೀಸೆಲ್ ಎಂಜಿನ್ ಮಾದರಿಯಲ್ಲಿ ಹೊಸ ಕಾರುಗಳು ಅಭಿವೃದ್ಧಿಯಾಗಲಿವೆ.

 • ಹ್ಯಾರಿಯರ್ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಟಾಟಾ ಹೊಸ ಎಸ್‌ಯುವಿ

  ಕಾರಿನ ಬೆಲೆಗಳು (ಅಂದಾಜು)
  ಟಾಟಾ ಹ್ಯಾರಿಯರ್ ಕಾರುಗಳು 2018ರ ಕೊನೆಯಲ್ಲಿ ಇಲ್ಲವೇ 2019ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, ಹೊಸ ಕಾರಿನ ಬೆಲೆಗಳು ರೂ. 12 ಲಕ್ಷದಿಂದ ರೂ. 15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
ಸದ್ಯ ಕಾರುಗಳ ಉತ್ಪಾದನೆಯಲ್ಲಿ ಸ್ವಾಯತ್ತತೆ ಕಾಯ್ದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಹಲವು ಬಗೆಯ ಗೇಮ್ ಚೇಂಜರ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿದ್ದು, ಇದರಲ್ಲಿ ಹ್ಯಾರಿಯರ್ ಹೆಸರಿನ ವಿನೂತನ ಎಸ್‌ಯುವಿ ಮಾದರಿಯು ಟಾಟಾ ಸಂಸ್ಥೆಯನ್ನು ಮತ್ತಷ್ಟು ಜನಪ್ರಿಯಗೊಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಹೆಲ್ತ್