Back
Home » ಸುದ್ದಿ
ಬಸ್‌ ಪ್ರಯಾಣ ದರ ಹೆಚ್ಚಳ ಪ್ರಸ್ತಾವಕ್ಕೆ ಕುಮಾರಸ್ವಾಮಿ ನಕಾರ
Oneindia | 12th Oct, 2018 03:30 PM

ಬೆಂಗಳೂರು, ಅಕ್ಟೋಬರ್ 12: ಯಾವುದೇ ಕಾರಣಕ್ಕೂ ಬಸ್ ಪ್ರಯಾಣ ದರ ಏರಿಸಬೇಡಿ ಎಂದು ಹೇಳಿರುವ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಾರಿಗೆ ಇಲಾಖೆ ಸಲ್ಲಿಸಿದ್ದ ಶೇ.16ರಷ್ಟು ಬಸ್ ಪ್ರಯಾಣ ದರ ಹೆಚ್ಚಳ ಪ್ರಸ್ತಾವನೆಯನ್ನು ತಳ್ಳಿ ಹಾಕಿದ್ದಾರೆ.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪೆಟ್ರೋಲ್ ಡೀಸೆಲ್ ದರ ಏರಿಕೆಯಾದ ಹಿನ್ನೆಲೆಯಲ್ಲಿ ಎಲ್ಲಾ ನಾಲ್ಕು ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿವೆ ಎಂದು ಶೇ.18ರಷ್ಟು ಪ್ರಯಾಣ ದರವನ್ನು ಏರಿಕೆ ಮಾಡಲು ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

ಪ್ರಯಾಣಿಕರೆ ಸ್ವಲ್ಪ ನಿಟ್ಟುಸಿರು ಬಿಡಿ, ಬಸ್‌ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ

ಆದರೆ ಅದೇ ಸಂದರ್ಭದಲ್ಲಿ ಇಂಧನ ದರ 2 ನಷ್ಟು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಬಸ್ ಪ್ರಯಾಣ ಏರಿಕೆ ಬೇಡ ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದರೂ ಆದರೂ ಸಾರಿಗೆ ಇಲಾಖೆಯು ಶೇ.16 ರಷ್ಟು ಏರಿಕೆ ಮಾಡುವಂತೆ ಮತ್ತೆ ಪ್ರಸ್ತಾವನೆ ಸಲ್ಲಿಸಿತ್ತು.

ಬಸ್ ಪ್ರಯಾಣ ದರ ಏರಿಕೆ ಆದೇಶಕ್ಕೆ ಬ್ರೇಕ್ ಹಾಕಿದ ಕುಮಾರಸ್ವಾಮಿ

ಸತತ ಎರಡು ಬಾರಿ ಸಾರಿಗೆ ಇಲಾಖೆಯೊಂದಿಗಿನ ಸಭೆಯನ್ನು ಮುಂದೂಡಲಾಗಿತ್ತು. ಆದರೆ ಶುಕ್ರವಾರ ನಡೆದ ಸಭೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆಯನ್ನು ಕುಮಾರಸ್ವಾಮಿ ತಳ್ಳಿ ಹಾಕಿದ್ದು, ಯಾವುದೇ ಕಾರಣಕ್ಕೂ ಬಿಎಂಟಿಸಿ ಸೇರಿದಂತೆ ಯಾವುದೇ ನಿಗಮಗಳು ಬಸ್ ಪ್ರಯಾಣ ದರವನ್ನು ಏರಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

   
 
ಹೆಲ್ತ್