Back
Home » ಸುದ್ದಿ
ಸಂಪುಟ ವಿಸ್ತರಣೆ : ಡಿ.ಕೆ.ಶಿವಕುಮಾರ್ ಭೇಟಿಯಾದ ಎಂ.ಬಿ.ಪಾಟೀಲ್
Oneindia | 6th Dec, 2018 07:30 PM

ಬೆಂಗಳೂರು, ಡಿಸೆಂಬರ್ 06 : ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಗುರುವಾರ ಎಂ.ಬಿ.ಪಾಟೀಲ್ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಸರ್ಕಾರದ ವಿರುದ್ಧ ಹಿರಿಯ ನಾಯಕರು ಅಸಮಾಧಾನಗೊಂಡಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್ ಎಂ.ಬಿ.ಪಾಟೀಲ್‌ ಜೊತೆ ಮಾತುಕತೆ ನಡೆಸಿದರು.

ಸಂಪುಟ ವಿಸ್ತರಣೆ ವಿಳಂಬ, ಮಂತ್ರಿ ಸ್ಥಾನ ಆಕಾಂಕ್ಷಿಗಳಿಗೆ ಅಸಮಾಧಾನ

ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಸಭೆ ನಡೆಸಿ, ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದರು. ಡಿಸೆಂಬರ್ 22ರಂದು ಸಂಪುಟ ವಿಸ್ತರಣೆ ಮಾಡುವುದಾಗಿ ಈಗಾಗಲೇ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ: ಸಮನ್ವಯ ಸಮಿತಿ ನಿರ್ಣಯ

ಜೆಡಿಎಸ್-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಎಂ.ಬಿ.ಪಾಟೀಲ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಸಚಿವ ಸ್ಥಾನ ಸಿಕ್ಕಿರಲಿಲ್ಲ. ಈಗ ಸಂಪುಟ ವಿಸ್ತರಣೆ ಸಮಯಲ್ಲಿ ಹಿರಿಯ ನಾಯಕರಿಗೆ ಮನ್ನಣೆ ನೀಡಬೇಕು ಎಂಬುದು ಬೇಡಿಕೆಯಾಗಿದೆ.

ಸಂಪುಟ ವಿಸ್ತರಣೆ : ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನವಿಲ್ಲ?

ಎಸ್.ಆರ್.ಪಾಟೀಲ್, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್ ಮತ್ತು ರಾಮಲಿಂಗಾ ರೆಡ್ಡಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, ಈ ನಾಯಕರಿಗೆ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ಆದ್ದರಿಂದ, ಅಸಮಾಧಾನವಿದೆ.

ಹಿರಿಯ ನಾಯಕರಿಂದ ಪಕ್ಷಕ್ಕೆ ಮುಜುಗರ ಆಗಬಾರದು ಎಂದು ಡಿ.ಕೆ.ಶಿವಕುಮಾರ್ ಅವರು ಅಖಾಡಕ್ಕೆ ಇಳಿದಿದ್ದಾರೆ. ಆದ್ದರಿಂದ, ಎಂ.ಬಿ.ಪಾಟೀಲ್ ಜೊತೆ ಮಾತುಕತೆ ನಡೆಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರಿಗೂ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.

   
 
ಹೆಲ್ತ್