Back
Home » ಇತ್ತೀಚಿನ
ಬೆಂಗಳೂರು ಉದ್ಯಮಿಯ ಸಿಮ್ ನಕಲಿಸಿ 31 ಲಕ್ಷ ದೋಚಿದ ದುಷ್ಕರ್ಮಿಗಳು!..ಹೇಗೆ ಗೊತ್ತಾ?
Gizbot | 21st Jan, 2019 03:11 PM
 • ಏನಿದು ಶಾಕಿಂಗ್ ಘಟನೆ?

  ಮೊದಲೇ ಹೇಳಿದಂತೆ, ಕುಶಾ ಶೆಟ್ಟಿ ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಹತ್ತು ಬಾರಿ ಲಕ್ನೋ ಹಾಗೂ ಸೂರತ್ ಪ್ರದೇಶದಿಂದ 31 ಲಕ್ಷ ಹಣ ಡ್ರಾ ಮಾಡಲಾಗಿದೆ. ಸಿಮ್ ಅನ್ನು ನಕಲಿಸಿ ಮೊಬೈಲ್ ವಾಲೆಟ್ ಮತ್ತು ಒಟಿಪಿ ಹಣ ವರ್ಗಾವಣೆಯ ಮೂಲಕ ಹಣವನ್ನು ದೋಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗ ಆರೋಪಿಗಳ ಹಿಂದೆ ಬಿದ್ದಿದ್ದಾರೆ.


 • ಏರ್‌ಟೆಲ್ ಮೇಲೆ ಕೆಂಡಾಮಂಡಲ!

  ಹಣ ಕಳೆದುಕೊಂಡಿರುವ ಕುಶಾ ಶೇಟ್ಟಿ ಅವರು ತಾವು ಹಣ ಕಳೆದುಕೊಂಡಿದ್ದಕ್ಕಿಂತ ಹೆಚ್ಚು ಏರ್‌ಟೆಲ್ ಕಂಪೆನಿ ಮೇಲೆ ಕೆಂಡಕಾರುತ್ತಿದ್ದಾರೆ. ವಂಚನೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಮ್ ಕಾರ್ಡನ್ನ ಬಂದ್ ಮಾಡಬೇಕು ಎಂದು ಏರ್‌ಟೆಲ್ ಕಚೇರಿಗೆ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಮತ್ತು ಸರಿಯಾಗಿ ಸ್ಪಂದಿಸಿಲ್ಲ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.


 • ಹಣ ವಂಚನೆಯಾಗಿರುವುದು ಹೇಗೆ?

  ಮೇಲ್ನೋಟಕ್ಕೆ ಇದು ಸಿಮ್‌ಸ್ವಾಪ್ ವಂಚನೆ ಎಂಬುದು ಸ್ಪಷ್ಟವಾಗಿದೆ. ಸಿಮ್ ಅನ್ನು ನಕಲಿಸಿ ಮೊಬೈಲ್ ವಾಲೆಟ್ ಮತ್ತು ಒಟಿಪಿ ಹಣ ವರ್ಗಾವಣೆಯ ಮೂಲಕ ಹಣವನ್ನು ದೋಚಬಹುದಾದ ವಂಚನೆ ಮಾರ್ಗ ಇದಾಗಿದೆ. ಹಾಗಾದರೆ, ಈ ಭಯಾನಕ ಸಿಮ್‌ಸ್ವಾಪ್ ಎಂಬ ವಂಚನೆ ನಡೆಯುವುದು ಹೇಗೆ ಮತ್ತು ನೀವು ಹೇಗೆ ಎಚ್ಚರವಾಗಿರಬೇಕು ಎಂಬುದನ್ನು ಮುಂದೆ ಓದಿ ತಿಳಿಯಿರಿ.


 • ಏನಿದು 'ಸಿಮ್ ಸ್ವ್ಯಾಪ್' '?

  'ಸಿಮ್ ಸ್ವ್ಯಾಪ್' ಎಂದರೇ, 'ನಿಮ್ಮ ಬಳಿ ಈಗಾಗಲೇ ಇರುವ ಫೋನ್‌ ನಂಬರ್‌ ಅನ್ನು ಹೊಸ ಸಿಮ್ ಕಾರ್ಡ್‌ಗೆ ನೋಂದಣಿ ಮಾಡಿಸುವುದು' ಎಂದರ್ಥ. ಈ ಕೆಲಸವನ್ನು ನೀವೇ ಮಾಡಿದ್ದರೆ ಯಾವ ತೊಂದರೆಯಿಲ್ಲ. ಆದರೆ, ನಿಮ್ಮ ಮಾಹಿತಿಯನ್ನು ಕದ್ದಿರುವ ಅಪರಿಚಿತರು ಈ ಕೆಲಸ ಮಾಡಿದರೆ ನಿಮ್ಮ ಬ್ಯಾಂಕ್ ಖಾತೆ ಕ್ಷಣಾರ್ಧದಲ್ಲಿ ಖಾಲಿಯಾಗುವ ಹಗರಣ ಇದಾಗಿದೆ.!


 • ಏನಿದು ಸಿಮ್ ಸ್ವ್ಯಾಪ್ ಹಗರಣ?

  ಸಿಮ್ ಬಳಸಿಕೊಂಡು ನಡೆಯುತ್ತಿರುವ ಮೊಬೈಲ್ ವಾಲೆಟ್ ಸೇವೆ ಹೆಚ್ಚು ಬಳಕೆಗೆ ಬಂದ ನಂತರ ಸೈಬರ್ ಕ್ರಿಮಿನಲ್‌ಗಳು ಈಗ ಸಿಮ್ ಅನ್ನು ಸಹ ನಕಲು ಮಾಡಹೊರಟಿದ್ದಾರೆ. ನಿಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮಾಹಿತಿಯನ್ನು ಹೇಗಾದರೂ ಪಡೆದುಕೊಂಡಿರುವ ಅವರಿಗೆ ಬೇಕಾಗಿರುವುದು ಒಟಿಪಿ ಮಾತ್ರ. ಅದಕ್ಕಾಗಿಯೇ ನಡೆಯುತ್ತಿರುವುದು 'ಸಿಮ್ ಸ್ವ್ಯಾಪ್' ಹಗರಣ.


 • 'ಸಿಮ್ ಸ್ವ್ಯಾಪ್'ನ ಹೆಜ್ಜೆಗಳು!

  ನಿಮ್ಮ ಫೋನ್ ನಂಬರ್ ಅನ್ನು ಬ್ಲಾಕ್ ಮಾಡಿ, ಅದೇ ನಂಬರ್‌ನ ಹೊಸ ಸಿಮ್ ಖರೀದಿಸುವುದು ವಂಚಕರ ಮೊದಲ ಹೆಜ್ಜೆಯಾಗಿರುತ್ತದೆ. ಅದಕ್ಕಾಗಿ ಅವರು ನಿಮ್ಮ ದಾಖಲೆಗಳನ್ನು ಹುಡುಕಬಹುದು ಅಥವಾ ನಿಮ್ಮಿಂದಲೇ ಸಿಮ್ ಅನ್ನು ಅವರು ನಕಲಿಸಿಕೊಳ್ಳಬಹುದು. ಈ ಎರಡೂ ರೀತಿಯಿಂದಲೂ ಅವರು ನಿಮ್ಮನ್ನು ಕ್ಷಣಾರ್ಧದಲ್ಲಿ ಮೋಸಗೊಳಿಸಬಹುದು.


 • ವಿಶಿಷ್ಟ 20 ಡಿಜಿಟ್ ನಂಬರ್‌

  ಕಾಲ್‌ಡ್ರಾಫ್ಸ್ ಸೇರಿದಂತೆ ಕರೆ ಸೇವೆಯವನ್ನು ಮತ್ತಷ್ಟು ಸುಲಭಗೊಳಿಸುತ್ತೇವೆ ಎಂದು ನಿಮಗೊಂದು ಕರೆ ಬರುತ್ತದೆ. ಕಸ್ಟಮರ್ ಕೇರ್‌ ಸೂಗಿನಲ್ಲಿ ಕರೆ ಮಾಡುವ ಇವರು ಕರೆ ಮಾಡುವುದೇ ನಿಮ್ಮ ಸಿಮ್ ಹಿಂಬದಿಯ ನಂಬರ್‌ ಯಾವುದೆಂದು ತಿಳಿದುಕೊಳ್ಳಲು. ಒಮ್ಮೆ ನೀವು ಅವರ ಆದೇಶವನ್ನು ಚಾಚು ತಪ್ಪದೆ ಪಾಲಿಸಿದರೆ ಒಂದನ್ನು ಪ್ರೆಸ್‌ ಮಾಡಲು ಹೇಳುತ್ತಾರೆ!


 • ಅಧಿಕೃತವಾಗಿ ಹೊಸ ಸಿಮ್

  ನಿಮ್ಮ ಸಿಮ್‌ನ 20 ಡಿಜಿಟ್ ಸಂಖ್ಯೆ ಪಡೆದ ವಂಚಕ, ಅಧಿಕೃತವಾಗಿ ಹೊಸ ಸಿಮ್ ಪಡೆಯಲು ಮುಂದಾಗುತ್ತಾನೆ. ಆಗ, ನಿಮ್ಮ ಫೋನ್‌ಗೆ ಟೆಲಿಕಾಂ ಕಂಪೆನಿಯಿಂದ ಕನ್ಫರ್ಮೇಷನ್ ಎಸ್‌ಎಂಎಸ್‌ ಬರುತ್ತದೆ. ಆಗ ವಂಚಕ, ನಿಮಗೆ ಕರೆ ಮಾಡಿ ಒಂದನ್ನು ಪ್ರೆಸ್‌ ಮಾಡಲು ಸೂಚಿಸುತ್ತಾನೆ. ನೀವು ಒತ್ತಿದರೆ, ನಿಮ್ಮ ಸಿಮ್ ಬ್ಲಾಕ್ ಆಗಿ ಅವನ ಬಳಿ ನಿಮ್ಮ ಸಿಮ್ ಇರುತ್ತದೆ.


 • ಕಳೆದುಕೊಳ್ಳುತ್ತೀರಾ

  ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮಾಹಿತಿಯನ್ನು ಪಡೆದ ವಂಚಕರು ಎಟಿಎಂ ಕಾರ್ಡ್‌ನಲ್ಲಿರುವ "ಸಿವಿವಿ" ನಂಬರ್ ಮೂಲಕ ಆನ್‌ಲೈನ್ ವ್ಯವಹಾರ ಮಾಡುತ್ತಾರೆ. ಈಗ ಸಿವಿವಿ ನಂಬರ್ ಮತ್ತು ಮೊಬೈಲ್ ಒಟಿಪಿ ಇದ್ದರೆ ಆನ್‌ಲೈನಿನಲ್ಲಿ ಹಣ ವರ್ಗಾವಣೆ ಕ್ಷಣಾರ್ಧದಲ್ಲಿ ನಡೆಯುತ್ತದೆ. ಈ ಎರಡು ಮಾಹಿತಿಗಳನ್ನು ನಿಮ್ಮಿಂದ ಪಡೆದ ಅವರು ನಿಮ್ಮ ಹಣ ದೋಚುತ್ತಾರೆ.


 • ಎಟಿಎಂ ಕಾರ್ಡ್ ಮಾಹಿತಿ ಅವರಿಗೆ ಸಿಗುವುದು ಹೇಗೆ?

  ನಕಲಿ ವೆಬ್‌ಸೈಟ್‌ ಅನ್ನು ತೆರೆಯುವ ಕ್ರಿಮಿನಲ್‌ಗಳು ನಿಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್‌ಗಳ ಮೂಲಕ ಪಾವತಿ ಮಾಡಲು ಪ್ರೇರೇಪಿಸುತ್ತಾರೆ. ಒಮ್ಮೆ ವ್ಯವಹಾರ ನಡೆದರೆ ನಿಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮಾಹಿತಿ ಪಡೆಯುತ್ತಾರೆ. ಅಥವಾ ಕರೆ ಮಾಡಿ ನಿಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ, ತೆರೆಯಲು ಕಾರ್ಡ್ ಮಾಹಿತಿ ನೀಡಿ ಎಂದು ಹೇಳುತ್ತಾರೆ.


 • ಟೆಲಿಕಾಂ ಕಂಪನಿಯ ಪ್ರತಿನಿಧಿ

  ವಂಚಕರು ಟೆಲಿಕಾಂ ಕಂಪನಿಯ ಪ್ರತಿನಿಧಿಗಳೆಂದು ಹೇಳಿಕೊಂಡು ನಿಮಗೆ ಕರೆ ಮಾಡುತ್ತಾರೆ. ಕಾಲ್‌ ಡ್ರಾಪ್‌ ಪ್ಲಾಬ್ಲೆಮ್ ಅಥವಾ ಸಿಗ್ನಲ್‌ ಪ್ರಾಬ್ಲೆಮ್ ಸರಿಪಡಿಸಲು ಕಾಲ್‌ ಮಾಡುತ್ತಿರುವುದಾಗಿ ಹೇಳುತ್ತಾರೆ. ಅಥವಾ 4ಜಿ ಸಿಮ್ ಕಾರ್ಡ್‌ಗೆ ಬದಲಾಗಲು ನಿಮ್ಮ ಸಿಮ್ ಸಂಖ್ಯೆ ನೀಡಲು ಕೇಳುತ್ತಾರೆ. ಇಂತಹ ಕರೆಗಳನ್ನು ನಂಬಬೇಡಿ.


 • ಸಿಮ್ ತೆಗೆದಿಟ್ಟುಕೊಳ್ಳಿ!

  ಕ್ರೆಡಿಟ್ ಕಾರ್ಡ್- ಡೆಬಿಟ್ ಕಾರ್ಡುಗಳನ್ನು ಜೋಪಾನವಾಗಿ ಇಟ್ಟುಕೊಳ್ಳುವಂತೆ, ನಾವು ಬಳಸುವ ಸಿಮ್ ಬಗೆಗೂ ಅಷ್ಟೇ ಎಚ್ಚರಿಕೆ ವಹಿಸುವುದು ಒಳ್ಳೆಯದು. ಸಿಮ್ ಅನ್ನು ಮೊಬೈಲಿನಿಂದ ಹೊರತೆಗೆದಾಗ ಅದನ್ನು ಸುರಕ್ಷಿತ ಸ್ಥಳದಲ್ಲಿ ಇಟ್ಟಿರುವುದು ಮತ್ತು ಮೊಬೈಲ್ ಫೋನನ್ನು ರಿಪೇರಿಗೆಂದು ಕೊಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಸಿಮ್ ತೆಗೆದಿಟ್ಟುಕೊಳ್ಳುವುದು ಅಪೇಕ್ಷಣೀಯ. ಈ ಮೂಲಕ ನಮ್ಮ ಸಿಮ್ ಮಾಹಿತಿಯನ್ನು ಬೇರೊಬ್ಬರು ನಕಲಿಸಿ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಬಹುದು.


 • ಪಾರಾಗುವುದು ಸಾಧ್ಯವಿದೆ!

  ಮೊಬೈಲ್‌ನ ಎಲ್ಲಾ ಚಟುವಟಿಕೆಗಳ ಬಗ್ಗೆ ನಿಗಾವಹಿಸುವ ಮೂಲಕ ಇಂತಹ ಹಗರಣದಿಂದ ಪಾರಾಗುವುದು ಸಾಧ್ಯ. ಯಾವುದೇ ಸಂದರ್ಭದಲ್ಲಿ ನಮ್ಮ ಸಂಪರ್ಕ ಸ್ಥಗಿತವಾದರೆ, ಬಿಲ್‌ನಲ್ಲಿ ಅಪರಿಚಿತ ಚಟುವಟಿಕೆಗಳು ಕಾಣಿಸಿಕೊಂಡರೆ ತಕ್ಷಣವೇ ಮೊಬೈಲ್ ಟೆಲಿಕಾಂ ಕಂಪೆನಿ ಸಂಪರ್ಕಿಸಿ ಸಿಮ್ ಬ್ಲಾಕ್ ಮಾಡಿಸಿ. ಮತ್ತು ಎಟಿಎಂ ಅನ್ನು ಸಹ ಬ್ಲಾಕ್ ಮಾಡಿಬಿಡಿ.


 • ಸಿಮ್ ಸ್ವ್ಯಾಪ್ ಅನ್ನು ನೀವು ಮಾಡಿರುತ್ತೀರಿ!

  ಹಾಗೆ ನೋಡಿದರೆ, ಮೇಲೆ ಹೇಳಿದ ಸಿಮ್ ಸ್ವ್ಯಾಪ್ ಎಂದರೆ ಹಗರಣ ಎಂದು ತಿಳಿಯುತ್ತಿರಲಿಲ್ಲ. ನೀವು 2ಜಿಯಿಂದ 3ಜಿ ಅಥವಾ 4ಜಿ ಸಿಮ್‌ ಬದಲಾಯಿಸಿಕೊಂಡಿದ್ದನ್ನು ಸಹ ಸಿಮ್ ಸ್ವ್ಯಾಪ್ ಎಂದು ಕರೆಯುತ್ತಾರೆ. ಆದರೆ, ಇಲ್ಲಿ ವಂಚಕರು ನಿಮ್ಮ ಸಿಮ್ ಅನ್ನು ಸ್ವ್ಯಾಪ್ ಮಾಡುತ್ತಿರುವುದಕ್ಕೆ ಇದು ಸಿಮ್ ಸ್ವ್ಯಾಪ್ ಹಗರಣ ಎಂದು ಬದಲಾಗಿದೆ.
ಉದ್ಯಮಿಯೋರ್ವರ ಸಿಮ್ ಕಾರ್ಡ್ ಅನ್ನು ನಕಲು ಮಾಡಿ ಬರೋಬ್ಬರಿ 31 ಲಕ್ಷ ದೋಚಿ ದುಷ್ಕರ್ಮಿಗಳು ತಲೆ ಮರೆಸಿಕೊಂಡಿರುವ ಕೃತ್ಯ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪೀಣ್ಯ ಬಳಿಯ ಎಸ್ ಹೀಟ್ ಟ್ರಾನ್ಸ್ಫರ್ಸ್ ಮಾಲೀಕ ಕುಶಾ ಶೆಟ್ಟಿಯ ಸಿಮ್ ನಕಲಿಸಿರುವ ದುಷ್ಕರ್ಮಿಗಳು ಬರೋಬ್ಬರಿ 31 ಲಕ್ಷ ಹಣ ಡ್ರಾ ಮಾಡಿ ತಲೆ ಮರೆಸಿಕೊಂಡಿದ್ದಾರೆ.

ಕುಶಾ ಶೆಟ್ಟಿ ಅವರು ವಿದೇಶಕ್ಕೆ ತೆರಳುವ ಸಂದರ್ಭವನ್ನೇ ಕಾಯುತ್ತಿದ್ದ ವಂಚಕರು, ಸಿಮ್‌ಸ್ವಾಪ್ ಮೂಲಕ ಅವರ ಸಿಮ್ ಅನ್ನು ಲಾಕ್ ಮಾಡಿಸಿದ್ದಾರೆ. ವಿದೇಶದಲ್ಲಿದ್ದ ಕುಶಾ ಶೆಟ್ಟಿ ಇದು ನೆಟ್‍ವರ್ಕ್ ಸಮಸ್ಯೆ ಇರಬಹುದು ಎಂದು ಭಾವಿಸಿ ಸುಮ್ಮನಾಗಿದ್ದಾರೆ. ಆದರೆ, ಅಲ್ಲಿಂದ ವಾಪಾಸ್ ಬೆಂಗಳೂರಿಗೆ ಬಂದು ನೋಡಿದಾಗ ಅವರ ಬ್ಯಾಂಕ್ ಖಾತೆಯಲ್ಲಿ 31 ಲಕ್ಷ ಖಾಲಿಯಾಗಿದೆ.

ಕೂಡಲೇ ಬ್ಯಾಂಕ್ ಅಕೌಂಟ್ ಸ್ಟೇಟ್‌ಮೆಂಟ್ ಪರಿಶೀಲನೆ ನಡೆಸಿ ಕುಶಾ ಶೆಟ್ಟಿ ತಮಗಾಗಿರುವ ವಂಚನೆಯ ಬಗ್ಗೆ ತಿಳಿದಿದ್ದಾರೆ. ಇನ್ನು ಇದೇ ವಿಚಾರವಾಗಿ ಏರ್‌ಟೆಲ್ ಕಂಪೆನಿ ಮೇಲೂ ಕೂಡ ಕುಶಾ ಶೆಟ್ಟಿ ಅವರು ಕೆಂಡಕಾರುತ್ತಿದ್ದಾರೆ. ಹಾಗಾದರೆ, ಏನಿದು ಶಾಕಿಂಗ್ ಘಟನೆ? ಕುಶಾ ಶೆಟ್ಟಿಯವರು ಹಣವನ್ನು ಕಳೆದುಕೊಂಡಿರುವುದು ಹೇಗೆ ಎಂಬುದನ್ನು ಮುಂದೆ ಓದಿ ತಿಳಿಯಿರಿ.

   
 
ಹೆಲ್ತ್