Back
Home » Car News
ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!
DriveSpark | 18th Apr, 2019 01:14 PM
 • ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!

  ದಕ್ಷಿಣ ಕೊರಿಯಾ ಮೂಲದ ಕಿಯಾ ಮೋಟಾರ್ಸ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಭಾರತೀಯ ಆಟೋ ಉದ್ಯಮದಲ್ಲಿ ಬಹುದೊಡ್ಡ ಬದಲಾವಣೆ ತರಲಿರುವ ಬಹುನೀರಿಕ್ಷಿತ ಕಾರು ಉತ್ಪಾದನಾ ಸಂಸ್ಥೆ ಅಂದ್ರೆ ತಪ್ಪಾಗುದಿಲ್ಲ. ಈಗಾಗಲೇ ಭಾರತದಲ್ಲಿ ಮೊದಲ ಹಂತವಾಗಿ ಬಿಡುಗಡೆಯಾಗುವ ತನ್ನ ಹೊಸ ಕಾರು ಉತ್ಪನ್ನಗಳ ಬಗ್ಗೆ ಮಾಹಿತಿ ಹೊರಹಾಕಿರುವ ಕಿಯಾ ಸಂಸ್ಥೆಯು ಸದ್ಯದಲ್ಲೇ ಮಾರುಕಟ್ಟೆಗೆ ಪ್ರವೇಶಿಸುವ ತವಕದಲ್ಲಿದೆ.

 • ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!

  ಕಿಯಾ ಇಂಡಿಯಾ ಸಂಸ್ಥೆಯು ವಿವಿಧ ಮಾದರಿಯ ಒಟ್ಟು 8 ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಇದರಲ್ಲಿ ಮೊದಲಿಗೆ ಮಾರುಕಟ್ಟೆಗೆ ಲಗ್ಗೆಯಿಡುವುದೇ ಎಸ್‌ಪಿ2ಐ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ವಿವಿಧ ಹಂತದ ಸ್ಪಾಟ್ ಟೆಸ್ಟಿಂಗ್‌ಗಳನ್ನು ನಡೆಸುತ್ತಿದೆ.

 • ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!

  ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ಕ್ರೆಟಾ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿರುವ ಎಸ್‌ಪಿಐ2 ಕಾರು ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸುವ ತವಕದಲ್ಲಿದ್ದು, ಹೊಸ ಕಾರು ಉತ್ಪಾದನೆಗೆ ಈಗಾಗಲೇ ಅಧಿಕೃತ ಚಾಲನೆ ಕೂಡಾ ಸಿಕ್ಕಿದೆ.

 • ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!

  ಎಸ್‌ಪಿ ಕಾನ್ಸೆಪ್ಟ್ ಮಾದರಿಯು ಹಲವು ವಿಶೇಷತೆಗಳೊಂದಿಗೆ ರಸ್ತೆಗಿಳಿಯುತ್ತಿದ್ದು, ಸಾಮಾನ್ಯ ಮಾದರಿಯ ಎಂಜಿನ್ ಮಾತ್ರವಲ್ಲದೇ ಸ್ಪೋರ್ಟಿ ವರ್ಷನ್‌ನಲ್ಲೂ ಹೊಸ ಎಸ್‌ಪಿ ಕಾನ್ಸೆಪ್ಟ್ ಕಾರನ್ನು ಬಿಡುಗಡೆ ಮಾಡುವುದಾಗಿ ಕಿಯಾ ಸಂಸ್ಥೆಯು ಸಂದರ್ಶನವೊಂದರಲ್ಲಿ ಮಾಹಿತಿ ಹಂಚಿಕೊಂಡಿದೆ. ಕಿಯಾ ಹೊಸ ಎಸ್‌ಯುವಿ ಕಾರು ಮಾದರಿಯು ಸುಧಾರಿತ ತಂತ್ರಜ್ಞಾನಗಳೊಂದಿಗೆ ಅಭಿವೃದ್ಧಿ ಹೊಂದಿದ್ದು, ಸಾಮಾನ್ಯ ಮಾದರಿಯಲ್ಲಿ ಡೀಸೆಲ್ ಆವೃತ್ತಿಯು 1.5-ಲೀಟರ್ ಎಂಜಿನ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಹೊಸ ಕಾರುಗಳು ಮಾರುಕಟ್ಟೆಗೆ ಪ್ರವೇಶ ಪಡೆಯಲಿವೆ.

 • ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!

  ಹಾಗೆಯೇ ಸ್ಪೋರ್ಟಿ ವರ್ಷನ್ ಮಾದರಿಯು 1.4-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದ್ದು, ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಎಂಜಿನ್‌ಗಿಂತಲೂ ಇದು ಪರ್ಫಾಮೆನ್ಸ್ ವಿಚಾರದಲ್ಲಿ ಹೆಚ್ಚು ಬಲಿಷ್ಠತೆಯನ್ನು ಹೊಂದಿರಲಿದೆ.

 • ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!

  ಜೊತೆಗೆ ಕಾರಿನ ಒಳಭಾಗದಲ್ಲಿ ಸಾಮಾನ್ಯ ಮಾದರಿಯ ಕಾರುಗಳಿಂತಲೂ ತುಸು ಸ್ಪೋರ್ಟಿ ಲುಕ್ ಹೊಂದಿರಲಿದ್ದು, ಹೆಚ್ಚುವರಿಯಾಗಿ ಆಫ್-ರೋಡ್ ಡ್ರೈವ್ ಮೊಡ್ ಸೌಲಭ್ಯಗಳು ಇದರಲ್ಲಿವೆ. ಹೀಗಾಗಿ ಸ್ಪೋರ್ಟಿ ಮಾದರಿಗಳನ್ನು ಇಷ್ಟಪಡುವ ಗ್ರಾಹಕರ ಆಯ್ಕೆಗೆ ಇದು ಸಹಕಾರಿಯಾಗಲಿದೆ.

 • ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!

  ಇದರೊಂದಿಗೆ ಸಾಮಾನ್ಯ ಮಾದರಿಯ ಕಾರು ಬೆಲೆಗಿಂತಲೂ ತುಸು ದುಬಾರಿ ಎನ್ನಿಸುವ ಸ್ಪೋರ್ಟಿ ವರ್ಷನ್ ಮಾದರಿಯು ಪರ್ಫಾಮೆನ್ಸ್ ಪ್ರಿಯರು ಇಷ್ಟಪಡುವ 140-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು ಎನ್ನಲಾಗಿದ್ದು, ಬೆಲೆಗಳು ಎಕ್ಸ್‌ಶೋರೂಂ ಪ್ರಕಾರ ರೂ.12 ಲಕ್ಷದಿಂದ ರೂ.16 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

 • ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!

  ಈ ಮೂಲಕ ಭಾರತದಲ್ಲಿ ಜನಪ್ರಿಯೊಂಡಿರುವ ಕ್ರೆಟಾ, ವಿಟಾರಾ ಬ್ರೆಝಾ ಮತ್ತು ಡಸ್ಟರ್ ಎಸ್‌ಯುವಿ ಆವೃತ್ತಿಗಳಿಗೆ ತೀವ್ರ ಸ್ಪರ್ಧೆ ಒಡ್ದಲಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ದೇಶಿಯ ಗ್ರಾಹಕರಿಗಾಗಿ ವಿವಿಧ ಕಾರುಗಳನ್ನು ಉತ್ಪಾದನೆ ಮಾಡಲು ಬರೋಬ್ಬರಿ 7 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದೆ.

 • ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!

  ಇದರ ಜೊತೆಗೆ ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಎಸ್‌ಯುವಿ, ಸೆಡಾನ್ ಮತ್ತು ಐಷಾರಾಮಿ ಕಾರುಗಳನ್ನು ಸಿದ್ದಗೊಳಿಸಿದ್ದು, ಇದರಲ್ಲಿ ಇನೋವಾ ಕ್ರಿಸ್ಟಾ ಕಾರುಗಳ ಪ್ರತಿಸ್ಪರ್ಧಿಯಾಗಿರುವ ಗ್ರ್ಯಾಂಡ್ ಕಾರ್ನಿವಾಲ್ ಕಾರಿನ ಮೇಲೆ ಭಾರೀ ನೀರಿಕ್ಷೆ ಇಟ್ಟುಕೊಳ್ಳಲಾಗಿದೆ.

 • ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಕಿಯಾ ಮೋಟಾರ್ಸ್ ಮೊದಲ ಕಾರು..!

  ಒಟ್ಟಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಬದಲಾವಣೆ ತರುವ ಉದ್ದೇಶದೊಂದಿದೆ ಬೃಹತ್ ಯೋಜನೆ ಹೊತ್ತು ಬಂದಿರುವ ಕಿಯಾ ಮೋಟಾರ್ಸ್ ಸಂಸ್ಥೆಯು ಮಾರುತಿ ಸುಜುಕಿ ಮತ್ತು ಹ್ಯುಂಡೈ ಸಂಸ್ಥೆಗಳಿಗೆ ತ್ರೀವ ಪೈಪೋಟಿ ನೀಡುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದೆ ಅಂದ್ರೆ ತಪ್ಪಾಗುವುದಿಲ್ಲ.
ಜಗತ್ತಿನ 8ನೇ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಭಾರತದಲ್ಲಿ ಪ್ರಥಮ ಬಾರಿಗೆ ತನ್ನ ವಾಣಿಜ್ಯ ಚಟುವಟಿಕೆಗಳಿಗೆ ಚಾಲನೆ ನೀಡುತ್ತಿದ್ದು, 2019ರ ಸೆಪ್ಟೆಂಬರ್ ಅಂತ್ಯಕ್ಕೆ ತನ್ನ ಮೊದಲ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಹೆಲ್ತ್