Back
Home » ಸುದ್ದಿ
ಐಟಿ ದಾಳಿ ವಿಚಾರ : ಡಿ.ಕೆ.ಶಿವಕುಮಾರ್ ಅರ್ಜಿಯ ತೀರ್ಪು ಜೂ.25ಕ್ಕೆ
Oneindia | 12th Jun, 2019 10:31 PM

ಬೆಂಗಳೂರು, ಜೂನ್ 12 : ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯ ಜೂನ್ 25ಕ್ಕೆ ಆದೇಶ ಕಾಯ್ದಿರಿಸಿದೆ. ಆದಾಯ ತೆರಿಗೆ ದಾಳಿ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು.

ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ತೀರ್ಪು ಕಾಯ್ದಿರಿಸಿದರು. ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈ ಬಿಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ದೆಹಲಿಯಲ್ಲಿ ಸಿಕ್ಕ ಹಣ ಡಿಕೆಶಿಗೆ ಸೇರಿದ್ದು : ಹೆಚ್ಚುವರಿ ಸಾಲಿಟರ್ ಜನರಲ್

ಬೆಂಗಳೂರು ಮತ್ತು ದೆಹಲಿಯ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ 2017ರಲ್ಲಿ ಐಟಿ ದಾಳಿ ನಡೆದಿತ್ತು. ದಾಳಿಯ ವೇಳೆ ನಿವಾಸಗಳಲ್ಲಿ 8.59 ಕೋಟಿಗೂ ಅಧಿಕ ಮೊತ್ತದ ಹಣ ಪತ್ತೆಯಾಗಿತ್ತು. ಈ ಹಣಕ್ಕೆ ಅಗತ್ಯ ದಾಖಲೆಗಳನ್ನು ನೀಡಿಲ್ಲ.

ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದೆ. ಜಾರಿ ನಿರ್ದೇಶನಾಲಯದ ಪರ ಹೆಚ್ಚುವರಿ ಸಾಲಿಟರ್ ಜನರಲ್ ಪ್ರಭುಲಿಂಗ ಕೆ.ನಾವಡಗಿ ವಾದ ಮಂಡನೆ ಮಾಡಿದ್ದಾರೆ.

ಆದಾಯ ತೆರಿಗೆ ಇಲಾಖೆ ದಾಳಿ : ಡಿಕೆಶಿಯಿಂದ ಸಾಕ್ಷಿ ನಾಶಕ್ಕೆ ಪ್ರಯತ್ನ

ಆರೋಪಿಗಳು ಆದಾಯ ತೆರಿಗೆ ಕಾಯ್ದೆ 1961ರ ಕಲಂ 276 ಸಿ (1) ಮತ್ತು 277ರ ಪ್ರಕಾರ ದಂಡನೀಯ ಅಪರಾಧ ಎಸಗಿದ್ದಾರೆ. ಹವಾಲಾ ಮೂಲಕ ಬೆಂಗಳೂರಿನಿಂದ ದೆಹಲಿಯ ಸಫ್ದರ್ ಜಂಗ್ ಎನ್ಕ್ಲೇವ್‌ಗೆ ಹಣ ಸ ಸಾಗಣೆ ಮಾಡಿದ್ದಾರೆ ಎಂದು ವಾದ ಮಂಡಿಸಿದ್ದಾರೆ.

ಡಿ.ಕೆ.ಶಿವಕುಮಾರ್ ವಿರುದ್ಧದ ಐಟಿ ತನಿಖೆಗೆ ಇದ್ದ ತಡೆ ತೆರವು

ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್, ಎನ್.ರಾಜೇಂದ್ರ ಮತ್ತು ಆಂಜನೇಯ, ಹನುಮಂತಯ್ಯ ಅವರು ಆರೋಪಿಗಳಾಗಿದ್ದಾರೆ. ಎಲ್ಲರೂ ಪ್ರಕರಣದಿಂದ ತಮ್ಮನ್ನು ಕೈ ಬಿಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

   
 
ಹೆಲ್ತ್