Back
Home » ಸುದ್ದಿ
ವಿಪ್ ತಿರಸ್ಕರಿಸಿ ಅಸೆಂಬ್ಲಿಗೆ ಚಕ್ಕರ್, ಮುಂಬೈನಲ್ಲೇ ರೆಬೆಲ್ಸ್!
Oneindia | 12th Jul, 2019 10:28 AM

ಮುಂಬೈ, ಜುಲೈ 12: ಕರ್ನಾಟಕದ ರಾಜೀನಾಮೆ ಹೈಡ್ರಾಮಾ ಮುಂದುವರೆದಿದ್ದು, ಜುಲೈ 12ರಿಂದ ಆರಂಭವಾಗಲಿರುವ ವಿಧಾನಸಭೆ ಅಧಿವೇಶನದಲ್ಲಿ ಅಂತ್ಯ ಕಾಣುವ ನಿರೀಕ್ಷೆಯಿದೆ. ಈ ನಡುವೆ ರೆಬೆಲ್ ಶಾಸಕರು, ಬಜೆಟ್ ಅಧಿವೇಶನಕ್ಕೆ ಗೈರಾಗುವುದು ಬಹುತೇಕ ಖಚಿತವಾಗಿದೆ.

ಸುಪ್ರೀಂಕೋರ್ಟ್‌ ಆದೇಶದಂತೆ ಗುರುವಾರ(ಜುಲೈ11)ದಂದು ಸಂಜೆ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಶಾಸಕರು, ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದರು.

ಸರ್ಕಾರದ ಪರವಾಗಿ ಮತ ಹಾಕಿ, ಕಾಂಗ್ರೆಸ್‌ನಿಂದ ಶಾಸಕರಿಗೆ ವಿಪ್ ಜಾರಿ

ಜೆಡಿಎಸ್ ನ ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಇದೇ ರೀತಿ ಕಾಂಗ್ರೆಸ್ಸಿನ 10 ಶಾಸಕರ ರಾಜೀನಾಮೆ ಕೂಡಾ ಸ್ವೀಕೃತಗೊಂಡಿದ್ದರೂ ಅಂಗೀಕಾರವಾಗಿಲ್ಲ.

ರಾಜೀನಾಮೆಗಳು ಅಂಗೀಕಾರವಾಗಿಲ್ಲದ ಕಾರಣ ಕಾಂಗ್ರೆಸ್ -ಜೆಡಿಎಸ್ ಪಕ್ಷಗಳು ತಮ್ಮ ರೆಬೆಲ್ ಶಾಸಕರಿಗೆ ವಿಪ್ ಜಾರಿಗೊಳಿಸಿ ಸದನಕ್ಕೆ ಹಾಜರಾಗಿ, ಇಲ್ಲದಿದ್ದರೆ ಅರ್ನಹತೆ ಎದುರಿಸಿ ಎಂದು ಸೂಚಿಸಿವೆ.

ಅತೃಪ್ತ ಶಾಸಕರು ಮುಂಬೈಗೆ ತೆರಳಿದ್ದೇಕೆ? ಕಾರಣ ಬಹಿರಂಗ

ಇದಲ್ಲದೆ, ಜೆಡಿಎಸ್ ಪರವಾಗಿ ವಕೀಲ ರಂಗನಾಥ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಕಾಂಗ್ರೆಸ್‌ ಸಹ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಿದೆ. ಆದರೆ, ಯಾವುದೇ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಸ್ಪೀಕರ್ ಇನ್ನೂ ಯಾವುದೇ ತೀರ್ಮಾನಗಳನ್ನು ಕೈಗೊಂಡಿಲ್ಲ.

ರಾಜೀನಾಮೆ ನೀಡಿದ 3 ಜೆಡಿಎಸ್ ಶಾಸಕರಿಗೂ ವಿಪ್ ಜಾರಿ

ಒಂದು ವೇಳೆ ವಿಪ್ ಉಲ್ಲಂಘಿಸಿದ್ದಕ್ಕೆ ರೆಬೆಲ್ ಶಾಸಕರನ್ನು ಅನರ್ಹಗೊಳಿಸಿದರೆ, ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಿದರೆ ಅಗತ್ಯ ಸಂಖ್ಯಾಬಲ ಸಿಗುವುದಿಲ್ಲ, ಅನರ್ಹತೆ ಆದೇಶವನ್ನು ಪ್ರಶ್ನಿಸಿ ಮತ್ತೊಮ್ಮೆ ಕೋರ್ಟ್ ಮೆಟ್ಟಿಲೇರಬಹುದು. ಎಲ್ಲದ್ದಕ್ಕೂ ಶುಕ್ರವಾರ ಸುಪ್ರೀಂಕೋರ್ಟ್ ನೀಡುವ ಆದೇಶ ತೆರೆ ಎಳೆಯುವ ಸಾಧ್ಯತೆ ಇದೆ.

   
 
ಹೆಲ್ತ್