Back
Home » ಸುದ್ದಿ
Live Updates: ಸುಪ್ರೀಂಕೋರ್ಟ್‌ನಲ್ಲಿ ಅತೃಪ್ತ ಶಾಸಕರ ಅರ್ಜಿ ವಿಚಾರಣೆ
Oneindia | 12th Jul, 2019 12:02 PM

ಬೆಂಗಳೂರು, ಜುಲೈ 12: ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿರುವ ರಾಜ್ಯ ರಾಜಕಾರಣದಲ್ಲಿ ಶುಕ್ರವಾರವೂ ಮತ್ತಷ್ಟು ನಾಟಕೀಯ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ. ಮುಖ್ಯವಾಗಿ ರಾಜ್ಯದ ಎರಡು ಪ್ರಮುಖ ಅರ್ಜಿಗಳು ಸುಪ್ರೀಂಕೋರ್ಟ್ ಅಂಗಳದಲ್ಲಿತ್ತು, ಇಂದು ಅವುಗಳನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ನ್ಯಾಯಪೀಠ ತಿಳಿಸಿತ್ತು.

ತಮ್ಮ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ್ದ ಸುಪ್ರೀಂಕೋರ್ಟ್, ಗುರುವಾರ ಸಂಜೆಯೊಳಗೆ ಸ್ಪೀಕರ್ ಮುಂದೆ ಹಾಜರಾಗಿ. ಅವರ ನೀಡುವ ಸೂಚನೆಯನ್ನು ಶುಕ್ರವಾರ ಹಾಜರುಪಡಿಸಿ ಎಂದು ಆದೇಶಿಸಿತ್ತು. ಸುಪ್ರೀಂಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿ ಸ್ಪೀಕರ್ ರಮೇಶ್ ಕುಮಾರ್ ಅವರೂ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ ತರಾತುರಿ ಮಾಡಲು ಆಗುವುದಿಲ್ಲ. ತಮಗೆ ಸಂವಿಧಾನಬದ್ಧ ಅಧಿಕಾರವಿದೆ ಎಂದು ಹೇಳಿದ್ದರು.

ಈ ಎರಡೂ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ಜತೆಗೆ ವಿಧಾನಸಭೆ ಅಧಿವೇಶನ ಕೂಡ ನಡೆಯುತ್ತಿರುವುದರಿಂದ ಮತ್ತಷ್ಟು ಬೆಳವಣಿಗೆಗಳು ನಡೆಯಲಿವೆ. ನಿನ್ನೆ ಸ್ಪೀಕರ್ ಮುಂದೆ ಹಾಜರಾಗಿದ್ದ ಶಾಸಕರು ಮತ್ತೆ ಮುಂಬೈಗೆ ಹಾರಿದ್ದಾರೆ. ಕಲಾಪಕ್ಕೆ ಹಾಜರಾಗುವಂತೆ ವಿಪ್ ಜಾರಿ ಮಾಡಿರುವುದರಿಂದ ಗೈರು ಹಾಜರಾಗಲಿರುವ ಶಾಸಕರು ಅನರ್ಹಗೊಳ್ಳುತ್ತಾರೆಯೇ? ಈ ಬಗ್ಗೆ ದೋಸ್ತಿ ಸರ್ಕಾರ ಯಾವ ನಡೆ ಅನುಸರಿಸಲಿದೆ ಎಂಬ ಕುತೂಹಲ ಮೂಡಿದೆ. ಈ ಎಲ್ಲ ವಿದ್ಯಮಾನಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

   
 
ಹೆಲ್ತ್