Back
Home » Car News
ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!
DriveSpark | 13th Aug, 2019 03:59 PM
 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  ಸದ್ಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಮಾರಾಟ ಪ್ರಮಾಣವು ಸತತ ಇಳಿಕೆ ಇದ್ದರೂ ಸಹ ಕಾರು ಉತ್ಪಾದನಾ ಸಂಸ್ಥೆಗಳು ಕೈಗೆಟುಕುವ ಬೆಲೆಗಳಲ್ಲಿ ವಿವಿಧ ಕಾರು ಮಾದರಿಗಳ ಮೂಲಕ ಗ್ರಾಹಕರನ್ನು ಸೆಳೆಯುವ ವಿಶ್ವಾಸದಲ್ಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ತಕ್ಕಂತೆ ಹೊಸ ವಿನ್ಯಾಸ ಮತ್ತು ಆಕರ್ಷಕ ಬೆಲೆಗಳಲ್ಲಿ ಹಲವು ಕಾರು ಮಾದರಿಗಳನ್ನು ಬಿಡುಗಡೆಗಾಗಿ ಸಿದ್ದವಾಗಿವೆ. ಹಾಗಾದ್ರೆ ಬಿಡುಗಡೆಯಾಗಲಿರುವ ಕಾರುಗಳು, ತಾಂತ್ರಿಕ ಮಾಹಿತಿ ಮತ್ತು ಬೆಲೆ ಎಷ್ಟಿರಬಹುದು ಎನ್ನುವ ಕುರಿತಾದ ಮಾಹಿತಿಯನ್ನು ಇಲ್ಲಿ ಚರ್ಚಿಸಲಾಗಿದೆ.


 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  01. ಕಿಯಾ ಸೆಲ್ಟೊಸ್
  ದಕ್ಷಿಣ ಕೊರಿಯಾದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಕಿಯಾ ಮೋಟಾರ್ಸ್ ಭಾರೀ ನೀರಿಕ್ಷೆಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲೂ ತನ್ನ ಕಾರ್ಯಾಚರಣೆ ಆರಂಭಿಸಿದ್ದು, ಇದೇ ತಿಂಗಳು 22ರಂದು ತನ್ನ ಮೊದಲ ಕಾರು ಸೆಲ್ಟೊಸ್ ಬಿಡುಗಡೆ ಮಾಡುತ್ತಿದೆ. ಸೆಲ್ಟೊಸ್ ಮಾದರಿಯು ಟೆಕ್-ಲೈನ್ ಮತ್ತು ಜಿಟಿ-ಲೈನ್ ಎನ್ನುವ ಪ್ರಮುಖ ಎರಡು ಮಾದರಿಯಲ್ಲಿ ಮಾರಾಟವಾಗಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಎರಡೂ ಎಂಜಿನ್‌ ಮಾದರಿಗಳಲ್ಲೂ ಖರೀದಿ ಲಭ್ಯವಾಗಲಿದೆ.


 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿ ಅತ್ಯುತ್ತಮ ಮಾದರಿಯಾಗಲಿರುವ ಕಿಯಾ ಸೆಲ್ಟೊಸ್ ಕಾರು ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಎಸ್‌ಯುವಿ ಮಾದರಿಗೂ ಈ ಕಾರು ಉತ್ತಮ ಪೈಪೋಟಿಯಾಗುವ ನೀರಿಕ್ಷೆಯಲ್ಲಿದ್ದು, ಹೊಸ ಕಾರಿನಲ್ಲಿ ಒದಗಿಸಲಾಗಿರುವ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಸೆಲ್ಟೊಸ್ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.14.99 ಲಕ್ಷಕ್ಕೆ ಖರೀದಿಗೆ ಲಭ್ಯವಾಗಬಹುದು ಎನ್ನಲಾಗಿದೆ.


 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  ಮಾರುತಿ ಸುಜುಕಿ ಎಕ್ಸ್ಎಲ್6
  ಎರ್ಟಿಗಾ ಮಾದರಿಯಲ್ಲೇ ವಿನ್ಯಾಸ ಹೊಂದಿರುವ ಎಕ್ಸ್ಎಲ್6 ಮಾದರಿಯು ಉದ್ದಳತೆಯಲ್ಲಿ ಸಾಮಾನ್ಯ ಎರ್ಟಿಗಾಗಿಂತಲೂ ಉತ್ತಮವಾಗಿದ್ದು, ಹಲವು ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ. ಇದೇ ತಿಂಗಳು 21ಕ್ಕೆ ಬಿಡುಗಡೆಯಾಗಲಿರುವ ಎಕ್ಸ್ಎಲ್6 ಕಾರು ವಿಶೇಷವಾಗಿ ವ್ಯಯಕ್ತಿಕ ಕಾರು ಬಳಕೆದಾರರಿಗಾಗಿ ಸಿದ್ದಪಡಿಸಲಾಗಿದ್ದು, 6 ಸೀಟರ್ ಸೌಲಭ್ಯವನ್ನು ಪಡೆದುಕೊಂಡಿದೆ.


 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  1.5-ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಮಾತ್ರವೇ ಹೊಂದಿರಲಿದ್ದು, ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್ ಆಯ್ಕೆ ಪಡೆದಿದೆ. ಮಾರುಕಟ್ಟೆಯಲ್ಲಿರುವ ಎರ್ಟಿಗಾದ ಫೀಚರ್ಸ್ ಹಾಗೂ ವಿನ್ಯಾಸಗಳಿಗೆ ಹೋಲಿಸಿದರೆ ಎಕ್ಸ್‌ಎಲ್ 6 ಕಾರು ಎರ್ಟಿಗಾಕ್ಕಿಂತ ಸುಮಾರು ರೂ.50,000 ಅಧಿಕ ಬೆಲೆ ಹೊಂದಿರಲಿದ್ದು, ಎಕ್ಸ್ ಎಲ್6 ಮಾದರಿಯು ಎರ್ಟಿಗಾದ ಟಾಪ್ ಮಾದರಿ ಆಲ್ಫಾ ಹಾಗೂ ಜೆಟಾ ಸರಣಿಗಳಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.


 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  ರೆನಾಲ್ಟ್ ಟ್ರೈಬರ್
  ಎಂಟ್ರಿ ಲೆವಲ್ ಎಂಪಿವಿ ಕಾರುಗಳಲ್ಲೇ ವಿಭಿನ್ನ ವಿನ್ಯಾಸ ಹೊತ್ತು ಬಂದಿರುವ ರೆನಾಲ್ಟ್ ಟ್ರೈಬರ್ ಕಾರು ಮಾರುತಿ ಸುಜುಕಿ ಎರ್ಟಿಗಾ ಕಾರುಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಇದೇ ತಿಂಗಳು 27ರಂದು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

  MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?


 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  ಗಾತ್ರದಲ್ಲಿ ಎರ್ಟಿಗಾ ಕಾರಿಗಿಂತಲೂ ಚಿಕ್ಕದಾಗಿದ್ದರೂ 7-ಸೀಟರ್ ಸೌಲಭ್ಯವನ್ನು ಹೊಂದಿರುವ ಟ್ರೈಬರ್ ಕಾರು ವ್ಯಯಕ್ತಿಕ ಕಾರು ಬಳಕೆದಾರರಿಗಾಗಿ ಅನುಕೂಲಕರವಾಗುವಂತೆ ವಿನ್ಯಾಸಗೊಳಿಸಲಾಗಿದ್ದು, 1.0-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿರಲಿರುವ ಟ್ರೈಬರ್ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.5 ಲಕ್ಷದಿಂದ ರೂ.7 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

  MOST READ: ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲುಗಡೆ ಮಾಡಿದವರಿಗೆ ಶಾಕ್ ಕೊಟ್ಟ ಹೊಸ ರೂಲ್ಸ್


 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  ಹ್ಯುಂಡೈ ಗ್ರಾಂಡ್ ಐ10 ನಿಯೋಸ್
  ಹ್ಯುಂಡೈ ಇಂಡಿಯಾ ತನ್ನ ಜನಪ್ರಿಯ ಹೊಸ ಕಾರು ಮಾದರಿಯಾದ ಗ್ರಾಂಡ್ ಐ10‌ನಲ್ಲಿ ಹೊಸದಾಗಿ ನಿಯೋಸ್ ಆವೃತ್ತಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಹೊಸ ಕಾರುನ್ನು ಮೊನ್ನೆಯಷ್ಟೇ ಅನಾವರಣಿಸಿರುವ ಹ್ಯುಂಡೈ ಸಂಸ್ಥೆಯು ಇದೇ ತಿಂಗಳು 20ಕ್ಕೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

  MOST READ: ಪ್ಲಾಸ್ಟಿಕ್‌ನಿಂದ ಉತ್ಪಾದನೆ ಮಾಡಲಾದ ಈ ಪೆಟ್ರೋಲ್ ದರ ಎಷ್ಟು ಗೊತ್ತಾ?


 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  ಪ್ರಸ್ತುತ ಮಾರುಕಟ್ಟೆಯಲ್ಲಿರುವ ಗ್ರಾಂಡ್ ಐ10 ಕಾರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಮತ್ತು ಉದ್ದಳತೆಯನ್ನು ಹೊಂದಿರುವ ಗ್ರಾಂಡ್ ಐ10 ನಿಯೋಸ್ ಕಾರು ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ. ಇನ್ನು ಹೊಸ ಕಾರು ಬಿಎಸ್-6 ಪ್ರೇರಿತ 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು 1.2-ಲೀಟರ್ ಯು2 ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದ್ದು, ಹೊಸ ಕಾರಿನ ಬೆಲೆಯು ಸಾಮಾನ್ಯ ಗ್ರಾಂಡ್ ಐ10ಗಿಂತ ರೂ.50 ಸಾವಿರದಿಂದ ರೂ.1 ಲಕ್ಷ ಹೆಚ್ಚಳವಾಗುವ ಸಾಧ್ಯತೆಗಳಿವೆ.


 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  2019ರ ಬಿಎಂಡಬ್ಲ್ಯು 3 ಸೀರಿಸ್
  ಏಳನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮರುವಿನ್ಯಾಸಗೊಳಿಸಲಾದ ಬಿಎಂಡಬ್ಲ್ಯು 3 ಸೀರಿಸ್ ಐಷಾರಾಮಿ ಸೆಡಾನ್ ಆವೃತ್ತಿಯು ಇದೇ ತಿಂಗಳು 21ಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಹಳೆಯ ಆವೃತ್ತಿಗಿಂತ ಹೆಚ್ಚುವರಿಯಾಗಿ 76-ಎಂಎಂ ಉದ್ದ ಮತ್ತು 41-ಎಂಎಂ ವಿಸ್ತಿರಿತ ವೀಲ್ಹ್‌ಬೆಸ್ ಹೊಂದಿದ್ದು, 2.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 2.-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಬೆಲೆಯಲ್ಲೂ ತುಸು ದುಬಾರಿಯಾಗಿರಲಿದೆ.


 • ಅಗಸ್ಟ್‌ನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

  ಇದರೊಂದಿಗೆ ಜೀಪ್ ರ‍್ಯಾಂಗ್ಲರ್ 2019ರ ಆವೃತ್ತಿಯು ಈಗಾಗಲೇ ಬಿಡುಗಡೆಯಾಗಿದ್ದು, ಇನ್ನುಳಿದಂತೆ ಟಾಟಾ ಹ್ಯಾರಿಯರ್ ಆಲ್‌ಬ್ಲ್ಯಾಕ್ ಎಡಿಷನ್, ಫೋಕ್ಸ್‌ವ್ಯಾಗನ್ ಪೊಲೊ 10 ಇಯರ್ಸ್ ಎಡಿಷನ್ ಕೂಡಾ ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಹೊಸ ಕಾರುಗಳ ಮಾರಾಟ ಪ್ರಮಾಣದಲ್ಲಿ ಸತತ ಕುಸಿತ ನಡುವೆಯೂ ಹಲವಾರು ಕಾರು ಉತ್ಪಾದನಾ ಸಂಸ್ಥೆಗಳು ಗ್ರಾಹಕರನ್ನು ಉದ್ದೇಶದೊಂದಿಗೆ ವಿವಿಧ ನಮೂನೆಯ ಹೊಸ ಕಾರುಗಳನ್ನು ಬಿಡುಗಡೆ ಮಾಡುತ್ತಿದ್ದು, ಇದೇ ತಿಂಗಳು ಅಗಸ್ಟ್‌ನಲ್ಲಿಯೇ ಸುಮಾರು 8 ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ.

   
 
ಹೆಲ್ತ್