Back
Home » ಸುದ್ದಿ
ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ: ಯಡಿಯೂರಪ್ಪ
Oneindia | 14th Aug, 2019 10:06 AM

ಬೆಂಗಳೂರು, ಆಗಸ್ಟ್ 14: 'ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ' ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.

ಮನೆ ಕಟ್ಟಲು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

'ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ' ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್‌ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.

ದಕ್ಷಿಣ ಕನ್ನಡದಲ್ಲಿ ಸಂತ್ರಸ್ತರಿಗೆ ತಕ್ಷಣ 10 ಸಾವಿರ ರೂಪಾಯಿ- ಯಡಿಯೂರಪ್ಪ

ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ 'ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ' ಎಂದು ಹೇಳಿದ್ದರು.

   
 
ಹೆಲ್ತ್