Back
Home » ಸುದ್ದಿ
ಮಲಗಿದ್ದಾಗ ಗೋಡೆ ಕುಸಿದು ತಾಯಿ, ಒಂದು ವರ್ಷದ ಮಗು ಸಾವು
Oneindia | 14th Aug, 2019 02:03 PM

ದಾವಣಗೆರೆ, ಆಗಸ್ಟ್ 14: ನಿದ್ದೆ ಮಾಡುತ್ತಿದ್ದ ಸಂದರ್ಭ ಮನೆಯ ಗೋಡೆ ಕುಸಿದು ತಾಯಿ-ಮಗು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ನಡೆದಿದೆ.

ಕೊಡಗಿನಲ್ಲಿ ಕೊಂಚ ತಗ್ಗಿದೆ ಮಳೆ; ಮಣ್ಣಿನಡಿ ಸಿಲುಕಿದ್ದ ಎರಡು ಮೃತದೇಹ ಪತ್ತೆ

ಉಮಾ (30) ಹಾಗೂ ಧನುಷ್ (1) ಮೃತ ದುರ್ದೈವಿಗಳು. ಬೆಳಗ್ಗಿನ ಜಾವ ಮನೆಯಲ್ಲಿ ತಾಯಿ ಮಗು ಮಲಗಿದ್ದ ವೇಳೆ ಇದ್ದಕ್ಕಿದ್ದಂತೆ ಗೋಡೆ ಕುಸಿದು ಬಿದ್ದಿದೆ. ಇದರಿಂದ ದುರಂತ ಸಂಭವಿಸಿದೆ.

ಚಿಕ್ಕಮಗಳೂರಿನಲ್ಲಿ ಮಹಾ ಮಳೆಗೆ ಒಟ್ಟು 8 ಮಂದಿ ಬಲಿ

ಗೋಡೆ ಕುಸಿದು ಮಣ್ಣಿನಡಿ ಸಿಲುಕಿದ್ದ ತಾಯಿ ಮಗುವನ್ನು ತಕ್ಷಣವೇ ಗ್ರಾಮಸ್ಥರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   
 
ಹೆಲ್ತ್