Back
Home » ಸುದ್ದಿ
ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ ದೊಡ್ಡ ಬದಲಾವಣೆ
Oneindia | 11th Sep, 2019 08:49 PM

ನವದೆಹಲಿ, ಸೆಪ್ಟೆಂಬರ್ 11: ಪ್ರಧಾನಿ ಕಾರ್ಯಾಲಯದಲ್ಲಿ ದೊಡ್ಡ ಬದಲಾವಣೆ ಆಗಿದೆ. ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಕುಮಾರ್ ಮಿಶ್ರಾ ನೇಮಕೊಂಡಿದ್ದಾರೆ.

ಪಿಕೆ ಮಿಶ್ರ ಅವರು ಇದಕ್ಕೂ ಮುಂಚೆ ಪ್ರಧಾನಿ ಕಾರ್ಯಾಲಯದ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಅಧಿಕೃತವಾಗಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಪ್ರಧಾನಿ ಮೋದಿಗೆ ಬಂದ 2,700ಕ್ಕೂ ಹೆಚ್ಚು ಉಡುಗೊರೆ ಸೆ. 14ರಿಂದ ಹರಾಜು

ಈ ಮುಂಚೆ ಪ್ರಧಾನಿ ಮೋದಿ ಅವರಿಗೆ ನೃಪೇಂದ್ರ ಮಿಶ್ರಾ ಅವರು ಪ್ರಧಾನ ಕಾರ್ಯದರ್ಶಿ ಆಗಿದ್ದರು. ಆದರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಪ್ರಧಾನ ಕಾರ್ಯದರ್ಶಿ ಸ್ಥಾನ ಖಾಲಿ ಇತ್ತು. ಮಿಶ್ರಾ ಅವರು ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದು, ಅವರಿಗೆ ಕ್ಯಾಬಿನೆಟ್ ಸ್ಥಾನ-ಮಾನ ನೀಡಲಾಗಿದೆ.

ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ ಅವರು 2014 ರಿಂದ 2019 ರ ವರೆಗೂ ಪ್ರಧಾನಿ ಕಾರ್ಯಾಲಯದ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಈಗ ಪ್ರಧಾನ ಕಾರ್ಯದರ್ಶಿ ಆಗಿ ನೇಮಕಗೊಂಡಿದ್ದಾರೆ.

ಮತ್ತೊಂದು ಪ್ರಮುಖ ಬದಲಾವಣೆ ಪ್ರಧಾನಿ ಕಚೇರಿಯಲ್ಲಿ ಆಗಿದ್ದು, ಪಿಕೆ ಸಿನ್ಹಾ ಅವರನ್ನು ಪ್ರಧಾನಿ ಅವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಿ ಇಂದು ಆದೇಶ ಹೊರಡಿಸಲಾಗಿದೆ. ಕಳೆದ ತಿಂಗಳಷ್ಟೆ ಪಿಕೆ ಸಿನ್ಹಾ ಅವರನ್ನು ಪ್ರಧಾನಿ ಕಾರ್ಯಾಲಯದ ವಿಶೇಷ ಅಧಿಕಾರಿಯಾಗಿ ನೇಮಕ ಮಾಡಲಾಗಿತ್ತು.

ಪ್ರಧಾನಮಂತ್ರಿ ಮೋದಿ ರಕ್ಷಣಾ ಕೋಟೆ ಎಸ್ ಪಿಜಿ ಬಗ್ಗೆ ನಿಮಗೆಷ್ಟು ಗೊತ್ತು?

ಪಿಕೆ ಸಿನ್ಹಾ ಅವರು 2015 ರಿಂದ 2019 ಆಗಸ್ಟ್ 30 ರ ವರೆಗೆ ಸಂಪುಟ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ತಿಂಗಳ ಆರಂಭದಲ್ಲಿ ಅವರನ್ನು ಪ್ರಧಾನಿ ಕಾರ್ಯಾಲಯದ ವಿಶೇಷ ಅಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಈಗ ಅವರನ್ನು ಪ್ರಧಾನಿಯವರ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

   
 
ಹೆಲ್ತ್