Back
Home » Business
6,000 ರೈಲು ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯ
Good Returns | 4th Oct, 2019 11:53 AM

ಭಾರತದ ದೂರದ ಪ್ರದೇಶಗಳಲ್ಲಿ ಜನರನ್ನು ಸಂಪರ್ಕಿಸುವ ಸರ್ಕಾರದ ಯೋಜನೆಯ ಭಾಗವಾಗಿ ಮುಂದಿನ ಎರಡು, ಮೂರು ತಿಂಗಳಲ್ಲಿ ಸುಮಾರು 6,000 ರೈಲು ನಿಲ್ದಾಣಗಳಲ್ಲಿ ವೈ-ಫೈ ಅಳವಡಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಗುರುವಾರ ತಿಳಿಸಿದ್ದಾರೆ.

ಈಗಾಗಲೇ ಸುಮಾರು 5,000 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯವಿದೆ. ಮುಂದಿನ ಎರಡು-ಮೂರು ತಿಂಗಳಲ್ಲಿ 6,500 ನಿಲ್ದಾಣಗಳು ವೈ-ಫೈ ಸಂಪರ್ಕವನ್ನು ಹೊಂದಿರುತ್ತವೆ.

ಎಲ್ಲಾ ನಿಲ್ದಾಣಗಳಲ್ಲಿ ಸಿಸಿ ಟಿವಿ ಕ್ಯಾಮೆರಾವನ್ನು ಅಳವಡಿಸಲಾಗುವುದು ಎಂದು ಹೇಳಿದ್ದಾರೆ.

ಪಿಯೂಶ್ ಗೋಯಲ್ ಹಾಗೂ ಅಮಿತ್ ಶಾ ಅವರು ವಂದೇ ಭಾರತ್ ಎಕ್ಸ್‌ ಪ್ರೆಸ್ ಹೊಸ ರೈಲು ಮಾರ್ಗವನ್ನು ಚಾಲನೆ ನೀಡಿದರು.

   
 
ಹೆಲ್ತ್