Back
Home » ಸುದ್ದಿ
ವಿಪಕ್ಷ ನಾಯಕನಾಗಿ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಹೇಳಿದ್ದೇನು?
Oneindia | 10th Oct, 2019 07:32 AM

ಬೆಂಗಳೂರು, ಅಕ್ಟೋಬರ್ 10: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷವು ವಿಧಾನಸಭೆ ವಿರೋಧಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, "ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ‌ ಆಯ್ಕೆಯಾಗಿರುವ ಸಿದ್ದರಾಮಯ್ಯನವರಿಗೆ ಹಾಗೂ ನವರಿಗೆ ಹಾಗೂ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಎಸ್ ಆರ್ ಪಾಟೀಲ್ ರವರಿಗೆ ಅಭಿನಂದನೆಗಳು. ಇಬ್ಬರು ಹಿರಿಯ ನಾಯಕರು ವಿಧಾನ ಮಂಡಲದ ಎರಡೂ ಕಲಾಪಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಮರ್ಥರಾಗಿ ಮುನ್ನಡೆಸುತ್ತಾರೆಂಬ ವಿಶ್ವಾಸವಿದೆ" ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಬುಧವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು, ಸಿದ್ದರಾಮಯ್ಯ ಅವರನ್ನು ವಿಧಾನಸಭೆ ವಿರೋಧ ಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿ, ಎಸ್‌.ಆರ್.ಪಾಟೀಲ್ ಅವರು ವಿಧಾನಪರಿಷತ್ ಪ್ರತಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಿ ಘೋಷಣೆ ಹೊರಡಿಸಿದ್ದರು.

ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನೇ ಪ್ರತಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಿರುವುದು ಆಡಳಿತ ಪಕ್ಷಕ್ಕೆ ಭಾರೀ ತಲೆನೋವೆನ್ನಿಸಿದೆ. ಆದರೆ ಕಾಂಗ್ರೆಸ್ ಕಾರ್ಯಕಾರಿ ಸದಸ್ಯ ಸ್ಥಾನದಿಂದ ಸಿದ್ದರಾಮಯ್ಯ ಅವರು ನಿರ್ಗಮಿಸಿದ್ದಾರೆ. ವಿಪಕ್ಷ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಹೆಗಲ ಮೇಲೆ ಉಪಚುನಾವಣೆಯ ಹೊಣೆಯನ್ನೂ ಹೇರಿಸಲಾಗಿದೆ ಎನ್ನಲಾಗಿದೆ.

   
 
ಹೆಲ್ತ್