Back
Home » Car News
ಮಹೀಂದ್ರಾ ಮರಾಜೋ ಎಂ8 ಕಾರಿನ ಮೇಲೆ ಭರ್ಜರಿ ರಿಯಾಯಿತಿ
DriveSpark | 8th Nov, 2019 08:07 PM
 • ಮಹೀಂದ್ರಾ ಮರಾಜೋ ಎಂ8 ಕಾರಿನ ಮೇಲೆ ಭರ್ಜರಿ ರಿಯಾಯಿತಿ

  ದೇಶಾದ್ಯಂತಹ ಮಹೀಂದ್ರಾ ಡೀಲರ್‍‍ಗಳು ಮರಾಜೋ ಎಂಪಿವಿಗೆ ರೂ.1.17ಲಕ್ಷಗಳವರೆಗೆ ರಿಯಾಯಿತಿಯನ್ನು ನೀಡುತ್ತಿದ್ದಾರೆ. ಇದರಲ್ಲಿ ನಗದು ಮತ್ತು ಕಾರ್ಪೊರೇಟ್ ರಿಯಾಯಿತಿಗಳು ಮತ್ತು ವಿನಿಮಯ ಬೋನಸ್ ಸೇರಿವೆ. ಟಾಪ್-ಸ್ಪೆಕ್ ಮರಾಜೋ ಎಂ8 ಎಂಪಿವಿ ರೂಪಾಂತರದಲ್ಲಿ ಲಭ್ಯವಿದೆ. ಮರಾಜೋ ಎಂ4 ರೂಪಾಂತರ ರೂ.60,000 ಮತ್ತು ಎಂ6 ರೂಪಾಂತರದಲ್ಲಿ 1.1 ಲಕ್ಷಗಳವರೆಗೆ ಘೋಷಣೆ ಮಾಡಲಾಗಿದೆ. ಎಂ2 ರೂಪಾಂತರಕ್ಕೆ ಯಾವುದೇ ರಿಯಾಯಿತಿಯನ್ನು ನೀಡಿಲ್ಲ.


 • ಮಹೀಂದ್ರಾ ಮರಾಜೋ ಎಂ8 ಕಾರಿನ ಮೇಲೆ ಭರ್ಜರಿ ರಿಯಾಯಿತಿ

  ಮಹೀಂದ್ರಾ ಮರಾಜೋ ಎಂಪಿವಿಯು ಭಾರತದ ಎಕ್ಸ್ ಶೋರೂಂ ಪ್ರಕಾರ ಬೆಲೆಯು ರೂ.9.99 ಲಕ್ಷಗಳಾಗಿವೆ. ಈ ಎಂಪಿವಿಯು 1.5 ಲೀಟರ್ ಡೀಸೆಲ್ ಎಂಜಿನ್ 121 ಬಿ‍ಹೆಚ್‍‍ಪಿ ಪವರ್ ಮತ್ತು 300 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್‍‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಮಹೀಂದ್ರಾ ಮರಾಜೋ ಏಳು ಮತ್ತು ಎಂಟು ಸೀಟ್‍‍ಗಳ ಆಯ್ಕೆಗಳನ್ನು ಹೊಂದಿರುವ ಎಂಪಿವಿಯಾಗಿದೆ.


 • ಮಹೀಂದ್ರಾ ಮರಾಜೋ ಎಂ8 ಕಾರಿನ ಮೇಲೆ ಭರ್ಜರಿ ರಿಯಾಯಿತಿ

  ಈ ಎಂಪಿವಿಯ ಬಗ್ಗೆ ಹೇಳುವುದಾದರೆ ಮರಾಜೋ ಅಂದರೆ ಸ್ಪಾನಿಷ್ ಭಾಷೆಯಲ್ಲಿ ತಿಮಿಂಗಿಲ ಎಂದರ್ಥ. ಇದೇ ಆಕಾರವನ್ನು ಹೊಂದಿರುವ ಈ ಕಾರು ಸಹ ಸದ್ದುಗದ್ದಲವಿಲ್ಲದೇ ಸರಾಗವಾಗಿ ನುಗ್ಗಬಲ್ಲ ಗುಣಹೊಂದಿದ್ದು, ಎಂಟ್ರಿ ಲೆವಲ್ ಎಂಪಿವಿ ಮಾರುತಿ ಸುಜುಕಿ ಎರ್ಟಿಗಾ ಹಾಗೂ ದುಬಾರಿ ಬೆಲೆಯ ಇನೋವಾ ಕ್ರಿಸ್ಟಾ ಕಾರುಗಳ ಪ್ರಬಲ ಪೈಪೋಟಿಯಿಂದಾಗಿ ಮಾರಾಟದಲ್ಲಿ ಕುಸಿತ ಕಂಡಿದೆ


 • ಮಹೀಂದ್ರಾ ಮರಾಜೋ ಎಂ8 ಕಾರಿನ ಮೇಲೆ ಭರ್ಜರಿ ರಿಯಾಯಿತಿ

  ಎಲ್‌ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಆಕರ್ಷಕ ಬಂಪರ್, 17-ಇಂಚಿನ ಅಲಾಯ್ ವ್ಹೀಲ್, ಒಆರ್‌ವಿಎಂಗಳಲ್ಲಿ ಟರ್ನ್ ಇಂಡಿಕೇಟರ್ ಮತ್ತು ಕಾರಿನ ಹಿಂಭಾಗದ ಪ್ರೋಫೈಲ್‌ನಲ್ಲಿ ಶಾರ್ಕ್ ಎಲ್‌ಇಡಿ ಟೀಲ್ ಲೈಟ್ಸ್ , ಹೈ ಸ್ಟಾಪ್ ಲ್ಯಾಂಪ್ ಸೇರಿದಂತೆ ಸ್ಪೋರ್ಟಿ ರೇರ್ ಬಂಪರ್ ಪಡೆದಿದೆ.


 • ಮಹೀಂದ್ರಾ ಮರಾಜೋ ಎಂ8 ಕಾರಿನ ಮೇಲೆ ಭರ್ಜರಿ ರಿಯಾಯಿತಿ

  ಮಹೀಂದ್ರಾ ಮರಾಜೋ ಕಾರುಗಳಲ್ಲಿ ಡ್ಯುಯಲ್ ಟೋನ್ ಥೀಮ್ ಇಂಟಿರಿಯರ್ ಮತ್ತು ಫ್ರಿ ಡ್ಯಾಶ್‌ಬೋರ್ಡ್ ನೀಡಲಾಗಿದ್ದು, 7-ಇಂಚಿನ ಇನ್ಪೋಟೀನ್‍‍ಮೆಂಟ್ ಸಿಸ್ಟಂ, ಟಾಪ್ ರೂಫ್‌ನಲ್ಲಿ ಸರೌಂಡ್‌ ಎಸಿ ವೆಂಟ್ಸ್, ಡ್ಯುಯಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಾಯ್ಸ್‌ ಕಮಾಂಡ್‌ ಮತ್ತು ಏರ್‌ಕ್ರಾಫ್ಟ್ ಸ್ಟೈಲ್ ಹ್ಯಾಂಡಲ್‌ಬ್ರೇಕ್ ವಿನ್ಯಾಸ ಪಡೆದುಕೊಂಡಿದೆ. ಹೆಚ್ಚುವರಿಯಾಗಿ ಆ್ಯಪಲ್ ಕಾರ್ ಪ್ಲೇ ಅನ್ನು ಹೊಂದಿದೆ.


 • ಮಹೀಂದ್ರಾ ಮರಾಜೋ ಎಂ8 ಕಾರಿನ ಮೇಲೆ ಭರ್ಜರಿ ರಿಯಾಯಿತಿ

  ಇದಲ್ಲದೇ ಕೆಲವು ಸುಧಾರಿತ ಸೌಲಭ್ಯಗಳು ಆಯ್ಕೆ ರೂಪದಲ್ಲಿದ್ದು, ಇವುಗಳಲ್ಲಿ ವೀಲ್ಹ್ ಮೌಟೆಂಡ್ ಆಡಿಯೋ ಕಂಟ್ರೋಲರ್, ತುರ್ತುನಿರ್ವಹಣಾ ಕರೆ ಸೌಲಭ್ಯ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್ ಮತ್ತು ಕ್ರೂಸ್ ಕಂಟ್ರೋಲ್ ಆಯ್ಕೆಯಾಗಿ ಪಡೆಯಬಹುದುದಾಗಿದೆ.

  MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!


 • ಮಹೀಂದ್ರಾ ಮರಾಜೋ ಎಂ8 ಕಾರಿನ ಮೇಲೆ ಭರ್ಜರಿ ರಿಯಾಯಿತಿ

  ಮರಾಜೊ ಎಂಪಿವಿಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಡಿಸ್ಕ್‌ಬ್ರೇಕ್ ಚೈಲ್ಡ್ ಮೌಂಟ್ಸ್ ಸೀಟಿನ ಸೌಲಭ್ಯದೊಂದಿಗೆ ಹೆಚ್ಚುವರಿಯಾಗಿ ರೇರ್ ಪಾರ್ಕಿಂಗ್ ಸೆನ್ಸಾರ್, ಕಾರ್ನರಿಂಗ್ ಲ್ಯಾಂಪ್ ಸೌಲಭ್ಯವನ್ನು ಅಳವಡಿಸಲಾಗಿದೆ.

  MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!


 • ಮಹೀಂದ್ರಾ ಮರಾಜೋ ಎಂ8 ಕಾರಿನ ಮೇಲೆ ಭರ್ಜರಿ ರಿಯಾಯಿತಿ

  ಆಟೋಮೊಬೈಲ್ ಕ್ಷೇತ್ರ ಕುಸಿತ ಕಂಡಿರುವುದರಿಂದ ವಾಹನಗಳ ಮಾರಾಟವನ್ನು ಬಾರೀ ಇಳಿಕೆಯನ್ನು ಕಂಡಿತ್ತು. ಕಳೆದ ಎರಡು ತಿಂಗಳು ಹಬ್ಬದ ಪ್ರಯುಕ್ತ ವಾಹನಗಳ ಮಾರಾಟದಲ್ಲಿ ಸುಧಾರಣೆ ಕಂಡಿದೆ. ಆದರೆ ಮರಾಜೋ ಮಾರಾಟದಲ್ಲಿ ಹೆಚ್ಚಿನ ಸುಧಾರಣೆಯನ್ನು ಕಂಡಿಲ್ಲ. ಇದೇ ಕಾರಣದಿಂದ ಮಹೀಂದ್ರಾ ಮರಾಜೋ ಎಂಪಿವಿ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದ್ದಾರೆ.
ವಾಹನ ತಯಾರಿಕ ಕಂಪನಿಯಾದ ಮಹೀಂದ್ರಾ ತನ್ನ ಮರಾಜೋ ಎಂ8 ಮಾದರಿಗೆ ಭರ್ಜರಿ ಆಫರ್ ಅನ್ನು ಘೋಷಿಸಲಾಗಿದೆ. ಈ ಎಂಪಿವಿಯ ಮಾರಾಟದಲ್ಲಿ ಕುಸಿತ ಕಂಡಿರುವ ಹಿನ್ನಲೆಯಲ್ಲಿ ಮಾರಾಟವನ್ನು ಹೆಚ್ಚಿಸಲು ಭಾರೀ ರಿಯಾಯಿತಿಯನ್ನು ಘೋಷಿಸಿದ್ದಾರೆ.

   
 
ಹೆಲ್ತ್