Back
Home » ಸುದ್ದಿ
ಸುಪ್ರೀಂ ತೀರ್ಪು: ಅಯೋಧ್ಯಾ ಭೂ ವ್ಯಾಜ್ಯ ಅಂತ್ಯ, ಮಂದಿರ-ಮಸೀದಿಗೆ ಹಂಚಿಕೆ
Oneindia | 9th Nov, 2019 12:46 PM

ನವದೆಹಲಿ, ನವೆಂಬರ್ 09: ಉತ್ತರಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ನ್ಯಾಯಪೀಠವು ಶನಿವಾರ(ನವೆಂಬರ್ 09) ಬೆಳಗ್ಗೆ ಅಂತಿಮ ತೀರ್ಪು ಪ್ರಕಟಿಸಿದೆ. ವಿವಾದಿತ ಭೂಮಿ ಮಂದಿರಕ್ಕೆ, ಮಸೀದಿಗೆ ಪ್ರತ್ಯೇಕ ಜಾಗ ಹಂಚಿಕೆ ಮಾಡಿ ತೀರ್ಪು ನೀಡಲಾಗಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಶರದ್ ಬೊಬ್ಡೆ, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು, ಶನಿವಾರ(ನವೆಂಬರ್ 09)ದಂದು ನ್ಯಾಯಾಲಯಕ್ಕೆ ರಜೆ ಇದ್ದರೂ ಕಾರ್ಯ ನಿರ್ವಹಿಸಿ, ಈ ಐತಿಹಾಸಿಕ ತೀರ್ಪು ನೀಡಿದ್ದಾರೆ.

ತೀರ್ಪಿನ ಮುಖ್ಯಾಂಶಗಳು:

* ಅಯೋಧ್ಯಾದ ವಿವಾದಿತ ಭೂಮಿ ರಾಮಜನ್ಮಭೂಮಿ ನ್ಯಾಸ ಟ್ರಸ್ಟಿಗೆ

* ಕೇಂದ್ರ ಸರ್ಕಾರ ವಶದಲ್ಲಿದ್ದ ಭೂಮಿಯಲ್ಲಿ ಸುನ್ನಿ ವಕ್ಫ್ ಬೋರ್ಡಿಗೆ 5 ಎಕರೆ

* ವಿವಾದಿತ ರಾಮಮಂದಿರ ನಿರ್ಮಾಣ ಮಾಡಲು ರಾಮಜನ್ಮಭೂಮಿ ನ್ಯಾಸ್ ಅಲ್ಲದೆ ಪ್ರತ್ಯೇಕ ಟ್ರಸ್ಟ್ ರಚನೆ ಆಗಬೇಕಿದೆ. ಮಸೀದಿಗೆ ಪರ್ಯಾಯ ಭೂಮಿಯನ್ನು 3 ರಿಂದ 4 ತಿಂಗಳುಗಳಲ್ಲಿ ಸರ್ಕಾರವು ನೀಡಬೇಕಾಗುತ್ತದೆ.

1885ರಿಂದ ಮೊದಲುಗೊಂಡು ಆರಂಭವಾದ ರಾಮಜನ್ಮಭೂಮಿ, ಬಾಬ್ರಿ ಮಸೀದಿ ವಿವಾದ ಇಂದಿನ ತನಕ ಪರಿಹಾರ ಕಾಣದಂತೆ ನಡೆದುಕೊಂಡು ಬಂದಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗೆ ಇತ್ಯರ್ಥ ಹಾಡಿ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಸೂಚಿಸಿತ್ತು, ಮೂವರು ಸಂಧಾನಕಾರರನ್ನು ನೇಮಿಸಿತ್ತು. ಆದರೆ, ಸಂಧಾನಕಾರರಿಂದಲೂ ಈ ವ್ಯಾಜ್ಯ ಬಗೆಹರೆಯಲು ಸಾಧ್ಯವಾಗಲಿಲ್ಲ. ತೀರ್ಪಿನ ಇನ್ನಷ್ಟು ಮುಖ್ಯಾಂಶ, ಏನಿದು ಪ್ರಕರಣ, ಮೋದಿ ಸರ್ಕಾರದ ಪಾತ್ರವೇನು? ಮುಂದೆ ಓದಿ...

   
 
ಹೆಲ್ತ್