Back
Home » ಸುದ್ದಿ
ಅಯೋಧ್ಯೆ ತೀರ್ಪು : ಕರ್ನಾಟಕದ ರಾಜಕೀಯ ನಾಯಕರ ಪ್ರತಿಕ್ರಿಯೆ
Oneindia | 9th Nov, 2019 01:25 PM
 • ಶಾಂತಿ ಕಾಪಾಡಿಕೊಳ್ಳಿ

  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, "ಅಯೋಧ್ಯೆ ವಿವಾದದ ಕುರಿತು ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ. ಸಮಾಜದ ಸಾಮರಸ್ಯ ಕದಡದೆ ಶಾಂತಿ ಕಾಪಾಡಿಕೊಳ್ಳಿ" ಎಂದು ಟ್ವೀಟ್ ಮಾಡಿದ್ದಾರೆ.


 • ಎಂ. ಬಿ. ಪಾಟೀಲ್ ಟ್ವೀಟ್

  "ಭಾರತ ಸುಪ್ರೀಂಕೋರ್ಟ್‌ ತೀರ್ಪನ್ನು ಗೌರವಿಸುತ್ತದೆ ಮತ್ತು ಅಭಿನಂದಿಸುತ್ತದೆ. ದಶಕಗಳ ಕಾಲದ ವಿವಾದಕ್ಕೆ ತೆರೆ ಬಿದ್ದಿದೆ" ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎಂ. ಬಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.


 • ಬಿ. ಶ್ರೀರಾಮುಲು ಪ್ರತಿಕ್ರಿಯೆ

  ಆರೋಗ್ಯ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, "ಅಯೋಧ್ಯೆ ಇನ್ನು ವಿವಾದವಲ್ಲ. ಅಯೋಧ್ಯೆ ಹಿಂದೂಗಳದ್ದು. ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ. ಈ ತೀರ್ಪಿನಿಂದ ಭಾರತೀಯರ ಪುರಾಣ, ನಂಬಿಕೆ, ಆಚರಣೆಗಳಿಗೆ ನ್ಯಾಯಾಂಗದಲ್ಲೂ ಮಾನ್ಯತೆ ಇದೆ ಎಂಬುದು ಸ್ಪಷ್ಟವಾಗಿದೆ. ಅಯೋಧ್ಯೆಯಲ್ಲಿ ರಾಮನ ಜನ್ಮಸ್ಥಳ, ಅಲ್ಲಿ ಮಂದಿರ ಇದ್ದದ್ದೂ ಹೌದು, ಮಸೀದಿ ನಿರ್ಮಿಸಿದ್ದೂ ಹೌದು. ಆದರೆ, ಮೊದಲು ಇದ್ದದ್ದು ಮಂದಿರ. ಹೀಗಾಗಿ ಅಯೋಧ್ಯೆಯ ರಾಮಜನ್ಮಭೂಮಿಯನ್ನು ಹಿಂದೂಗಳಿಗೆ ನೀಡಿ, ಮುಸ್ಲಿಮರಿಗೆ ಅಯೋಧ್ಯೆಯಲ್ಲೇ ಪರ್ಯಾಯ ಜಮೀನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳುವ ಮೂಲಕ ನ್ಯಾಯಾಂಗವೂ ಭಾರತವೆಂದರೆ ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದೆ" ಎಂದು ಹೇಳಿದ್ದಾರೆ.


 • ಸ್ವಾಗತಾರ್ಹ ತೀರ್ಪು

  "ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದ್ದು ಇದನ್ನು ಇಡೀ ಭಾರತ ದೇಶ ಸ್ವಾಗತಿಸಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಆರ್‌ಎಸ್‌ಎಸ್‌ನ ಸರಸಂಚಾಲಕ ಮೋಹನ್ ಭಾಗತ್ ಏನು ತೀರ್ಮಾನಿಸುತ್ತಾರೋ ಅದರಂತೆ ನಾವು ನಡೆದುಕೊಳ್ಳಲಿದ್ದೇವೆ" ಎಂದು ಕೆ. ಎಸ್. ಈಶ್ವರಪ್ಪ ಹೇಳಿದರು.
ಬೆಂಗಳೂರು, ನವೆಂಬರ್ 09 : ದಶಕಗಳ ಕಾಲದ ಅಯೋಧ್ಯೆ ಭೂ ವಿವಾದದ ತೀರ್ಪು ಪ್ರಕಟವಾಗಿದೆ. ವಿವಾದಿತ 2.77 ಎಕರೆ ಜಾಗವನ್ನು ಟ್ರಸ್ಟ್‌ಗೆ ನೀಡಲಾಗಿದೆ. ಮೂರು ತಿಂಗಳಿನಲ್ಲಿ ಟ್ರಸ್ಟ್‌ ರಚನೆ ಮಾಡಬೇಕು ಎಂದು ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಶನಿವಾರ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿದೆ. ಆದೇಶ ಪ್ರಕಟವಾಗುತ್ತಿದ್ದಂತೆ ಕರ್ನಾಟಕದ ರಾಜಕೀಯ ನಾಯಕರಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಅಯೋಧ್ಯೆ ತೀರ್ಪು; ಐವರು ನ್ಯಾಯಮೂರ್ತಿಗಳ ಪರಿಚಯ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವರಾದ ಸಿ. ಟಿ. ರವಿ, ಸುರೇಶ್ ಕುಮಾರ್, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಅಯೋಧ್ಯ ವಿವಾದ: ಲೆಕ್ಕವಿಲ್ಲದಷ್ಟು ಸಂಧಾನ, ಎಲ್ಲವೂ ವಿಫಲ!

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, "ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ. ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ . ಉದ್ವೇಗಕ್ಕೆ ಒಳಗಾಗಬೇಡಿ , ಯಾರೂ ವಿಜೃಂಭಿಸಬೇಡಿ. ಸಮಾಜದ ಸಾಮರಸ್ಯ ಕದಡದೆ, ಶಾಂತಿ ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

   
 
ಹೆಲ್ತ್