Back
Home » Car News
ಪೆಟ್ರೋಲ್ ಎಂಜಿನ್ ಜೊತೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಮಹೀಂದ್ರಾ ಹೊಸ ಥಾರ್
DriveSpark | 12th Nov, 2019 06:59 PM
 • ಪೆಟ್ರೋಲ್ ಎಂಜಿನ್ ಜೊತೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಮಹೀಂದ್ರಾ ಹೊಸ ಥಾರ್

  2020ರ ಏಪ್ರಿಲ್ 1 ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಕಾರುಗಳನ್ನು ಉನ್ನತಿಕರಿಸುತ್ತಿದ್ದು, ಮಹೀಂದ್ರಾ ಕೂಡಾ ನೆಕ್ಸ್ಟ್ ಜನರೇಷನ್ ಥಾರ್ ಮಾದರಿಯನ್ನು ಸಹ ಹೊಸ ನಿಯಮಕ್ಕೆ ಅನುಗುಣವಾಗಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹೊಸ ಎಂಜಿನ್ ಮಾದರಿಯನ್ನು ಜೋಡಿಸಲಾಗಿರುವ ಹೊಸ ಥಾರ್ ಮಾದರಿಯನ್ನು ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹೊಸ ಕಾರು ಸ್ಕಾರ್ಪಿಯೋದಲ್ಲಿ ಜೋಡಣೆ ಮಾಡಿರುವ 2.2-ಡೀಸೆಲ್ ಮತ್ತು ಹೊಸದಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ ಎನ್ನಲಾಗಿದೆ.


 • ಪೆಟ್ರೋಲ್ ಎಂಜಿನ್ ಜೊತೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಮಹೀಂದ್ರಾ ಹೊಸ ಥಾರ್

  ದೇಶಾದ್ಯಂತ ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಹೊಸ ವಾಹನಗಳ ಎಂಜಿನ್‌ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಕೇಂದ್ರ ಸರ್ಕಾರವು ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ಕಡ್ಡಾಯ ನಿಯಮಗಳನ್ನು ಜಾರಿ ತರುತ್ತಿದೆ.


 • ಪೆಟ್ರೋಲ್ ಎಂಜಿನ್ ಜೊತೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಮಹೀಂದ್ರಾ ಹೊಸ ಥಾರ್

  ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 20202ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.


 • ಪೆಟ್ರೋಲ್ ಎಂಜಿನ್ ಜೊತೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಮಹೀಂದ್ರಾ ಹೊಸ ಥಾರ್

  ಇದರಲ್ಲಿ ಮಹೀಂದ್ರಾ ನಿರ್ಮಾಣದ ಟಿಯುವಿ300 ಪ್ಲಸ್, ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ನೆಕ್ಸ್ಟ್ ಜನರೇಷನ್ ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಮಹೀಂದ್ರಾ ಹೊಸ ಕಾರುಗಳು ಮುಂದಿನ ನಾಲ್ಕೈದು ತಿಂಗಳ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ ಎನ್ನಲಾಗಿದೆ. ಹೀಗಾಗಿ ಬಿಡುಗಡೆಯ ಉದ್ದೇಶಕ್ಕಾಗಿಯೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ತದನಂತರವಷ್ಟೇ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.


 • ಪೆಟ್ರೋಲ್ ಎಂಜಿನ್ ಜೊತೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಮಹೀಂದ್ರಾ ಹೊಸ ಥಾರ್

  ಇನ್ನು ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.


 • ಪೆಟ್ರೋಲ್ ಎಂಜಿನ್ ಜೊತೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಮಹೀಂದ್ರಾ ಹೊಸ ಥಾರ್

  ಹಾಗೆಯೇ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

  MOST READ: ಕಾರು ಅಪ್ಪಚ್ಚಿಯಾದರೂ ಬದುಕುಳಿದ ಕಾರು ಚಾಲಕ


 • ಪೆಟ್ರೋಲ್ ಎಂಜಿನ್ ಜೊತೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಮಹೀಂದ್ರಾ ಹೊಸ ಥಾರ್

  ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

  MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!


 • ಪೆಟ್ರೋಲ್ ಎಂಜಿನ್ ಜೊತೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಮಹೀಂದ್ರಾ ಹೊಸ ಥಾರ್

  ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

  MOST READ: ಸ್ಟಾರ್ ನಟಿಗೆ ಸಿಕ್ತು ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್


 • ಪೆಟ್ರೋಲ್ ಎಂಜಿನ್ ಜೊತೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಮಹೀಂದ್ರಾ ಹೊಸ ಥಾರ್

  ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ರೂ. 1.20 ಲಕ್ಷದಿಂದ ರೂ.2 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.

  Source: Cardekho
ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳ ಬಿಡುಗಡೆ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದ್ದು, ಡೆಡ್‌ಲೈನ್‌ಗೂ ಮುನ್ನವೇ ಮಹೀಂದ್ರಾ ಕೂಡಾ ತನ್ನ ಹೊಸ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ. ಇದರಲ್ಲಿ ನೆಕ್ಸ್ಟ್ ಜನರೇಷನ್ ಥಾರ್ ಪ್ರಮುಖವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೊಸ ಆವೃತ್ತಿಯು ಸಾಕಷ್ಟು ವಿಭಿನ್ನತೆ ಹೊಂದಿರಲಿವೆ.

   
 
ಹೆಲ್ತ್