Back
Home » ಇತ್ತೀಚಿನ
ರೆಡ್ಮಿ ನೋಟ್ 9 ಪ್ರೊ ವಿಮರ್ಶೆ: ಬಜೆಟ್‌ ಬೆಲೆಯಲ್ಲಿ ಆಕರ್ಷಕ ಫೋನ್!
Gizbot | 30th Mar, 2020 09:00 AM
 • ರೆಡ್ಮಿ ನೋಟ್ 9 ಪ್ರೊ

  ಶಿಯೋಮಿಯ ರೆಡ್ಮಿ ನೋಟ್ 9 ಪ್ರೊ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್‌ ಬೆಂಬಲ ಪಡೆದಿವೆ. ಹಾಗೆಯೇ ಪ್ರಾಥಮಿಕ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಈ ಫೋನ್‌ ಎರಡು ವೇರಿಯಂಟ್ ಮಾದರಿಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸ್ಟೋರೇಜ್ ಸಾಮರ್ಥ್ಯದಲ್ಲಿವೆ. ಆರಂಭಿಕ ವೇರಿಯಂಟ್‌ ಬೆಲೆಯು 12,999ರೂ. ಆಗಿದೆ. ರೆಡ್ಮಿ ನೋಟ್ 9 ಪ್ರೊ ಫೋನಿನ ಫೀಚರ್ಸ್‌ಗಳ ಕಾರ್ಯವೈಖರಿ ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.


 • ಡಿಸ್‌ಪ್ಲೇ ರಚನೆ ಮತ್ತು ಡಿಸೈನ್‌

  ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ವಿಶಾಲವಾಗಿದ್ದು, ಅಧಿಕ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ ಪ್ರಖರತೆಯು ಉತ್ತಮವಾಗಿದೆ. ಹಾಗೆಯೇ ಡಿಸ್‌ಪ್ಲೇಯು ಪಂಚ್ ಹೋಲ್ ಮಾದರಿಯಲ್ಲಿದ್ದು, ಈ ಫೋನ್ 60Hz ಡಿಸ್‌ಪ್ಲೇ ರೀಫ್ರೇಶ್ ರೇಟ್ ಹೊಂದಿದೆ ಹಾಗೂ ಟಚ್ ಸಾಂಪ್ಲಿಂಗ್ ರೇಟ್ 120Hz ಆಗಿದೆ. ಡಿಸ್‌ಪ್ಲೇ ಆಪರೇಟಿಂಗ್ ವೇಗವಾಗಿ ಇದೆ.


 • ಪ್ರೊಸೆಸರ್ ಕಾರ್ಯವೈಖರಿ

  ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್‌ ಅನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಆಂಡ್ರಾಯ್ಡ್ 10 ಓಎಸ್‌ ಫೋನಿನ ಆಪರೇಟಿಂಗ್ ನಲ್ಲಿ ಹೊಸತನ ನೀಡುತ್ತದೆ. ಹಾಗೆಯೇ ಈ ಫೋನ್ 4GB RAM +64GB ಮತ್ತು 6GB RAM + 128GB ಸ್ಟೋರೇಜ್‌ನ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಲು ಅವಕಾಶ ನೀಡಲಾಗಿದೆ.


 • 48ಎಂಪಿ ಕ್ಯಾಮೆರಾ ಸೆನ್ಸಾರ್

  ಇತ್ತೀಚಿಗೆ ಟ್ರೆಂಡಿಂಗ್‌ನಲ್ಲಿರುವ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಸಹ ಹೊಂದಿದೆ. ಈ ಫೋನಿನ ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದ್ದು, ಫೋಟೊಗ್ರಫಿಗೆ ಅತ್ಯುತ್ತಮ ಸಪೋರ್ಟ್‌ ನೀಡುತ್ತದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿಯ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಕ್ಯಾಮೆರಾ ಕ್ವಾಲಿಟಿಯು ಸಹ ಬೆಸ್ಟ್ ಇನ್ ಕ್ಲಾಸ್‌ ಆಗಿದೆ.


 • ಬ್ಯಾಟರಿ ಲೈಫ್ ಹೇಗಿದೆ

  ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಬ್ಯಾಟರಿ ಬ್ಯಾಕ್‌ಅಪ್ ಸಹ ಅತ್ಯುತ್ತಮವಾಗಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿರುವುದರಿಂದ ಫೋನ್ ಚಾರ್ಜ್ ಆಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಇದರೊಟ್ಟಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಇತ್ತೀಚಿನ ಫೀಚರ್ಸ್‌ಗಳು ಲಭ್ಯ ಇವೆ.


 • ಬೆಲೆ ?

  ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 4GB RAM +64GB ಸ್ಟೋರೇಜ್ ಸಾಮರ್ಥ್ಯದ ಬೇಸ್‌ ವೇರಿಯಂಟ್ ಬೆಲೆಯು 12,999ರೂ. ಆಗಿದೆ. ಹಾಗೆಯೇ 6GB RAM + 128GB ಸ್ಟೋರೇಜ್‌ ಹೈಎಂಡ್‌ ವೇರಿಯಂಟ್‌ ಬೆಲೆಯು 15,999ರೂ. ಆಗಿದೆ.


 • ಕೊನೆಯ ಮಾತು

  ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಸುಮಾರು 15000ರೂ ಪ್ರೈಸ್‌ಟ್ಯಾಗ್‌ನಲ್ಲಿ ಅತ್ಯುತ್ತಮ ಕ್ವಾಡ್‌ ಕ್ಯಾಮೆರಾ ಸ್ಮಾರ್ಟ್‌ಫೋನ್ ಆಗಿದೆ ಎಂದು ಹೇಳಬಹುದು. ಮುಖ್ಯ ಕ್ಯಾಮೆರಾ 48ಎಂಪಿ, ಅಧಿಕ ಬ್ಯಾಟರಿ ಲೈಫ್ ಮತ್ತು ಬೆಲೆ ಈ ಫೋನಿನ ಪ್ಲಸ್‌ ಪಾಯಿಂಟ್ ಆಗಿವೆ. ಇದೇ ಪ್ರೈಸ್‌ಟ್ಯಾಗ್‌ನಲ್ಲಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ31 ಸ್ಮಾರ್ಟ್‌ಫೋನ್‌ ಈ ಫೋನಿಗೆ ನೇರ ಸ್ಪರ್ಧೆ ಒಡ್ಡುತ್ತದೆ.
ಶಿಯೋಮಿ ಸಂಸ್ಥೆಯು ಇತ್ತೀಚಿಗೆ ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿದೆ. ಇದೇ ಮಾರ್ಚ್ 17ರಂದು ಮೊದಲ ಸೇಲ್ ಕಂಡಿರುವ ಈ ಸ್ಮಾರ್ಟ್‌ಫೋನ್ ಗ್ರಾಹಕರನ್ನು ಸೆಳೆದಿದೆ. ಕ್ವಾಡ್‌ ಕ್ಯಾಮೆರಾ, ಬಿಗ್ ಬ್ಯಾಟರಿ, ವೇಗದ ಪ್ರೊಸೆಸರ್ ಹಾಗೂ ಆಕರ್ಷಕ ಡಿಸೈನ್‌ಗಳಿಂದ ಈ ಸ್ಮಾರ್ಟ್‌ಫೋನ್ ಬಜೆಟ್‌ ಪ್ರೈಸ್‌ಟ್ಯಾಗ್‌ ರೇಂಜ್‌ನಲ್ಲಿ ಕಾಣಿಸಿಕೊಂಡಿದೆ.

   
 
ಹೆಲ್ತ್