Back
Home » ಇತ್ತೀಚಿನ
ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಆಗಲಿದೆ ಇನ್ಫಿನಿಕ್ಸ್ ಹಾಟ್ 9 ಸರಣಿಯ ಸ್ಮಾರ್ಟ್‌ಫೋನ್‌!
Gizbot | 23rd May, 2020 01:54 PM
 • ಸ್ಮಾರ್ಟ್‌ಫೋನ್‌

  ಹೌದು, ಹಾಂಗ್‌ಕಾಂಗ್‌ ಮೂಲದ ಸ್ಮಾರ್ಟ್‌ಫೋನ್‌ ತಯಾರಕ ಇನ್‌ಫಿನಿಕ್ಸ್‌ ಕಂಪೆನಿ ತನ್ನ ಇನ್‌ಫಿನಿಕ್ಸ್‌ ಹಾಟ್‌ 9 ಸರಣಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅತಿ ಶೀಘ್ರದಲ್ಲಿಯೇ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇನ್ನು ಟ್ರಾನ್ಸ್‌ಷನ್ ಹೋಲ್ಡಿಂಗ್ಸ್ ಒಡೆತನದ ಇನ್‌ಫಿನಿಕ್ಸ್‌ ಕಂಪನಿಯು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಇನ್ಫಿನಿಕ್ಸ್ ಹಾಟ್ 8 ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದರ ಮುಂದುವರೆದ ಸರಣಿಯ ಭಾಗವಾಗಿ ಇನ್ಫಿನಿಕ್ಸ್ ಹಾಟ್ 9 ಅನ್ನು ಬಿಡುಗಡೆ ಮಾಡಲಿದೆ ಎನ್ನಲಾಗ್ತಿದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ವಿನ್ಯಾಸ ಹಾಗೂ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.


 • ಡಿಸ್‌ಪ್ಲೇ

  ಇನ್ಫಿನಿಕ್ಸ್ ಹಾಟ್ 9 ಸ್ಮಾರ್ಟ್‌ಫೋನ್‌ 6.6-ಇಂಚಿನ ಡಿಸ್‌ಪ್ಲೇಯನ್ನ ಹೊಂದಿರಲಿದೆ ಎನ್ನಲಾಗ್ತಿದೆ. ಇನ್ನು ಈ ಡಿಸ್‌ಪ್ಲೇ ಎಚ್‌ಡಿ + ಐಪಿಎಸ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಪಂಚ್‌ಹೋಲ್‌ ವಿನ್ಯಾಸವನ್ನ ಹೊಂದಿದ್ದು, ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿರಲಿದೆ.


 • ಪ್ರೊಸೆಸರ್‌

  ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನ ಹೊಂದಿರುವ ಸಾದ್ಯತೆ ಇದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಬಹುದಾಗಿದೆ.


 • ಕ್ಯಾಮೆರಾ ವಿನ್ಯಾಸ

  ಇನ್‌ಫಿನಿಕ್ಸ್‌ ಹಾಟ್‌ 9 ಸರಣಿಯ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ AI ಬೆಂಬಲಿತ ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆ ಇದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.


 • ಬ್ಯಾಟರಿ ಮತ್ತು ಲಭ್ಯತೆ

  ಇನ್ನು ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವ ಬೆಲೆಗೆ ಲಭ್ಯವಾಗಲಿದೆ ಎನ್ನುವ ಮಾಹಿತಿ ಇನ್ನು ಕೂಡ ಲಭ್ಯವಾಗಿಲ್ಲ. ಆದರೆ ಇಗಾಗಲೇ ಇಂಡೋನೆಷ್ಯಾದಲ್ಲಿ ಬಿಡುಗಡೆ ಆಗಿರುವುದರಿಂದ ಇಂಡೋನೇಷ್ಯಾದಲ್ಲಿ ಇದರ ಬೆಲೆ IDR 1,699,000 (ಸರಿಸುಮಾರು 8,600 ರೂ.) ಆಗಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮ್ಯಾಟ್ ಬ್ಲ್ಯಾಕ್, ಸಯಾನ್, ವೈಲೆಟ್ ಮತ್ತು ಲೈಟ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ಇನ್‌ಫಿನಿಕ್ಸ್‌ ಕಂಪೆನಿ ಟೆಕ್‌ ವಲಯದಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಅಗ್ಗದ ಬೆಲೆಯಲ್ಲಿ ಲಾಂಚ್ ಮಾಡಿದೆ. ಸದ್ಯ ಇದೀಗ ಹೊಸದಾಗಿ ತನ್ನ ಜನಪ್ರಿಯ ಇನ್‌ಫಿನಿಕ್ಸ್‌ ಹಾಟ್‌ 9 ಸರಣಿಯ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇದರ ಬಗ್ಗೆ ಇನ್ಫಿನಿಕ್ಸ್ ಮೊಬೈಲ್ ತನ್ನ ಅಧಿಕೃತ ವೆಬ್‌ಸೈಟ್‌ ಮೂಲಕ ಇನ್‌ಫಿನಿಕ್ಸ್‌ ಹಾಟ್‌ 9 ಸರಣಿಯ ಸ್ಮಾರ್ಟ್‌ಫೋನ್‌ ವಿನ್ಯಾಸದ ಟೀಸರ್ ವೀಡಿಯೊವನ್ನು ಬಿಡುಗಡೆ ಮಾಡಿದೆ.

   
 
ಹೆಲ್ತ್