Back
Home » ಇತ್ತೀಚಿನ
ರಿಯಲ್‌ಮಿ 6s ಸ್ಮಾರ್ಟ್‌ಫೋನ್‌ ಬಿಡುಗಡೆ!..ಆಕರ್ಷಕ ಕ್ಯಾಮೆರಾ ಫೀಚರ್ಸ್!
Gizbot | 27th May, 2020 12:00 PM
 • ರಿಯಲ್‌ಮಿ

  ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ 6s ಸ್ಮಾರ್ಟ್‌ಫೋನ್‌ ಅನ್ನು ಯುರೋಪಿನ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G90T SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಅಲ್ಲದೆ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾ ಒಳಗೊಂಡ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದಲ್ಲದೆ ರಿಯಲ್‌ಮಿ ಕಂಪೆನಿಯ ಈ ಹೊಸ ಸ್ಮಾರ್ಟ್‌ಫೋನ್‌ ಇನ್ನು ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.


 • ಡಿಸ್‌ಪ್ಲೇ

  ರಿಯಲ್‌ಮಿ 6s ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಪಂಚ್‌ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಅಲ್ಲದೆ ಈ ಡಿಸ್‌ಪ್ಲೇಯು 90.5% ಸ್ಕ್ರಿನ್‌ ಟು ಬಾಡಿ ಅನುಪಾತವನ್ನ ಹೊಂದಿದೆ.


 • ಪ್ರೊಸೆಸರ್‌

  ಇನ್ನು ಈ ಸ್ಮಾರ್ಟ್‌ಫೋನ್‌ 2.05GHz ಮೀಡಿಯಾ ಟೆಕ್ ಹಿಲಿಯೊ G90 T ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM + 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳಬಹುದಾಗಿದೆ.


 • ಕ್ಯಾಮೆರಾ ವಿನ್ಯಾಸ

  ರಿಯಲ್‌ಮಿ 6s ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌, 119 ಡಿಗ್ರಿ ವ್ಯೂವ್‌ ಲೆನ್ಸ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನ ಒಳಗೊಂಡಿದೆ.


 • ಬ್ಯಾಟರಿ ಮತ್ತು ಇತರೆ

  ಇನ್ನು ಈ ಸ್ಮಾರ್ಟ್‌ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಅಲ್ಲದೆ ಇದು 30W ಫ್ಲ್ಯಾಶ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ , ಬ್ಲೂಟೂತ್ ವಿ 5, GPS, NFC, 3.5mm ಆಡಿಯೊ ಜ್ಯಾಕ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.


 • ಬೆಲೆ ಮತ್ತು ಲಭ್ಯತೆ

  ರಿಯಲ್‌ಮಿ 6s ಸ್ಮಾರ್ಟ್‌ಫೋನ್‌ ಯುರೋಪಿನಲ್ಲಿ ಯುರೋ 199 (ಸರಿಸುಮಾರು ರೂ. 16,500) ಬೆಲೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎಕ್ಲಿಪ್ಸ್ ಬ್ಲ್ಯಾಕ್ ಮತ್ತು ಲೂನಾರ್ ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದ್ದು, ಇದೇ ಜೂನ್ 2 ರಿಂದ ಲಭ್ಯವಾಗಲಿದೆ.
ಟೆಕ್‌ಮಾರುಕಟ್ಟೆಯಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಭರಾಟೆ ನಡೆಯುತ್ತಲೇ ಇರುತ್ತೆ. ಪ್ರತಿನಿತ್ಯ ಸ್ಮಾರ್ಟ್‌ಫೋನ್‌ ಕಂಪೆನಿಗಳು ತಮ್ಮ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸುತ್ತಲೇ ಇರುತ್ತವೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಕೈ ನಲ್ಲಿ ರಿಂಗಣಿಸುತ್ತಿವೆ. ಆದರೂ ಗ್ರಾಹಕರು ಮಾತ್ರ ತಮ್ಮ ನೆಚ್ಚಿನ ಬ್ರ್ಯಾಂಡ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುತ್ತಾರೆ. ಇವುಗಳಲ್ಲಿ ರಿಯಲ್‌ಮಿ ಕಂಪೆನಿ ಕೂಡ ಒಂದಾಗಿದೆ. ಸ್ಮಾರ್ಟ್‌ಫೋನ್‌ ವಲಯದಲ್ಲಿ ಏರುಗತಿಯಲ್ಲಿ ಜನಪ್ರಿಯತೆ ಪಡೆದುಕೊಳ್ಳುತ್ತಿರುವ ರಿಯಲ್‌ಮಿ ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

   
 
ಹೆಲ್ತ್