Back
Home » ಇತ್ತೀಚಿನ
ಇಂದು Redmi Note 9 Pro ಫೋನಿನ ಫ್ಲ್ಯಾಶ್ ಸೇಲ್‌!
Gizbot | 2nd Jun, 2020 11:03 AM
 • ಇ-ಕಾಮರ್ಸ್

  ಜನಪ್ರಿಯ ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತು ಅಧಿಕೃತ mi.com ವೆಬ್‌ಸೈಟ್‌ನಲ್ಲಿ ನಡೆಯುವ ಫ್ಲ್ಯಾಶ್‌ ಸೇಲ್‌ನಲ್ಲಿ ಗ್ರಾಹಕರು ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಖರೀದಿಸಬಹುದಾಗಿದೆ. ಈ ಫೋನಿನ ಆರಂಭಿಕ ಬೆಲೆಯು 13,999ರೂ. ಆಗಿದ್ದು, ಹಾಗೆಯೇ ಈ ಫೋನ್ ಖರೀದಿಸುವ ಗ್ರಾಹಕರಿಗೆ ಏರ್‌ಟೆಲ್‌ನ ಕೆಲವು ಆಯ್ದ ಪ್ಲ್ಯಾನ್‌ಗಳಿಗೆ ಡಬಲ್ ಡೇಟಾ ಪ್ರಯೋಜನ ಸೌಲಭ್ಯ ಸಹ ದೊರೆಯುತ್ತದೆ. ಇನ್ನು ಈ ಫೋನ್ ಅರೋರಾ ಬ್ಲೂ, ಗ್ಲೇಸಿಯರ್ ವೈಟ್ ಮತ್ತು ಇಂಟರ್ ಸ್ಟೆಲ್ಲಾರ್ ಬ್ಲ್ಯಾಕ್ ಎಂಬ ಮೂರು ವಿಶೇಷ ಬಣ್ಣಗಳ ಆಯ್ಕೆಗಳನ್ನು ಈ ಫೋನ್ ಹೊಂದಿದೆ. ಉಳಿದಂತೆ ಇತರೆ ಫೀಚರ್ಸ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.


 • ಡಿಸ್‌ಪ್ಲೇ ರಚನೆ

  ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಮಾದರಿಯಲ್ಲಿದ್ದು, ಈ ಫೋನ್ 60Hz ಡಿಸ್‌ಪ್ಲೇ ರೀಫ್ರೇಶ್ ರೇಟ್ ಹೊಂದಿದೆ ಹಾಗೂ ಟಚ್ ಸಾಂಪ್ಲಿಂಗ್ ರೇಟ್ 120Hz ಆಗಿದೆ.


 • ಪ್ರೊಸೆಸರ್ ಯಾವುದು

  ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720 ಪ್ರೊಸೆಸರ್‌ ಅನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM +64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಲು ಅವಕಾಶ ನೀಡಲಾಗಿದೆ.


 • ಕ್ಯಾಮೆರಾ ರಚನೆ

  ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿಯ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.


 • ಬ್ಯಾಟರಿ ಬಲ

  ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರೊಂದಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಇತ್ತೀಚಿನ ಫೀಚರ್ಸ್‌ಗಳು ಲಭ್ಯ ಇವೆ.


 • ಬೆಲೆ ಎಷ್ಟು?

  ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್ ಆರಂಭಿಕ ವೇರಿಯಂಟ್ ಬೆಲೆಯು 13,999ರೂ. ಆಗಿದೆ. 6GB RAM ವೇರಿಯಂಟ್ ಬೆಲೆಯು 16,999ರೂ. ಆಗಿದೆ. ಇಂದು(ಜೂನ್.2) ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತು ಅಧಿಕೃತ mi.com ವೆಬ್‌ಸೈಟ್‌ನಲ್ಲಿ ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್‌ನ ಫ್ಲ್ಯಾಶ್‌ ಸೇಲ್ ನಡೆಯಲಿದೆ.
ಲಾಕ್‌ಡೌನ್ ವೇಳೆ ಬಿಡುಗಡೆ ಆಗಿರುವ ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಫೋನ್ ಈಗಾಗಲೆ ಸೇಲ್ ಕಂಡಿದ್ದು, ಇಂದು ಅಮೆಜಾನ್ ಇ ಕಾಮರ್ಸ್‌ನಲ್ಲಿ ಇಂದು (ಜೂನ್‌.2) ಮಧ್ಯಾಹ್ನ 12ರಂದು ಮತ್ತೆ ಫ್ಲ್ಯಾಶ್‌ ಸೇಲ್ ನಡೆಯಲಿದೆ. ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ಹಾಗೂ 5,020mAh ಬಿಗ್ ಬ್ಯಾಟರಿ ಈ ಫೋನಿನ ಪ್ರಮುಖ ಹೈಲೈಟ್ಸ್‌ಗಳಾಗಿವೆ.

   
 
ಹೆಲ್ತ್