Back
Home » ಇತ್ತೀಚಿನ
ಇಂದು ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ ಫ್ಲ್ಯಾಶ್‌ ಸೇಲ್!
Gizbot | 5th Jun, 2020 11:05 AM
  • ರಿಯಲ್‌ಮಿ Narzo 10A

    ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ 5ಎಂಪಿಯ ಸೆಲ್ಫಿ ಕ್ಯಾಮೆರಾ ಪಡೆದಿದ್ದು, 5000mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಮೀಡಿಯಾ ಟೆಕ್ ಹಿಲಿಯೊ G70 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಈ ಫೋನಿನ ಆರಂಭಿಕ ಬೆಲೆಯು 8,499ರೂ.ಗಳಾಗಿದೆ. ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.


  • ಡಿಸ್‌ಪ್ಲೇ ರಚನೆ

    ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ ಪ್ಲಸ್‌ ಆಗಿದ್ದು ಮಿನಿ ಡ್ರಾಪ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಸ್ಕ್ರೀನ್‌ 2.5 ಡಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್‌ನಿಂದ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ವಿಡಿಯೊ ವೀಕ್ಷಣೆಗೆ ಡಿಸ್‌ಪ್ಲೇ ಅತ್ಯುತ್ತಮವಾಗಿದೆ.


  • ಯಾವ ಪ್ರೊಸೆಸರ್‌

    ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G70 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೆ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಇಂಟರ್‌ನಲ್ ಸ್ಟೊರೇಜ್‌ ಅನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡಲಾಗಿದೆ.


  • ತ್ರಿವಳಿ ಕ್ಯಾಮೆರಾ

    ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಮೂರನೇ ಕ್ಯಾಮೆರಾ ಸಹ 2 ಮೆಗಾಪಿಕ್ಸೆಲ್ ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.


  • ಬಿಗ್ ಬ್ಯಾಟರಿ

    ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 4G LTE, ವೈ-ಫೈ, ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆಗಳು ಸೇರಿವೆ. 164.4x75x8.95mm ಸುತ್ತಳತೆ ಪಡೆದಿದೆ.


  • ಬೆಲೆ ಎಷ್ಟು?

    ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್‌ ಬೆಲೆ 8,499ರೂ.ಆಗಿದ್ದು, ಈ ಸ್ಮಾರ್ಟ್‌ಫೋನ್‌ ಬ್ಲೂ ಮತ್ತು ವೈಟ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ಗಳು ಇಂದು ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ಮಿ.ಕಾಮ್ ತಾಣಗಳಲ್ಲಿ ಖರೀದಿಗೆ ಲಭ್ಯವಿವೆ.




ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಚೀನಾ ಮೂಲದ ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ಮಾರುಕಟ್ಟೆಗೆ ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್ ಸರಣಿಯನ್ನು ಅನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿನ ಬಜೆಟ್‌ ಬೆಲೆಯ ರಿಯಲ್‌ಮಿ Narzo 10A ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12ಗಂಟೆಗೆ ಫ್ಲಿಪ್‌ಕಾರ್ಟ್‌ ಹಾಗೂ ರಿಯಲ್‌ ಮಿ ವೆಬ್‌ಸೈಟ್‌ ಮೂಲಕ ಸೇಲ್ ಕಾಣಲಿದೆ.

   
 
ಹೆಲ್ತ್