Back
Home » ಇತ್ತೀಚಿನ
ಮೊಟೊ G ಫಾಸ್ಟ್ ಮತ್ತು ಮೊಟೊ E (2020) ಸ್ಮಾರ್ಟ್‌ಫೋನ್‌ ಬಿಡುಗಡೆ!
Gizbot | 6th Jun, 2020 11:59 AM
 • ಮೊಟೊರೊಲಾ

  ಹೌದು, ಮೊಟೊರೊಲಾ ಕಂಪೆನಿ ಮೊಟೊ G ಫಾಸ್ಟ್ ಮತ್ತು ಮೋಟೋ E (2020) ಅನ್ನು ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು ಪಂಚ್-ಹೋಲ್‌ ಡಿಸ್‌ಪ್ಲೇಯನ್ನ ಒಳಗೊಂಡಿದೆ. ಇನ್ನು ಮೋಟೋ ಜಿ ಸರಣಿಯಲ್ಲಿ ಮೋಟೋ ಜಿ ಫಾಸ್ಟ್ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಆಗಿದ್ದರೆ, ಮೋಟೋ E(2020) ಸ್ಮಾರ್ಟ್‌ಫೊನ್‌ ಈಗಾಗಲೇ ಲಭ್ಯವಿರುವ ಮೊಟೊ E ಸರಣಿಯ ಏಳನೇ ತಲೆಮಾರಿನ ಮಾದರಿಯಾಗಿ ಬಿಡುಗಡೆ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಿಶೇಷತೆ ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಒದಿರಿ.


 • ಮೊಟೊ G ಫಾಸ್ಟ್ ಡಿಸ್‌ಪ್ಲೇ

  ಮೊಟೊ G ಫಾಸ್ಟ್ ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಆಗಿದೆ. ಇದಲ್ಲದೆ ಈ ಡಿಸ್‌ಪ್ಲೇಯು 268PPI ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ಅಲ್ಲದೆ ಈ ಡಿಸ್‌ಪ್ಲೇಯು 19:9 ರಚನೆಯ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ವಿಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.


 • ಮೊಟೊ G ಫಾಸ್ಟ್ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

  ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್‌ ಅನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹಣಾ ಸಾಮರ್ಥ್ಯದ ವರೆಗೆ ವಿಸ್ತರಣೆ ಮಾಡಬಹುದಾಗಿದೆ.


 • ಮೊಟೊ G ಫಾಸ್ಟ್ ಸ್ಮಾರ್ಟ್‌ಫೋನ್‌ ಕ್ಯಾಮೆರಾ ವಿನ್ಯಾಸ

  ಮೊಟೊ G ಫಾಸ್ಟ್ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.


 • ಮೊಟೊ G ಫಾಸ್ಟ್ ಸ್ಮಾರ್ಟ್‌ಫೋನ್‌ ಬ್ಯಾಟರಿ ಮತ್ತುಇತರೆ

  ಇನ್ನು ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTV, ವೈ-ಫೈ, ಬ್ಲೂಟೂತ್ ವಿ 5.0, 3.5mm ಹೆಡ್‌ಫೋನ್ ಜ್ಯಾಕ್‌ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್ ಅನ್ನು ಸಹ ಒಳಗೊಂಡಿದೆ.


 • ಮೋಟೋ E(2020) ಸ್ಮಾರ್ಟ್‌ಫೋನ್‌

  ಮೋಟೋ E(2020) ಸ್ಮಾರ್ಟ್‌ಫೋನ್‌ 720x1,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.2-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಮ್ಯಾಕ್ಸ್ ವಿಷನ್ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 271PPI ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು 19:9 ರಚನೆಯ ಅನುಪಾತವನ್ನು ಹೊಂದಿದೆ.


 • ಮೋಟೋ E(2020) ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

  ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 632 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಣೆ ಮಾಡಬಹುದಾಗಿದೆ.


 • ಮೋಟೋ E(2020) ಸ್ಮಾರ್ಟ್‌ಫೋನ್‌ ಕ್ಯಾಮೆರಾ ವಿನ್ಯಾಸ

  ಮೋಟೋ E(2020) ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನ ನೀಡಲಾಗಿದೆ.


 • ಬ್ಯಾಟರಿ ಮತ್ತು ಇತರೆ

  ಇನ್ನು ಈ ಸ್ಮಾರ್ಟ್‌ಫೋನ್‌ 3,550mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 5W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ , ಬ್ಲೂಟೂತ್ ವಿ 4.2, ಮೈಕ್ರೋ-ಯುಎಸ್‌ಬಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್, ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ.


 • ಬೆಲೆ ಮತ್ತು ಲಭ್ಯತೆ

  ಸದ್ಯ ಮೋಟೋ G ಫಾಸ್ಟ್ ಸ್ಮಾರ್ಟ್‌ಫೋನ್‌ 3GB RAM + 32GB ಶೇಖರಣಾ ರೂಪಾಂತರಕ್ಕೆ $ 199.99 (ಸುಮಾರು ರೂ. 15,100) ನಿಗದಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪರ್ಲ್ ವೈಟ್ ಕಲರ್ ಆಯ್ಕೆಯಲ್ಲಿ ಲಬ್ಯವಾಗಲಿದೆ. ಇನ್ನು ಮೋಟೋ E (2020) ಸ್ಮಾರ್ಟ್‌ಫೋನ್‌ ಬೆಲೆ $ 149.99 (ಸುಮಾರು ರೂ. 11,300)ಕ್ಕೆ ನಿಗದಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡ್ನೈಟ್ ಬ್ಲೂ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ.




ಸ್ಮಾರ್ಟ್‌ಫೋನ್ ವಲಯದಲ್ಲಿ ಮೊಟೊರೊಲಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದಲೇ ಗುರುತಿಸಿಕೊಂಡಿದೆ. ತನ್ನ ವಿಶೇಷ ವಿನ್ಯಾಸ ಹಾಗೂ ವೈವಿಧ್ಯಮಯ ಫೀಚರ್ಸ್‌ಗಳಿಂದ ಮಾರುಕಟ್ಟೆಯಲ್ಲಿ ತನ್ನದೇ ಆದ ಜನಪ್ರಿಯತೆಯನ್ನ ಗಳಿಸಿಕೊಂಡಿದೆ. ಇನ್ನು ಈಗಾಗಲೇ ಮೊಟೊರೊಲಾ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದ್ದು, ಇದೀಗ ತನ್ನ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ.

   
 
ಹೆಲ್ತ್