Back
Home » ಇತ್ತೀಚಿನ
ಜುಲೈ 6ಕ್ಕೆ ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್‌ ಸೇಲ್!
Gizbot | 1st Jul, 2020 11:02 AM
  • ಒನ್ ಫ್ಯೂಶನ್ ಪ್ಲಸ್‌

    ಹೌದು, ಮೊಟೊರೊಲಾ ಸಂಸ್ಥೆಯ ಹೊಸ ಒನ್ ಫ್ಯೂಶನ್ ಪ್ಲಸ್‌ ಫೋನ್ ಮತ್ತೆ ಫ್ಲ್ಯಾಶ್‌ ಸೇಲ್ ಶುರುಮಾಡಲಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಹಾಗೂ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪ್ರಮುಖ ಹೈಲೈಟ್ಸ್‌ಗಳಾಗಿವೆ. ಇನ್ನು ಗ್ರಾಹಕರು ಆಕ್ಸಸ್ ಬ್ಯಾಂಕ್ ಕಾರ್ಡ್ ಬಳಸಿ ಫೋನ್ ಖರೀದಿಸಿದರೇ ಶೇ. 5% ರಿಯಾಯಿತಿ ಸಿಗಲಿದೆ. ಈ ಫೋನ್ ಮೂನ್‌ಲೈಟ್ ವೈಟ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ತಿಳಿಯಲು ಮುಂದೆ ಓದಿರಿ.


  • ಡಿಸ್‌ಪ್ಲೇ ಮತ್ತು ಡಿಸೈನ್

    ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ಹೆಚ್‌ಡಿ + ಡಿಸ್‌ಪ್ಲೇ ಆಗಿದ್ದು, ಇದು 19.5: 9 ರಚನೆಯ ಅನುಪಾತವನ್ನ ಹೊಂದಿದೆ. ಅಲ್ಲದೆ 395PPI ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ.


  • ಪ್ರೊಸೆಸರ್‌ ಬಲ

    ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 730G SoC ಪ್ರೊಸೆಸರ್ ಅನ್ನು ಹೊಂದಿದ್ದು, ಸ್ಟಾಕ್ ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ. ಇದಲ್ಲದೆ ಹೈಬ್ರಿಡ್ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1ಟಿಬಿ ವರೆಗೆ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ.


  • ಕ್ಯಾಮೆರಾ ರಚನೆ

    ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ ಪಾಪ್-ಅಪ್ ಕ್ಯಾಮೆರಾ ಮಾಡ್ಯೂಲ್ ಹೊಂದಿದ್ದು 16 ಮೆಗಾಪಿಕ್ಸೆಲ್ ಸೆಲ್ಫಿ ಸೆನ್ಸಾರ್‌ ಅನ್ನು ಹೊಂದಿದೆ.


  • ಬ್ಯಾಟರಿ ಮತ್ತು ಇತರೆ

    ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ V5, ವೈ-ಫೈ, GPS, 3.5mm ಆಡಿಯೊ ಜ್ಯಾಕ್, USB ಟೈಪ್-ಸಿ ಪೋರ್ಟ್, ಮತ್ತು ಡ್ಯುಯಲ್ 4G VOLTE ಅನ್ನು ಬೆಂಬಲಿಸಲಿದೆ.


  • ಬೆಲೆ ಮತ್ತು ಲಭ್ಯತೆ

    ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ ಇದೇ ಜುಲೈ 6ರಂದು ಫ್ಲಿಪ್‌ಕಾರ್ಟ್‌ನಲ್ಲಿ ಮತ್ತೆ ಫ್ಲ್ಯಾಶ್‌ ಸೇಲ್ ನಡೆಯಲಿದೆ. ಈ ಫೋನಿನ ಆರಂಭಿಕ ಬೆಲೆಯು 16,999 ರೂ. ಆಗಿದೆ. ಇನ್ನು ಈ ಫೋನ್ ಮೂನ್‌ಲೈಟ್ ವೈಟ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.




ಮೊಟೊರೊಲಾ ಮೊಬೈಲ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್‌ ಜೂ.24ರಂದು ಫ್ಲ್ಯಾಶ್‌ ಸೇಲ್‌ ನಡೆದಿತ್ತು. ಇದೀಗ ಈ ಫೋನ್ ಮತ್ತೆ ಇದೇ ಜುಲೈ 6ರಂದು ಮಧ್ಯಾಹ್ನ 12ಕ್ಕೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಫ್ಲ್ಯಾಶ್‌ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 16,999ರೂ. ಆಗಿದೆ.

 
ಹೆಲ್ತ್