Back
Home » ಇತ್ತೀಚಿನ
ಫ್ಲಿಪ್‌ಕಾರ್ಟ್‌ನಲ್ಲಿ ಇಂದು ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಸೇಲ್‌!
Gizbot | 5th Aug, 2020 11:03 AM
 • ರಿಯಲ್‌ಮಿ C11

  ಹೌದು, ರಿಯಲ್‌ಮಿ ಕಂಪೆನಿ ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಇಂದು (ಆ.5) ಫ್ಲಿಪ್‌ಕಾರ್ಟ್‌ನಲ್ಲಿ ಸೇಲ್‌ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಆಂತರಿಕ ಸ್ಟೋರೇಜ್‌ ಸಾಮರ್ಥ್ಯದ ಒಂದೇ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದೆ. 5000mAh ಬ್ಯಾಟರಿ ಪವರ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.


 • ಡಿಸ್‌ಪ್ಲೇ ಡಿಸೈನ್‌

  ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು IPS LCD ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯುಸ್ಕ್ರೀನ್-ಟು-ಬಾಡಿ 88.7 % ಅನುಪಾತವನ್ನು ಹೊಂದಿದೆ.


 • ಪ್ರೊಸೆಸರ್‌ ಸಾಮರ್ಥ್ಯ

  ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಹೊಂದಿದೆ. ಜೊತೆಗೆ 2.3GHz ಗಡಿಯಾರದ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.


 • ಕ್ಯಾಮೆರಾ ವಿನ್ಯಾಸ

  ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಪಿಕ್ಸೆಲ್ 4 ಸರಣಿಯಂತೆಯೇ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಶೂಟರ್ ಆಗಿದ್ದು, ಕ್ರೋಮಾ ಬೂಸ್ಟ್‌ಗೆ ಬೆಂಬಲ ನೀಡುತ್ತದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಇದು ಎಐ ಬ್ಯೂಟಿ ಮೋಡ್ ಅನ್ನು ಹೊಂದಿದೆ.


 • ಬ್ಯಾಟರಿ ಮತ್ತು ಇತರೆ

  ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 40 ದಿನಗಳ ಸ್ಟ್ಯಾಂಡ್‌ ಬೈ ಟೈಂ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಬ್ಲೂಟೂತ್ 5.0, ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸುತ್ತದೆ.


 • ಬೆಲೆ ಮತ್ತು ಲಭ್ಯತೆ

  ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ ಬೆಲೆ 7,499 ರೂ. ಆಗಿದ್ದು, ಈ ಸ್ಮಾರ್ಟ್‌ಫೋನ್‌ ಇಂದು ರಂದು ಫ್ಲಿಪ್‌ಕಾರ್ಟ್‌ ತಾಣ ಮತ್ತು ರಿಯಲ್‌ಮಿ ವೆಬ್‌ಸೈಟ್‌ ಮೂಲಕ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಚ್‌ಗ್ರೀನ್‌ ಮತ್ತು ರಿಚ್‌ ಗ್ರೇ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ರಿಯಲ್‌ಮಿ ಕಂಪನಿಯು ಹೊಸದಾಗಿ ಲಾಂಚ್ ಮಾಡಿರುವ ರಿಯಲ್‌ಮಿ C11 ಸ್ಮಾರ್ಟ್‌ಫೋನಿನ ಈಗಾಗಲೇ ಆನ್‌ಲೈನ್‌ ತಾಣಗಳ ಮೂಲಕ ಸೇಲ್‌ ಕಂಡಿದೆ. ಈ ಸ್ಮಾರ್ಟ್‌ಫೋನ್ ಇಂದು (ಆ.5) ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ಮಿಯ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 12ರಂದು ಮತ್ತೆ ಮಾರಾಟ ಕಾಣಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 7,499ರೂ.ಗಳು ಆಗಿದೆ.

 
ಹೆಲ್ತ್