Back
Home » ಇತ್ತೀಚಿನ
ಕೋಲಾರದಲ್ಲಿ ಐಫೋನ್ ತಯಾರಿಕ ಘಟಕ!..ಸ್ಥಳೀಯರಿಗೆ ಉದ್ಯೋಗ ಅವಕಾಶ!
Gizbot | 14th Aug, 2020 08:44 AM

ವಿಶ್ವ ಟೆಕ್ ದಿಗ್ಗಜ ಆಪಲ್ ಸಂಸ್ಥೆಯು ಇದೀಗ ಕೋಲಾರದಲ್ಲಿ ಐಫೋನ್ ತಯಾರಿಕೆ ಘಟಕವನ್ನು ಶುರುಮಾಡಲಿದ್ದು, ಸ್ಥಳೀಯರಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಕೊರೊನಾ ವೈರಸ್‌ ಹಾವಳಿಯಿಂದಾಗಿ ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಈ ಅವಧಿಯಲ್ಲಿ ಐಫೋನ್ ತಯಾರಿಕಾ ಕೈಗಾರಿಕೆ ಚಿನ್ನದ ನಾಡಿನ ಜನರಿಗೆ ಉದ್ಯೋಗದ ಆಶಾಕಿರಣ ಮೂಡಿಸಿದೆ.

ಹೌದು, ಪ್ರತಿಷ್ಠಿತ ಆಪಲ್ ಸಂಸ್ಥೆಯು ತೈವಾನ್ ಮೂಲದ ವಿಸ್ಟ್ರಾನ್ ಸುಮಾರು 2900 ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆಯೊಂದಿಗೆ ಇನ್ನೇನು ಕಾರ್ಯಾರಂಭ ಮಾಡಲಿದೆ. ವಿಸ್ಟ್ರಾನ್ ಕಂಪನಿಯಲ್ಲಿ ಎಲೆಕ್ಟ್ರಾನಿಕ ಉಪಕರಣ ತಯಾರಿಕೆ ಮಾಡಲಾಗುತ್ತಿದೆ. ಇದಕ್ಕಾಗಿ ಜಿಲ್ಲಾಡಳಿತ ವತಿಯಿಂದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 43 ಎಕರೆ ಭೂಮಿಯನ್ನ ಸಹ ನೀಡಲಾಗಿದ್ದು, ಸುಮಾರು 10 ಸಾವಿರ ಉದ್ಯೋಗಾವಕಾಶಗಳು ದೊರೆಯುವ ಸಾಧ್ಯತೆಗಳಿವೆ.

ಆಪಲ್ ಕಂಪನಿ ಘಟಕ ಬರುವ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದ್ದು, ಈ ಹಿನ್ನಲೆಯಲ್ಲಿ ಕಂಪನಿಯಲ್ಲಿ ಉದ್ಯೋಗ ನೇಮಕಾತಿಗಾಗಿ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಪ್ರಸ್ತುತ ಸಂಸ್ಥೆಯಲ್ಲಿ 2300 ಹುದ್ದೆ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಮೊದಲ ಹಂತದಲ್ಲಿ 5000 ಜನರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ 2700 ಜನರು ನೇಮಕಗೊಂಡಿದ್ದು ಅವರಿಗೆ ತರಬೇತಿ ನೀಡಲಾಗಿದೆ.

ಇನ್ನು ಮುಖ್ಯವಾಗಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಮಹಿಳೆಯರಿಗೆ ಹೆಚ್ಚು ಹೆಚ್ಚು ಹುದ್ದೆ ನೀಡಲಾಗುತ್ತಿದೆ. ಉಳಿದಂತೆ ಮುಂದಿನ ಮಾರ್ಚ್ ತಿಂಗಳಲ್ಲಿ ಉಳಿದ 5000 ಮಂದಿಗೆ ಉದ್ಯೋಗ ನೀಡಲು ಸಿದ್ದತೆ ನಡೆಸಲಾಗಿದೆ.

 
ಹೆಲ್ತ್