Back
Home » ಇತ್ತೀಚಿನ
ಇಂದು ಮತ್ತೆ ಅಗ್ಗದ ರೆಡ್ಮಿ 9 ಸ್ಮಾರ್ಟ್‌ಫೋನ್ ಸೇಲ್!
Gizbot | 21st Sep, 2020 11:10 AM
 • ಸ್ಮಾರ್ಟ್‌ಫೋನ್

  ರೆಡ್ಮಿ 9 ಸ್ಮಾರ್ಟ್‌ಫೋನ್ ಮಾರಾಟ ಅಮೆಜಾನ್‌ ತಾಣದಲ್ಲಿ ಇಂದು (ಸೆ.21) ನಡೆಯಲಿದೆ. ಆಯ್ದ ಬ್ಯಾಂಕ್‌ಗಳಿಂದ ನೋ ಕಾಸ್ಟ್‌ EMI ಸೌಲಭ್ಯ ಲಭ್ಯ. ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಹಾಗೂ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 5020mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ 4GB + 64GB ಮತ್ತು 4GB + 128GB ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ. ಹಾಗಾದರೇ ರೆಡ್ಮಿ 9 ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.


 • ಡಿಸ್‌ಪ್ಲೇ ರಚನೆ

  ರೆಡ್ಮಿ 9 ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ವಾಟರ್ ಡ್ರಾಪ್ ನಾಚ್ ಮಾದರಿಯಲ್ಲಿದ್ದು, ಸುತ್ತಲೂ ತೆಳುವಾದ ಅಂಚನ್ನು ಹೊಂದಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್ 3 ರಚನೆಯನ್ನು ಪಡೆದಿದೆ.


 • ಪ್ರೊಸೆಸರ್ ಯಾವುದು

  ರೆಡ್ಮಿ 9 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್‌ಅ ನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB ಮತ್ತು 3GB RAM ಹಾಗೂ 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಲು ಅವಕಾಶ ನೀಡಲಾಗಿದೆ.


 • ಕ್ಯಾಮೆರಾ ರಚನೆ

  ರೆಡ್ಮಿ 9 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 9ಎಂಪಿಯ ವೈಲ್ಡ್‌ ಆಂಗಲ್ ಲೆನ್ಸ್‌ ಹೊಂದಿದೆ. ಇನ್ನು ತೃತೀಯ ಕ್ಯಾಮೆರಾವು 5ಎಂಪಿ ಹಾಗೂ ನಾಲ್ಕನೇ ಕ್ಯಾಮೆರಾ 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 8ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.


 • ಬ್ಯಾಟರಿ ಬಲ

  ರೆಡ್ಮಿ 9 ಸ್ಮಾರ್ಟ್‌ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದ್ದು, ಇದರೊಂದಿಗೆ 18W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಹಾಗೆಯೇ ಯುಎಸ್‌ಬಿ-ಸಿ ಪೋರ್ಟ್‌, ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಇತ್ತೀಚಿನ ಫೀಚರ್ಸ್‌ಗಳು ಲಭ್ಯ ಇವೆ.
ಶಿಯೋಮಿ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ಅಗ್ಗದ ಬೆಲೆಯ ರೆಡ್ಮಿ 9 ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಸೇಲ್ ಇಂದು ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 8,999 ರೂ.ಗಳು ಆಗಿದೆ.

 
ಹೆಲ್ತ್