Back
Home » ಇತ್ತೀಚಿನ
ಅಮೆಜಾನ್‌ನಲ್ಲಿ ಇಂದು ರೆಡ್ಮಿ 9A ಸ್ಮಾರ್ಟ್‌ಫೋನ್‌ ಸೇಲ್!.ಬೆಲೆ ಜಸ್ಟ್‌ 6,799ರೂ!
Gizbot | 22nd Sep, 2020 09:50 AM
 • ರೆಡ್ಮಿ 9A

  ರೆಡ್ಮಿ 9A ಸ್ಮಾರ್ಟ್‌ಫೋನ್ ಸೇಲ್ ಇಂದು (ಸೆ. 22 ರಂದು) ನಡೆಯಲಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್‌ ಹಾಗೂ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 5000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 2GB + 32GB ಮತ್ತು 3GB + 32GB ಆಗಿವೆ. ಮೀಡ್‌ನೈಟ್ ಬ್ಲ್ಯಾಕ್, ನೇಚರ್ ಗ್ರೀನ್ ಹಾಗೂ ಸೀ ಬ್ಲೂ ಬಣ್ಣಗಳ ಆಯ್ಕೆ ಇದೆ. ಹಾಗಾದರೇ ರೆಡ್ಮಿ 9A ಫೋನಿನ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.


 • ಡಿಸ್‌ಪ್ಲೇ ರಚನೆ ಮತ್ತು ಡಿಸೈನ್

  ರೆಡ್ಮಿ 9A ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 19.5:9 ಅನುಪಾತವನ್ನು ಪಡೆದಿದೆ.


 • ಪ್ರೊಸೆಸರ್ ಯಾವುದು

  ರೆಡ್ಮಿ 9A ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 2GB RAM + 32GB ಮತ್ತು 3GB RAM + 32GB ವೇರಿಯಂಟ್‌ನ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ.


 • ಕ್ಯಾಮೆರಾ ರಚನೆ

  ರೆಡ್ಮಿ 9A ಸ್ಮಾರ್ಟ್‌ಫೋನ್ ಸಿಂಗಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಹಿಂಬದಿಯಲ್ಲಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.


 • ಬ್ಯಾಟರಿ ಬಲ

  ರೆಡ್ಮಿ 9A ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಸೈಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLET, ವೈ-ಫೈ 802.11 ಎ / ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ.


 • ಬೆಲೆ ಮತ್ತು ಲಭ್ಯತೆ

  ರೆಡ್ಮಿ 9A ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 2GB RAM + 32GB ವೇರಿಯಂಟ್ ದರವು 6,799ರೂ.ಗಳು ಆಗಿದೆ. ಹಾಗೆಯೇ 3GB RAM + 32GB ವೇರಿಯಂಟ್ ಬೆಲೆಯು 7,499ರೂ.ಗಳಾಗಿದೆ. ಇನ್ನು ಈ ಫೋನ್ ಸೇಲ್ ಇಂದು ಅಮೆಜಾನ್ ತಾಣದಲ್ಲಿ ಆರಂಭವಾಗಲಿದೆ. ನೈಟ್‌ ಬ್ಲ್ಯಾಕ್, ಸೀ ಬ್ಲೂ, ನೇಚರ್ ಗ್ರೀನ್ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ.
ಶಿಯೋಮಿ ಸಂಸ್ಥೆಯು ನೂತನ ಅಗ್ಗದ ಬೆಲೆಯ ರೆಡ್ಮಿ 9A ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರನ್ನು ಸೆಳೆದಿದ್ದು, ಆನ್‌ಲೈನ್‌ನಲ್ಲಿ ಮಾರಾಟ ಸಹ ಕಂಡಿದೆ. ಈ ಸ್ಮಾರ್ಟ್‌ಫೋನ್‌ ಇಂದು ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮತ್ತೆ ಸೇಲ್‌ ಶುರುಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ವೇರಿಯಂಟ್ ಬೆಲೆಯು ಜಸ್ಟ್‌ 6,799ರೂ. ಆಗಿದೆ.

 
ಹೆಲ್ತ್