Back
Home » ಇತ್ತೀಚಿನ
ಮಾರುಕಟ್ಟೆಗೆ ಹೊಸ ನೋಕಿಯಾ 3.4 ಸ್ಮಾರ್ಟ್‌ಫೋನ್ ಅನಾವರಣ!
Gizbot | 23rd Sep, 2020 10:10 AM
 • ನೋಕಿಯಾ 3.4

  ಹೌದು, ನೋಕಿಯಾ HMD ಕಂಪನಿಯು ಹೊಸದಾಗಿ ನೋಕಿಯಾ 3.4 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ 4,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ನೋಕಿಯಾ 3.4 ಸ್ಮಾರ್ಟ್‌ಫೋನಿನ ಇನ್ನುಳಿದ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.


 • ಡಿಸ್‌ಪ್ಲೇ ಡಿಸೈನ್

  ನೋಕಿಯಾ 3.4 ಸ್ಮಾರ್ಟ್‌ಫೋನ್‌ 720x1,560 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.39 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದ್ದು, 400 nits ಬ್ರೈಟ್ನೆಸ್‌ ಪಡೆದಿದೆ.


 • ಪ್ರೊಸೆಸರ್‌ ಕಾರ್ಯ

  ನೋಕಿಯಾ 3.4 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಸಫೋರ್ಟ್‌ ಪಡೆದಿದೆ. ಹಾಗೆಯೇ 3GB ಮತ್ತು 4GB RAM ಜೊತೆಗೆ 32GB ಮತ್ತು 64GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳು ನೀಡಲಾಗಿದೆ.


 • ಟ್ರಿಪಲ್ ಕ್ಯಾಮೆರಾ

  ನೋಕಿಯಾ 3.4 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 13ಎಂಪಿ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 5ಎಂಪಿ ಸೆನ್ಸಾರ್‌ ನಲ್ಲಿದ್ದು, ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ ಪಡೆದಿದೆ. ಇನ್ನು ಸೆಲ್ಫಿಗಾಗಿ 8ಎಂಪಿ ಕ್ಯಾಮೆರಾವನ್ನು ನೀಡಲಾಗಿದ್ದು, LED ಫ್ಲ್ಯಾಶ್‌ ಸೌಲಭ್ಯವನ್ನು ಒಳಗೊಂಡಿದೆ.


 • ಬ್ಯಾಟರಿ ಬಾಳಿಕೆ

  ನೋಕಿಯಾ 3.4 ಎಂಟ್ರಿ ಲೆವಲ್ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ. ಇದರೊಂದಿಗೆ 10W ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಇನ್ನು ಈ ಫೋನ್ ಬ್ಲೂಟೂತ್, GPS/ A-GPS, USB Type-C, FM, ಮೈಕ್ರೋ USB, ವೈ ಫೈ ಸೌಲಭ್ಯಗಳನ್ನು ಪಡೆದಿದೆ.


 • ಬೆಲೆ ಎಷ್ಟು?

  ಹೊಸದಾಗಿ ಮಾರುಕಟ್ಟೆಗೆ ಅನಾವರಣಗೊಂಡಿರುವ ನೋಕಿಯಾ 3.4 ಬೆಲೆಯು EUR 159 ಆಗಿದೆ. (ಭಾರತದಲ್ಲಿ ಅಂದಾಜು 13,700ರೂ ಎನ್ನಲಾಗಿದೆ). ಇದೇ ಅಕ್ಟೋಬರ್ ಆರಂಭದ ವೇಳೆಗೆ ಸೇಲ್ ಆರಂಭಿಸಲಿದ್ದು, ಚಾರ್ಕೋಲ್ ಡಸ್ಕ್ ಹಾಗೂ ಫ್ಜಾರ್ಡ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಭಾರತೀಯ ಮಾರುಕಟ್ಟೆಗೆ ಯಾವಾಗ ಎಂಟ್ರಿ ನೀಡಲಿದೆ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.
ಸ್ಮಾರ್ಟ್‌ಫೋನ್ ಪ್ರಿಯರ ಎವರ್‌ಗ್ರೀನ್ ಮೊಬೈಲ್ ಬ್ರ್ಯಾಂಡ್ ನೋಕಿಯಾ ತನ್ನ ಬಹುನಿರೀಕ್ಷಿತ ನೋಕಿಯಾ 2.4 ಮತ್ತು ನೋಕಿಯಾ 3.4 ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿದೆ. ಇವೆರಡರಲ್ಲಿ ನೋಕಿಯಾ 3.4 ಸ್ಮಾರ್ಟ್‌ಫೋನ್‌ ಕಡಿಮೆ ದರವನ್ನು ಹೊಂದಿದ್ದು ಜೊತೆಗೆ ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

 
ಹೆಲ್ತ್