Back
Home » ಇತ್ತೀಚಿನ
ಫ್ಲಿಪ್‌ಕಾರ್ಟ್‌ನಲ್ಲಿ ಇಂದು ರಿಯಲ್‌ಮಿ ನಾರ್ಜೋ 20A ಫೋನ್ ಫಸ್ಟ್‌ ಸೇಲ್‌!
Gizbot | 30th Sep, 2020 08:48 AM
  • ರಿಯಲ್‌ಮಿ

    ಹೌದು, ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಇಂದು ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್ ಆರಂಭಿಸಲಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್‌ 665 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ವಿಶೇಷತೆಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.


  • ಡಿಸ್‌ಪ್ಲೇ ವಿನ್ಯಾಸ

    ರಿಯಲ್‌ ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಸಹ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ.


  • ಪ್ರೊಸೆಸರ್‌ ಬಲ

    ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 3GB RAM + 32GB ಮತ್ತು 4GB RAM + 64GB ಸಂಗ್ರಹ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.


  • ಟ್ರಿಪಲ್ ರಿಯರ್ ಕ್ಯಾಮೆರಾ

    ರಿಯಲ್‌ ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ F /1.8 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ "ರೆಟ್ರೊ" ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.


  • ಬ್ಯಾಟರಿ ಮತ್ತು ಇತರೆ

    ಇನ್ನು ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು ರಿವರ್ಸ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್‌ ಅನ್ನು ಒಳಗೊಂಡಿದೆ.


  • ಬೆಲೆ ಮತ್ತು ಲಭ್ಯತೆ

    ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ 3GB RAM + 32GB ಸಂಗ್ರಹ ಸಾಮರ್ಥ್ಯದ ಆಯ್ಕೆಗೆ ಬೆಲೆ 8,499 ರೂ. ಹಾಗೂ 4GB RAM + 64GB ಸ್ಟೋರೇಜ್ ಆಯ್ಕೆಯ ಬೆಲೆ 9,499. ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ಡಾಟ್ ಕಾಮ್ ಮೂಲಕ ಖರೀದಿಗೆ ಲಭ್ಯವಾಗಲಿವೆ.




ರಿಯಲ್‌ ಮಿ ಸಂಸ್ಥೆಯ ಬಹುನಿರೀಕ್ಷಿತ ರಿಯಲ್‌ ಮಿ Narzo 20 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿದೆ. ಈ ಹೊಸ ಸರಣಿಯು ನಾರ್ಜೋ 20A ಸ್ಮಾರ್ಟ್‌ಫೋನ್‌ ಕಡಿಮೆ ದರಲ್ಲಿ ಹೆಚ್ಚಿನ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಸೆ.30) ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಸೇಲ್ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 8,499ರೂ. ಆಗಿದೆ.

 
ಹೆಲ್ತ್