Back
Home » ಇತ್ತೀಚಿನ
ರೆಡ್ಮಿಯ ಈ ಮೂರು ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಮತ್ತೆ ಏರಿಕೆ!
Gizbot | 2nd Jun, 2020 01:00 PM
 • ಶಿಯೋಮಿ ಕಂಪನಿ

  ಹೌದು, ಶಿಯೋಮಿ ಕಂಪನಿಯು ರೆಡ್ಮಿ ಸರಣಿಯ ರೆಡ್ಮಿ ನೋಟ್ 8, ರೆಡ್ಮಿ 8 ಮತ್ತು ರೆಡ್ಮಿ 8A ಡ್ಯುಯಲ್‌ ಈ ಮೂರು ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ 500ರೂ. ಏರಿಕೆ ಮಾಡಿದೆ. ಸಂಸ್ಥೆಯು ಇತ್ತೀಚಿಗೆ ಜಿಎಸ್‌ಟಿ ಹೆಚ್ಚಳದಿಂದ ತನ್ನ ಫೋನ್‌ಗಳ ದರ ಹೆಚ್ಚಳ ಮಾಡಿತ್ತು. ಅದರ ಬೆನ್ನಲೆ ಈ ಮೂರು ಫೋನ್‌ಗಳ ಬೆಲೆಯಲ್ಲಿ ಏರಿಕೆ ಮಾಡಿತ್ತು. ಆದರೆ ಈಗ ಮತ್ತೆ ಬೆಲೆ ಹೆಚ್ಚಳ ಮಾಡಿದ್ದು, ಗ್ರಾಹಕರಿಗೆ ಅಚ್ಚರಿ ತಂದಿದೆ. ಕಂಪನಿಯ ವೆಬ್‌ಸೈಟ್‌ನಲ್ಲಿ ಹೊಸ ದರಗಳು ಕಾಣಿಸಿಕೊಂಡಿವೆ. ಈ ಮೂರು ಫೋನ್‌ಗಳ ಫೀಚರ್ಸ್‌ ಹಾಗೂ ಬೆಲೆಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.


 • 500ರೂ ಏರಿಕೆ

  ಶಿಯೋಮಿಯ ಜನಪ್ರಿಯ ರೆಡ್ಮಿ ನೋಟ್ 8, ರೆಡ್ಮಿ 8 ಮತ್ತು ರೆಡ್ಮಿ 8A ಡ್ಯುಯಲ್‌ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಸಂಸ್ಥೆಯು 500ರೂ. ಏರಿಕೆ ಮಾಡಿದೆ. ಹೊಸ ದರಗಳ ಅಧಿಕೃತ ವೆಬ್‌ಸೈಟ್‌ನಲ್ಲಿ ಕಾಣಿಸಿದ್ದು, ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಈ ಫೋನ್‌ಗಳು ದರ ಏರಿಕೆ ಕಂಡಿವೆ.


 • ರೆಡ್ಮಿ 8A ಡ್ಯುಯಲ್‌

  ರೆಡ್ಮಿ 8A ಸ್ಮಾರ್ಟ್‌ಫೋನ್ 720 x 1520 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.22 ಇಂಚಿನ ಡಾಟ್‌ ನಾಚ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಸ್ನ್ಯಾಪ್‌ಡ್ರಾಗನ್ 439 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಹಿಂಬದಿಯ ರಿಯರ್ ಕ್ಯಾಮೆರಾವು 13ಎಂಪಿ ಸೆನ್ಸಾರ್ ಪಡೆದಿದ್ದು, ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿದೆ. 5000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದರೊಂದಿಗೆ 18W ಸಾಮರ್ಥ್ಯ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಈ ಫೋನ್ ಬೆಲೆಯು 7,499ರೂ. ಆಗಿದೆ.


 • ರೆಡ್ಮಿ 8 ಫೋನ್

  ರೆಡ್ಮಿ 8 ಫೋನ್ 6.22-ಇಂಚಿನ ಎಚ್‌ಡಿ + ಡಿಸ್ಪ್ಲೇ ಹೊಂದಿದ್ದು, ಸ್ನಾಪ್‌ಡ್ರಾಗನ್ 439 SoC ಪ್ರೊಸೆಸರ್ ಮತ್ತು 512GB ವರೆಗೆ ಮೆಮೊರಿ ಹೆಚ್ಚಿಸಲು ಮೈಕ್ರೊ SD ಕಾರ್ಡ್ ಸ್ಲಾಟ್‌ಗಳನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ. ಈ ಫೋನ್ 12 ಎಂಪಿ ಪ್ರೈಮರಿ ಕ್ಯಾಮೆರಾ ಹಾಗೂ 2 ಎಂಪಿ ಸೆಕೆಂಡರಿ ಡೆಪ್ತ್ ಸೆನ್ಸಾರ್ ಕ್ಯಾಮೆರಾ ಒಳಗೊಂಡಿದೆ. 18W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 5000mAh ಬ್ಯಾಟರಿ ಪಡೆದಿದೆ. 4GB+64GB ವೇರಿಯಂಟ್ ಬೆಲೆಯು 9,499ರೂ. ಆಗಿದೆ.


 • ರೆಡ್ಮಿ ನೋಟ್ 8

  ರೆಡ್ಮಿ ನೋಟ್ 8 ಸ್ಮಾರ್ಟ್‌ಫೋನ್ 6.39-ಇಂಚಿನ ಪೂರ್ಣ-ಎಚ್‌ಡಿ + 1080x2340 ಪಿಕ್ಸೆಲ್‌ಗಳು ಪರದೆ ಹೊಂದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಈ ಫೋನಿನಲ್ಲಿ ನಾಲ್ಕು ಹಿಂದಿನ ಕ್ಯಾಮೆರಾಗಳನ್ನು ನಿಡಲಾಗಿದ್ದು, ಅವುಗಳು 48 ಮೆಗಾಪಿಕ್ಸೆಲ್, 8 ಮೆಗಾಪಿಕ್ಸೆಲ್ ಮತ್ತು ಎರಡು 2 ಮೆಗಾಪಿಕ್ಸೆಲ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 4000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಸಹ ಹೊಂದಿದೆ. ಈ ಫೋನ್ ಬೆಲೆಯು 11,999ರೂ. ಆಗಿದೆ.
ಶಿಯೋಮಿ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಸಂಸ್ಥೆಯು ತನ್ನ ರೆಡ್ಮಿ ನೋಟ್ 8, ರೆಡ್ಮಿ 8 ಮತ್ತು ರೆಡ್ಮಿ 8A ಡ್ಯುಯಲ್‌ ಸ್ಮಾರ್ಟ್‌ಫೋನ್‌ಗಳು ಬೆಲೆಯಲ್ಲಿ ಇತ್ತೀಚಿಗಷ್ಟೆ ಏರಿಕೆ ಮಾಡಿ ಗ್ರಾಹಕರಿಗೆ ಅಚ್ಚರಿ ತಂದಿತ್ತು. ಆದರೆ ಇದೀಗ ಮತ್ತೆ ಈ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಗ್ರಾಹಕರಿಗೆ ಹೊರೆ ಮಾಡಿದೆ.

 
ಹೆಲ್ತ್