Back
Home » ಇತ್ತೀಚಿನ
ಒನ್ ನೇಷನ್, ಒನ್ ರೇಷನ್ ಕಾರ್ಡ್ ಬಗ್ಗೆ ಇಲ್ಲಿದೆ ಮಾಹಿತಿ!
Gizbot | 30th Jun, 2020 05:45 PM
 • ಪ್ರಧಾನಿ

  ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯನ್ನು ನವಂಬರ್ ಅಂತ್ಯದವರೆಗೂ ವಿಸ್ತರಿಸುವುದಾಗಿ ಹೇಳಿದ್ದಾರೆ. ಈ ಯೋಜನೆಯಿಂದಾಗಿ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ಲಭ್ಯವಾಗಲಿದೆ. ಪ್ರತಿ ತಿಂಗಳು 5 ಕೆಜಿ ಅಕ್ಕಿ ಅಥವಾ 5 ಕೆಜಿ ಗೋಧಿ ಮತ್ತು ಒಂದು ಕೆಜಿ ಬೇಳೆ ನೀಡಲಾಗುತ್ತದೆ. ಇದೇ ವೇಳೆ ಶೀಘ್ರದಲ್ಲಿಯೇ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಜಾರಿಯಾಗಲಿದೆ ಎಂದಿದ್ದಾರೆ.


 • ಒನ್ ನೇಷನ್, ಒನ್ ರೇಷನ್ ಕಾರ್ಡ್

  ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಯಲ್ಲಿ ದೇಶದಲ್ಲಿ ಜಾರಿಯಾಗಲಿದೆ. ನಾಗರಿಕರಿಗೆ ಒಂದೇ ಪಡಿತರ ಚೀಟಿ ವ್ಯವಸ್ಥೆ ಇರುತ್ತದೆ. ಪಡಿತರ ಚೀಟಿ ಹೊಂದಿರುವವರು ದೇಶದ ಯಾವುದೇ ಭಾಗದಲ್ಲಿರುವ ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರ ಧಾನ್ಯವನ್ನು ಖರೀದಿಸಲು ಸಾಧ್ಯವಾಗುತ್ತದೆ. ಹಾಗೆಯೇ ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಈ ವ್ಯವಸ್ಥೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎನ್ನಲಾಗಿದೆ.


 • ಒನ್ ನೇಷನ್, ಒನ್ ರೇಷನ್ ಕಾರ್ಡ್ ಪ್ರಯೋಜನ

  * ಬಡವರಿಗೆ ಹೆಚ್ಚಿನ ಲಾಭ ದೊರೆಯಲಿದೆ
  * ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಗೊಂಡವರಿಗೆ ಪಡಿತರ ಪಡೆಯಲು ಅನುಕೂಲವಾಗಲಿದೆ.
  * ನಕಲಿ ಪಡಿತರ ಚೀಟಿಗಳಿಗೆ ಬ್ರೇಕ್‌ ಮಾಡಲು ಸಹಾಯಕ.


 • ಆಧಾರ್ ಕಾರ್ಡ್‌

  * ಎಲ್ಲಾ ಪಡಿತರ ಚೀಟಿಗಳನ್ನು ಆಧಾರ್ ಕಾರ್ಡ್‌ಗೆ ಸಂಪರ್ಕಿಸುವ ಮತ್ತು ಪಾಯಿಂಟ್ ಆಫ್ ಸೇಲ್, ಪಿಒಎಸ್ ಯಂತ್ರದ ಮೂಲಕ ಆಹಾರ ಧಾನ್ಯಗಳನ್ನು ವಿತರಿಸುವ ವ್ಯವಸ್ಥೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ.
  * 85 ರಷ್ಟು ಆಧಾರ್ ಕಾರ್ಡ್‌ಗಳನ್ನು ಪಾಯಿಂಟ್ ಆಫ್ ಸೇಲ್ (ಪಿಒಎಸ್) ಯಂತ್ರಗಳಿಗೆ ಸಂಪರ್ಕಿಸಲಾಗಿದೆ.
  * 22 ರಾಜ್ಯಗಳಲ್ಲಿ 100 ಪ್ರತಿಶತ ಪಿಓಎಸ್ ಯಂತ್ರಗಳನ್ನು ಸ್ಥಾಪಿಸಲಾಗಿದೆ.
ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಯೋಜನೆ 'ಒನ್ ನೇಷನ್, ಒನ್ ರೇಷನ್ ಕಾರ್ಡ್'('One Nation, One Ration Card') ಯೋಜನೆ ಜಾರಿಮಾಡಲಾಗುವುದು. ಮತ್ತು ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಲ್ಲಿ ನವೆಂಬರ್‌ವರೆಗೂ ವಿಸ್ತರಿಸುವುದಾಗಿ ಇಂದು (ಮಂಗಳವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

 
ಹೆಲ್ತ್