Back
Home » ಇತ್ತೀಚಿನ
ಬಿಎಸ್‌ಎನ್‌ಎಲ್‌ನ 499ರೂ. ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ ಈಗ ಮತ್ತೆ ರೀ ಎಂಟ್ರಿ!
Gizbot | 4th Jul, 2020 04:11 PM
 • 499ರೂ. ಬ್ರಾಡ್‌ಬ್ಯಾಂಡ್‌

  ಹೌದು, ಬಿಎಸ್‌ಎನ್‌ಎಲ್‌ ಸಂಸ್ಥೆಯ 499ರೂ. ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್ ಈಗಾಗಲೇ ವಿಸ್ತರಣೆ ಆಗಿದ್ದು, ಈಗ Fibro 100 ಹೆಸರಿನಿಂದ ಆಯ್ದ ಟೆಲಿಕಾಂ ವ್ಯಾಪ್ತಿಗಳಲ್ಲಿ ಮತ್ತೆ ಮುಂದುವರೆಯಲಿದೆ. ಈ ಸೀಮಿತ ಅವಧಿಯ ಯೋಜನೆಯು ಮಾರ್ಚ್ 31ಕ್ಕೆ ಮುಗಿಯುವುದನ್ನು ಸಂಸ್ಥೆಯು ಅನ್ನು ಜೂನ್ 29, 2020ರ ವರೆಗೂ ವಿಸ್ತರಿಸಿತು. ಇದೀಗ ಗ್ರಾಹಕರಿಗೆ ಅನುಕೂಲವಾಗಲೆಂದು ಈ ಅಗ್ಗದ ಬ್ರಾಡ್‌ಬ್ಯಾಂಡ್‌ ಯೋಜನೆಯನ್ನು ಈಗ ಮತ್ತೆ ವಿಸ್ತರಿಸಿದೆ. ಈ ಯೋಜನೆಯ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿರಿ.


 • ಬಿಎಸ್‌ಎನ್‌ಎಲ್‌ 499ರೂ. ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್

  ಬಿಎಸ್‌ಎನ್‌ಎಲ್‌ 499ರೂ.ಗಳ ಭಾರತ ಫೈಬರ್‌ ಪ್ಲ್ಯಾನ್‌ ಒಂದು ಅಗ್ಗದ ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ ಆಗಿದೆ. ಚಂದಾದಾರರಿಗೆ ಈ ಪ್ಲ್ಯಾನ್‌ನಲ್ಲಿ ತಿಂಗಳಿಗೆ 100GB ಡೇಟಾ ಸೌಲಭ್ಯವು FUP ಮಿತಿ ಇರುತ್ತದೆ. 20 Mbps ವೇಗದಲ್ಲಿ ಇಂಟರ್ನೆಟ್ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನವು ಲಭ್ಯವಿದೆ. ನಿಗದಿತ ಡೇಟಾ ಮಿತಿ ಮುಗಿದ ಬಳಿಕ 2 Mbps ವೇಗದಲ್ಲಿ ಇಂಟರ್ನೆಟ್ ಮುಂದುವರೆಯುತ್ತದೆ.


 • ಪ್ಲ್ಯಾನ್ ಲಭ್ಯತೆ

  ಬಿಎಸ್‌ಎನ್‌ಎಲ್ 499 ರೂ. ಬ್ರಾಡ್‌ಬ್ಯಾಂಡ್‌ ಯೋಜನೆಯು ಪ್ರಸ್ತುತ ಛತ್ತೀಸಗಡ್, ದಮನ್ ಮತ್ತು ಡಿಯು, ದಾದ್ರಾ ಮತ್ತು ನಗರ ಹವೇಲಿ, ಗುಜರಾತ್, ಗೋವಾ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಲಭ್ಯ ಇದೆ. ಹಾಗೆಯೇ ಬಿಎಸ್‌ಎನ್‌ಎಲ್‌ನ ಇತರೆ ಎಂಟ್ರಿ ಲೆವೆಲ್ ಬ್ರಾಡ್‌ಬ್ಯಾಂಡ್‌ ಯೋಜನೆಗಳ ಬಗ್ಗೆ ಮುಂದೆ ಓದಿರಿ.


 • ಬಿಎಸ್‌ಎನ್‌ಎಲ್‌-777ರೂ.ಪ್ಲ್ಯಾನ್

  ಬಿಎಸ್‌ಎನ್‌ಎಲ್‌ ಸಂಸ್ಥೆಯ ಈ 777ರೂ.ಪ್ಲ್ಯಾನ್‌ ಒಂದು ತಿಂಗಳಿನಲ್ಲಿ 500GB ಡೇಟಾ ಸಿಗಲಿದೆ. ಡೇಟಾ ವೇಗದ ಮಿತಿಯು 50 Mbps ಸಾಮರ್ಥ್ಯದಲ್ಲಿರಲಿದ್ದು, ತಿಂಗಳ ನಿಗದಿತ ಡೇಟಾ ಬಳಕೆ ಮುಗಿದ ಬಳಿಕ 2Mbps ವೇಗದಲ್ಲಿ ಡೇಟಾ ಸೌಲಭ್ಯ ಮುಂದವರೆಯಲಿದೆ. ಈ ಪ್ಲ್ಯಾನಿನಲ್ಲಿಯೂ ಸಹ ಹೆಚ್ಚುವರಿಯಾಗಿ ಒಂದು ವರ್ಷದ ಅಮೆಜಾನ್ ಪ್ರೈಮ್ ಸದಸ್ಯತ್ವ ಸಹ ದೊರೆಯಲಿದೆ.


 • ಬಿಎಸ್‌ಎನ್‌ಎಲ್‌-849ರೂ.ಪ್ಲ್ಯಾನ್

  ಬಿಎಸ್‌ಎನ್‌ಎಲ್‌ನ ಈ ಬ್ರಾಡ್‌ಬಾಂಡ್‌ ಪ್ಲ್ಯಾನಿನಲ್ಲಿ ಒಂದು ತಿಂಗಳಿಗೆ ಒಟ್ಟು 600GB ಡೇಟಾ ಮಿತಿಯನ್ನು ನೀಡಲಾಗಿದ್ದು, ಯಾವುದೇ ದೈನಂದಿನ FUP ಮಿತಿ ಇರುವುದಿಲ್ಲ. ಈ ಪ್ಲ್ಯಾನ್‌ನಲ್ಲಿ ಡೇಟಾ ವೇಗವು 50 Mbps ಸಾಮರ್ಥ್ಯದಲ್ಲಿರಲಿದ್ದು, ಇತರೆ ನೆಟವರ್ಕ್‌ಗಳಿಗೆ ಅನಿಯಮಿತ ಉಚಿತ ಕರೆಗಳ ಸೌಲಬ್ಯವನ್ನು ಪಡೆದಿದೆ. ಇದರೊಂದಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಸದಸ್ಯತ್ವ ಸಹ ದೊರೆಯಲಿದೆ.
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಹಲವು ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸಂಸ್ಥೆಯು ಲಾಕ್‌ಡೌನ್ ವೇಳೆ ತನ್ನ ಚಂದಾದಾರರಿಗೆ ಆಕರ್ಷಕ ಯೋಜನೆಗಳನ್ನು ನೀಡಿದೆ. ಬಿಎಸ್‌ಎನ್‌ಎಲ್‌ ಕಡಿಮೆ ದರದಿಂದ ದುಬಾರಿ ಬೆಲೆಯ ವರೆಗೂ ಭಿನ್ನ ಡೇಟಾ ಪ್ರಯೋಜನಗಳ ಪ್ಲ್ಯಾನ್‌ ಹೊಂದಿದೆ. ಅವುಗಳಲ್ಲಿ ಜನಪ್ರಿಯ ಬಿಎಸ್‌ಎನ್‌ಎಲ್‌ 499ರೂ. ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್ ಅನ್ನು ಮರಳಿ ಪರಿಚಯಿಸಿದೆ.

 
ಹೆಲ್ತ್