Back
Home » ಇತ್ತೀಚಿನ
ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್‌ ಬೆಲೆ ಏರಿಕೆ!
Gizbot | 8th Jul, 2020 05:55 PM
 • ಮೊಟೊರೊಲಾ

  ಹೌದು, ಮೊಟೊರೊಲಾ ಸಂಸ್ಥೆಯ ಹೊಸ ಒನ್ ಫ್ಯೂಶನ್ ಪ್ಲಸ್‌ ಫೋನ್ ಬೆಲೆಯಲ್ಲಿ ಈಗ 500ರೂ. ಹೆಚ್ಚಳ ಮಾಡಿದೆ. ಹೀಗಾಗಿ 16,999 ರೂ. ಪ್ರೈಸ್‌ಟ್ಯಾಗ್‌ ಹೊಂದಿದ್ದ ಈ ಫೋನ್ ಇದೀಗ 17,499ರೂ. ಬೆಲೆಯನ್ನು ಪಡೆದಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಹಾಗೂ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪ್ರಮುಖ ಹೈಲೈಟ್ಸ್‌ಗಳಾಗಿವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ತಿಳಿಯಲು ಮುಂದೆ ಓದಿರಿ.


 • ಡಿಸ್‌ಪ್ಲೇ ಮತ್ತು ಡಿಸೈನ್

  ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ಹೆಚ್‌ಡಿ + ಡಿಸ್‌ಪ್ಲೇ ಆಗಿದ್ದು, ಇದು 19.5: 9 ರಚನೆಯ ಅನುಪಾತವನ್ನ ಹೊಂದಿದೆ. ಅಲ್ಲದೆ 395PPI ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ.


 • ಪ್ರೊಸೆಸರ್‌ ಬಲ

  ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 730G SoC ಪ್ರೊಸೆಸರ್ ಅನ್ನು ಹೊಂದಿದ್ದು, ಸ್ಟಾಕ್ ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ. ಇದಲ್ಲದೆ ಹೈಬ್ರಿಡ್ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1ಟಿಬಿ ವರೆಗೆ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ.


 • ಕ್ಯಾಮೆರಾ ರಚನೆ

  ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ ಪಾಪ್-ಅಪ್ ಕ್ಯಾಮೆರಾ ಮಾಡ್ಯೂಲ್ ಹೊಂದಿದ್ದು 16 ಮೆಗಾಪಿಕ್ಸೆಲ್ ಸೆಲ್ಫಿ ಸೆನ್ಸಾರ್‌ ಅನ್ನು ಹೊಂದಿದೆ.


 • ಬ್ಯಾಟರಿ ಮತ್ತು ಇತರೆ

  ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ V5, ವೈ-ಫೈ, GPS, 3.5mm ಆಡಿಯೊ ಜ್ಯಾಕ್, USB ಟೈಪ್-ಸಿ ಪೋರ್ಟ್, ಮತ್ತು ಡ್ಯುಯಲ್ 4G VOLTE ಅನ್ನು ಬೆಂಬಲಿಸಲಿದೆ.
ಮೊಟೊರೊಲಾ ಮೊಬೈಲ್ ಸಂಸ್ಥೆಯ ಇತ್ತೀಚಿನ ಸ್ಮಾರ್ಟ್‌ಫೋನ್‌ಗಳು ಹಲವು ಆಕರ್ಷಕ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆದಿವೆ. ಅವುಗಳಲ್ಲಿ ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಹೆಚ್ಚು ಟ್ರೆಂಡ್‌ ಆಗಿ ಕಾಣಿಸಿಕೊಂಡಿದೆ. ಆದರೆ ಇದೀಗ ಮೊಟೊರೊಲಾ ಒನ್ ಫ್ಯೂಶನ್ ಪ್ಲಸ್‌ ಫೋನ್‌ ಬೆಲೆ ಏರಿಕೆ ಕಂಡಿದ್ದು, ಗ್ರಾಹಕರಿಗೆ ಅಚ್ಚರಿ ತಂದಿದೆ.

 
ಹೆಲ್ತ್