Back
Home » ಇತ್ತೀಚಿನ
12,000.ರೂ, ಒಳಗೆ ಲಭ್ಯವಾಗುವ ಚೀನೀ ಬ್ರ್ಯಾಂಡ್‌ ಅಲ್ಲದ ಟಾಪ್ 5 ಸ್ಮಾರ್ಟ್‌ಫೋನ್‌ಗಳು!
Gizbot | 10th Jul, 2020 05:15 PM
 • ಬ್ರಾಂಡ್‌

  ಹೌದು, ಚೀನಾ ಬ್ರಾಂಡ್‌ ಅಲ್ಲದ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಲಭ್ಯವಿದ್ದು, ಗ್ರಾಹಕರಿಗೆ ಕೈ ಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿವೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಚೀನಾ ಬ್ರಾಂಡ್‌ ಅಲ್ಲದ ಸ್ಯಾಮ್‌ಸಂಗ್, ನೋಕಿಯಾ, ಲಾವಾ, ಮೈಕ್ರೋಮ್ಯಾಕ್ಸ್ ಮತ್ತು ಇನ್ನಿತರ ಬ್ರಾಂಡ್‌ಗಳು ಉತ್ತಮ ಜನಪ್ರಿಯತೆಯನ್ನ ಹೊಂದಿವೆ. ಅವುಗಳಲ್ಲಿ 15,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಚೀನಾ ಬ್ರ್ಯಾಂಡ್‌ ಅಲ್ಲದ ಸ್ಮಾರ್ಟ್‌ಫೋನ್‌ ಆಯ್ಕೆಗಲ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡ್ತೀವಿ ಈ ಲೇಖನವನ್ನ ಓದಿರಿ.


 • ಲಾವಾ Z71 ಸ್ಮಾರ್ಟ್‌ಫೋನ್‌

  ಭಾರತದಲ್ಲಿ ಲಭ್ಯವಾಗುವ ಚೀನಿ ಬ್ರಾಂಡ್‌ ಅಲ್ಲದ ಸ್ಮಾರ್ಟ್‌ಫೋನ್‌ಗಳಲ್ಲಿ ಲಾವಾ Z71 ಸ್ಮಾರ್ಟ್‌ಫೋನ್‌ ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5.7-ಇಂಚಿನ HD + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ MT7 6761 2GHz ಕ್ವಾಡ್-ಕೋರ್ ಪ್ರೊಸೆಸರ್ ವೇಗವನ್ನು ಹೊಂದಿದೆ. ಹಾಗೇಯೇ 2GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಬಹುದಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಅಲ್ಲದೆ 5-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 3200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6,998 ರೂ, ಬೆಲೆಯನ್ನು ಹೊಂದಿದೆ.


 • ಮೈಕ್ರೋಮ್ಯಾಕ್ಸ್ ಇನ್ಫಿನಿಟಿ N12 ಸ್ಮಾರ್ಟ್‌ಫೋನ್‌

  ಮೈಕ್ರೋಮ್ಯಾಕ್ಸ್‌ನ ಇನ್ಫಿನಿಟಿ N12 ಸ್ಮಾರ್ಟ್‌ಫೋನ್‌ 6.19 ಇಂಚಿನ ಎಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 18.9:9 ರಚನೆಯ ಅನುಪಾತವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ P22 ಪ್ರೊಸೆಸರ್ ಹೊಂದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 6,699 ರೂ, ಬೆಲೆಯನ್ನ ಹೊಂದಿದೆ


 • XoLo Zx ಸ್ಮಾರ್ಟ್‌ಫೋನ್‌

  XoLo Zx ಸ್ಮಾರ್ಟ್‌ಫೋನ್‌ ಮತ್ತೊಂದು ಭಾರತೀಯ ಸ್ಮಾರ್ಟ್‌ಫೋನ್ ಆಗಿದ್ದು, ಇದು ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಹೊಂದಿರುವ 6.22-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌2GHz ಮೀಡಿಯಾ ಟೆಕ್ ಹಿಲಿಯೊ P22 ಪ್ರೊಸೆಸರ್ ಅನ್ನು ಬೆಂಬಲಿಸುತ್ತದೆ. ಇದು 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಮತ್ತು 13 ಮೆಗಾಪಿಕ್ಸೆಲ್ + 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಬೆಲೆ 10,499 ರೂ, ಆಗಿದೆ.


 • ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌

  ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ 5.7-ಇಂಚಿನ HD + ರೆಸಲ್ಯೂಶನ್ ಸಾಮರ್ಥ್ಯದ TFT LCD ಡಿಸ್‌ಪ್ಲೇಯನ್ನು ಹೊಂದಿದೆ. 2GHz ಕ್ಲಾಕ್ ಸ್ಪೀಡ್ ಅಕ್ಟಾ-ಕೋರ್‌ ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದರ ಬೆಲೆ 8,999 ರೂ,ಆಗಿದೆ.


 • ನೋಕಿಯಾ 2.3 ಸ್ಮಾರ್ಟ್‌ಫೋನ್‌

  ನೋಕಿಯಾ 2.3 ಸ್ಮಾರ್ಟ್‌ಫೋನ್‌ ಕೂಡ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದು 19:9 ರಚನೆಯ ಅನುಪಾತ ಹೊಂದಿರುವ 6.2-ಇಂಚಿನ ಎಚ್‌ಡಿ + ರೆಸಲ್ಯೂಶನ್ ಸಾಮರ್ಥ್ಯದ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು ಮೀಡಿಯಾ ಟೆಕ್ ಹಿಲಿಯೊ ಎ22 ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಸಹ ಹೊಂದಿದೆ.ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಅಲ್ಲದೆ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 8,999 ರೂ, ಬೆಲೆಯನ್ನ ಹೊಂದಿದೆ.
ಟೆಕ್‌ ವಲಯದಲ್ಲಿ ಸಾಕಷ್ಟು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಸದ್ಯ ಭಾರತದ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ಚೀನೀಯೇತರ ಉತ್ಪನ್ನಗಳನ್ನು ಬಾಯ್ಕಾಟ್‌ ಮಾಡಬೇಕೆಂದು ಅಭಿಯಾನ ಕುಡ ಜೋರಾಗಿದೆ. ಇದಕ್ಕೆ ಸಂಬಂದಿಸಿದಂತೆ ಸೊಶೀಯಲ್‌ ಮಿಡಿಯಾದಲ್ಲಿ ಕ್ಯಾಂಪೆನ್‌ ಕೂಡ ನಡೆಯುತ್ತಿದೆ. ಆದರೆ ಭಾರತೀಯ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಚೀನಾದ ಬ್ರಾಂಡ್‌ಗಳಾದ ಶಿಯೋಮಿ, ರಿಯಲ್‌ಮಿ, ವಿವೊ, ಒಪ್ಪೊ ಬ್ರಾಂಡ್ ಸ್ಮಾರ್ಟ್‌ಫೋನ್‌ಗಳು ಪ್ರಾಬಲ್ಯ ಸಾಧಿಸಿವೆ. ಹಾಗಂತ ನೀವು ಬೇಸರಿಸಿಕೊಳ್ಳುವ ಅಗತ್ಯವಿಲ್ಲ. ಚೀನಿ ಬ್ರಾಂಡ್‌ಗಳನ್ನ ಹೊರತುಪಡಿಸಿ ಇತರೆ ಸ್ಮಾರ್ಟ್‌ಫೋನ್‌ ಬ್ರಾಂಡ್‌ಗಳು ಕೂಡ ಲಭ್ಯವಿವೆ.

 
ಹೆಲ್ತ್