Back
Home » ಇತ್ತೀಚಿನ
ಟೆಕ್ನೋ ಸ್ಪಾರ್ಕ್‌ 5 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌! ವಿಶೇಷ ಬ್ಯಾಟರಿ ಸಾಮರ್ಥ್ಯ!
Gizbot | 13th Jul, 2020 07:11 PM
 • ಟೆಕ್ನೋ ಸ್ಪಾರ್ಕ್

  ಹೌದು, ಟೆಕ್ನೋ ಸ್ಪಾರ್ಕ್‌ ಕಂಪೆನಿ ತನ್ನ ಹೊಸ ಟೆಕ್ನೊ ಸ್ಪಾರ್ಕ್‌ 5 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ನಾಲ್ಕು ವಿಭಿನ್ನ ಕಲರ್‌ ಆಯ್ಕೆಗಳಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲ ಫೀಚರ್ಸ್‌ಗಳನ್ನ ಒಳಗೊಂಡಿದೆ. ಇದರ ವಿಶೇಷತೆ ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.


 • ಡಿಸ್‌ಪ್ಲೇ

  ಟೆಕ್ನೋ ಸ್ಪಾರ್ಕ್ 5 ಪ್ರೊ ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಪಂಚ್‌ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದ್ದು, 20:9 ರಚನೆಯ ಅನುಪಾತ ಮತ್ತು ಸ್ಕ್ರೀನ್-ಟು-ಬಾಡಿ ನಡುವಿನ ಅನುಪಾತ 90.2% ಹೊಂದಿದೆ.


 • ಪ್ರೊಸೆಸರ್‌

  ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಮೀಡಿಯಾ ಟೆಕ್‌ ಹಿಲಿಯೋ A25 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಇದು ಹಾಯ್ಸ್ ಆಧಾರಿತ ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.


 • ಕ್ಯಾಮೆರಾ ವಿನ್ಯಾಸ

  ಟೆಕ್ನೋ ಸ್ಪಾರ್ಕ್ 5 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ 120 ಡಿಗ್ರಿ ಫೀಲ್ಡ್ ವ್ಯೂ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ಮತ್ತು ನಾಲ್ಕನೇ ಕ್ಯಾಮೆರಾ AI ಶೂಟರ್ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಕ್ವಾಡ್ ಕ್ಯಾಮೆರಾ ಎಲ್ಇಡಿ ಫ್ಲ್ಯಾಷ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಡ್ಯುಯಲ್ ಎಲ್ಇಡಿ ಫ್ಲ್ಯಾಷ್‌ ಅನ್ನು ಬೆಂಬಲಿಸುವ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.


 • ಬ್ಯಾಟರಿ ಮತ್ತು ಇತರೆ

  ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಅಲ್ಲದೆ ಇದು 17 ಗಂಟೆಗಳ ವೀಡಿಯೊ ಪ್ಲೇಬ್ಯಾಕ್, 115 ಗಂಟೆಗಳ ಮ್ಯೂಸಿಕ್‌, 13 ಗಂಟೆಗಳ ಗೇಮಿಂಗ್‌, 18 ಗಂಟೆಗಳ ವೆಬ್ ಬ್ರೌಸಿಂಗ್, 31 ಗಂಟೆಗಳ ಕಾಲ್‌ ಟೈಂ, ಮತ್ತು 480 ಗಂಟೆಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, Wi-Fi ಮತ್ತು ಬ್ಲೂಟೂತ್, GPS ಮತ್ತು OTG ಯನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್‌ ಅನ್ನು ಸಹ ಹೊಂದಿದೆ.


 • ಬೆಲೆ ಮತ್ತು ಲಭ್ಯತೆ

  ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 5 ಪ್ರೊ ಬೆಲೆ 10,499 ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಐಸ್ ಜೇಡೈಟ್, ಸ್ಪಾರ್ಕ್ ಆರೆಂಜ್, ಸೀಬೆಡ್ ಬ್ಲೂ ಮತ್ತು ಕ್ಲೌಡ್ ವೈಟ್ ನಾಲ್ಕು ಗ್ರೇಡಿಯಂಟ್ ಕಲರ್‌ ಆಯ್ಕೆಗಳಲ್ಲಿ ಬರುತ್ತದೆ.
ಟೆಕ್ನೋ ಸ್ಪಾರ್ಕ್ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೊನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಟೆಕ್ನೋ ಸ್ಪಾರ್ಕ್‌ ಸದ್ಯ ಇದೀಗ ಭಾರತದಲ್ಲಿ ತನ್ನ ಟೆಕ್ನೋ ಸ್ಪಾರ್ಕ್‌ 5 ಪ್ರೊ ಸ್ಮಾರ್ಟ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ 25SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದು ಕಳೆದ ಮೇ ತಿಂಗಳಲ್ಲಿ ಬಿಡುಗಡೆಯಾದ ಟೆಕ್ನೋ ಸ್ಪಾರ್ಕ್ 5 ರ ಪ್ರೀಮಿಯಂ ರೂಪಾಂತರವಾಗಿದೆ.

 
ಹೆಲ್ತ್