Back
Home » ಇತ್ತೀಚಿನ
IQoo u1 ಸ್ಮಾರ್ಟ್‌ಫೋನ್‌ ಬಿಡುಗಡೆ!..120Hz ಡಿಸ್‌ಪ್ಲೇ ವಿಶೇಷ!
Gizbot | 16th Jul, 2020 05:54 PM
 • ಐಕ್ಯೂ

  ಹೌದು, ಐಕ್ಯೂ ಸ್ಮಾರ್ಟ್‌ಫೋನ್‌ ಕಂಪೆನಿ ಐಕ್ಯೂ ಯು1 ಸ್ಮಾರ್ಟ್‌ಫೋನ್‌‌ ಬಿಡುಗಡೆ ಮಾಡಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 720G ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.


 • ಡಿಸ್‌ಪ್ಲೇ

  ಐಕ್ಯೂಒ U1ಸ್ಮಾರ್ಟ್‌ಫೋನ್‌ 2340 x 1080 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇಯು 19.5:9 ರಚನೆಯ ಅನುಪಾತ ಹೊಂದಿದೆ. ಅಲ್ಲದೆ 90.72% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.


 • ಪ್ರೊಸೆಸರ್‌

  ಐಕ್ಯೂ ಯು1 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 720G ಪ್ರೊಸೆಸರ್ ಹೊಂದಿದ್ದು, ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 64GB, ಹಾಗೂ 8GB RAM ಮತ್ತು 128GB ಇಂಟರ್ ಸ್ಟೊರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ.


 • ಕ್ಯಾಮೆರಾ ವಿನ್ಯಾಸ

  ಈ ಸ್ಮಾರ್ಟ್‌ಫೊನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೆ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.


 • ಬ್ಯಾಟರಿ ಮತ್ತು ಇತರೆ

  ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಗೇಮ್ ಸ್ಪೇಸ್, ​​ಮಲ್ಟಿ-ಟರ್ಬೊ ಮತ್ತು ಬ್ಲೂಟೂತ್ 5.1 ಅನ್ನು ಬೆಂಬಲಿಸುತ್ತದೆ. ಅಲ್ಲದೆ ಇದು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ರೀಡರ್ ಅನ್ನು ಸಹ ಒಳಗೊಂಡಿದೆ.


 • ಬೆಲೆ ಮತ್ತು ಲಭ್ಯತೆ

  ಐಕ್ಯೂಒU1 ಸ್ಮಾರ್ಟ್‌ಫೋನ್‌ 6GB RAM ಮತ್ತು 64GB ಸ್ಟೋರೇಜ್ ಮೂಲ ಮಾದರಿಯ ಬೆಲೆ RMB1,198 (ಅಂದಾಜು 12,870 ರೂ.). 6GB RAM + 128GB ರೂಪಾಂತರದ ಬೆಲೆ RMB1,398 (ಸುಮಾರು 15,020 ರೂ.) ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 1 ಜುಲೈ 23 ರಿಂದ ಮಾರಾಟವಾಗಲಿದೆ.
ಟೆಕ್‌ ವಲಯದಲ್ಲಿ ನವೀನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಐಕ್ಯೂಒ ತನ್ನ ಐಕ್ಯೂಒ ಯು1 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 120Hz ಸಾಮರ್ಥ್ಯದ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊ0ದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ.

 
ಹೆಲ್ತ್