Back
Home » ಸುದ್ದಿ
ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್: ನಾಲ್ವರು ಉಗ್ರರ ಹತ್ಯೆ
Oneindia | 12th Aug, 2020 01:51 PM

ಸುಕ್ಮಾ, ಆಗಸ್ಟ್ 12: ಛತ್ತೀಸ್‌ಗಢದಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹತ್ಯೆಗೈದಿದೆ.

ಮೂಲಗಳ ಪ್ರಕಾರ ಫುಲಂಪಾರ್ ಗ್ರಾಮದಲ್ಲಿ ಸೇನಾಪಡೆಗಳು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅಲ್ಲಿಯೇ ಅಡಗಿ ಕುಳಿತಿದ್ದ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ.

ಪುಲ್ವಾಮಾ ಎನ್‌ಕೌಂಟರ್: ಓರ್ವ ಉಗ್ರನ ಹತ್ಯೆ, ಯೋಧ ಹುತಾತ್ಮ

ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ. ಈ ವೇಳೆ ನಾಲ್ಕು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಹಾಗೆಯೇ ಹಲವು ನಕ್ಸಲರು ಪರಾರಿಯಾಗಿದ್ದಾರೆ.

ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯ ಹೊರವಲಯದ ಜಗರಗುಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದ್ದು, ಘಟನೆಯಲ್ಲಿ ನಾಲ್ಕು ಮಂದಿ ನಕ್ಸಲರು ಹತರಾಗಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಪಡೆಗಳ ಸಿಬ್ಬಂದಿಗಳು ತೊಡಗಿದ್ದರು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಬಸ್ತಾರ್ ) ಸುಂದರ್ ರಾಜ್ ಪಿ ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ನಾಲ್ಕು ಪುರುಷ ನಕ್ಸಲರ ಮೃತದೇಹಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ 303 ರೈಫಲ್ ಗಳನ್ನು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂತೆಯೇ ಶೋಧ ಕಾರ್ಯ ಕೂಡ ಮುಂದುವರೆದಿದೆ.

ಇಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕೂಡ ಎನ್‌ಕೌಂಟರ್‌ ನಡೆದಿದ್ದು, ಓರ್ವ ಯೋಧ ಹುತಾತ್ಮರಾಗಿದ್ದು, ಓರ್ವ ಉಗ್ರನನ್ನು ಸದೆಬಡಿಯಲಾಗಿದೆ.

 
ಹೆಲ್ತ್